ಪಿಡಿಒ ಮೇಲೆ ಹಲ್ಲೆಗೆ ಖಂಡನೆ

ಗೌರಿಬಿದನೂರು: ತಾಲೂಕಿನ ನಾಮಗೊಂಡ್ಲು ಗ್ರಾಪಂ ಪಿಡಿಒ ಕೆ.ಮೀನಾಕ್ಷಿ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತಾಪಂ ಇಒ ಗಿರಿಜಾ ಶಂಕರ್​ಗೆ ಗುರುವಾರ ಮನವಿ ಸಲ್ಲಿಸಲಾಯಿತು.

ನಾಮಗೊಂಡ್ಲು ಸರ್ಕಾರಿ ಶಾಲೆ ಮತ್ತು ಅಸ್ಪತ್ರೆ ಆವರಣಕ್ಕೆ ಹೊಂದಿಕೊಂಡಿರುವ ಅನಧಿಕೃತ ಪೆಟ್ಟಿ ಅಂಗಡಿಗಳನ್ನು ತೆರವುಗೊಳಿಸಿದ ವಿಚಾರವಾಗಿ ರತ್ನಮ್ಮ ಕೋಂ.ಅಂಜಿನಪ್ಪ ಎಂಬವರು ಪಿಡಿಒ ಮೀನಾಕ್ಷಿ ಅವರನ್ನು ನಿಂದಿಸಿ, ಹಲ್ಲೆ ಮಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷ ಆರ್.ಎನ್.ಬಾಲಕೃಷ್ಣ ಆರೋಪಿಸಿದರು.

ಮಹಿಳಾ ಆಧಿಕಾರಿ ಎಂಬುದನ್ನೂ ಲೆಕ್ಕಿಸದೆ ಮುನಿವೆಂಕಟಪ್ಪ, ನರಸಿಹಮೂರ್ತಿ, ನರಸಿಂಮೂರ್ತಿ, ಸುರೇಶ್, ಶ್ರೀನಿವಾಸ್ ಎಂಬವರು ಪಿಡಿಒ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪ್ರಾಣ ಬೆದರಿಕೆ ಹಾಕಿರುವ ದೃಶ್ಯ ಗ್ರಾಪಂ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದರು.

ಇಂತಹ ಘಟನೆಗಳು ಮರುಕಳಿಸುತ್ತಲೇ ಇದ್ದು, ನೌಕರರು ಭಯದಲ್ಲೇ ಕರ್ತವ್ಯ ನಿರ್ವಹಿಸುವಂತಾಗಿದೆ. ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್​ಗೂ ಮನವಿ ಮಾಡಿದರು.

ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ.ಆರ್.ಶ್ರೀನಿವಾಸ್, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಕಾರ್ಯದರ್ಶಿ ಸಿದ್ದರಾಮಯ್ಯ, ಖಜಾಂಚಿ ಬಸವರಾಜ್, ತಾಲೂಕಿನ ಎಲ್ಲ ಗ್ರಾಪಂಗಳ ಪಿಡಿಒಗಳು ಇದ್ದರು.

 

Leave a Reply

Your email address will not be published. Required fields are marked *