20.8 C
Bangalore
Sunday, December 8, 2019

ಪಿಯು ಕಾಲೇಜ್ ಕಟ್ಟಡ ನೆಲಸಮ ಶೀಘ್ರ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಮುಂಡಗೋಡ: ಶಿಥಿಲಾವಸ್ಥೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜ್ ಕಟ್ಟಡವನ್ನು ವಾರದೊಳಗೆ ನೆಲಸಮಗೊಳಿಸಲಾಗುವುದು ಎಂದು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಪಟ್ಟಣದ ತಾಪಂ ಸಭಾಭವನದಲ್ಲಿ ಗುರುವಾರ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಟ್ಟಡ ನೆಲಸಮಗೊಳಿಸುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಬಿಇಒ ಡಿ.ಎಂ. ಬಸವರಾಜಪ್ಪ ಮತ್ತು ಕಾಲೇಜ್ ಪ್ರಾಂಶುಪಾಲೆ ತನುಜಾ ನಾಯ್ಕ ಅವರಿಗೆ ಸೂಚಿಸಿದರು.

ಹೆಸ್ಕಾಂನಲ್ಲಿ ಸಿಬ್ಬಂದಿ ಕೊರತೆ ಕಾರಣ ಲೈನ್ ಕ್ಲೀನ್ ಮಾಡಲು ಅನುದಾನ ನೀಡಿ ಸಹಕರಿಸುವಂತೆ ಗ್ರಾಪಂ ಪಿಡಿಒ ಮತ್ತು ಇಒಗೆ ಸೂಚಿಸಿದರು. ಅರಣ್ಯ ಅತಿಕ್ರಮಣ ಅರ್ಜಿ ಕುರಿತು ವಿವರಿಸಿದ ಸಮಾಜ ಕಲ್ಯಾಣ ಅಧಿಕಾರಿ ಗೋಪಾಲಕೃಷ್ಣ, ‘ಸರ್ಕಾರದ ನಿರ್ದೇಶನದಂತೆ ಜೂ. 7ರಿಂದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ತಾಪಂ ಹೊಸ ಸಭಾಭವನವನ್ನು ಶಾಸಕರು ಉದ್ಘಾಟಿಸಿದರು. ನಂತರ ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಬಾಂಡ್ ವಿತರಿಸಲಾಯಿತು.

ತಾಪಂ ಇಒ ಪ್ರವೀಣಕುಮಾರ ಕಟ್ಟಿ, ತಹಸೀಲ್ದಾರ್ ಶಂಕರ ಗೌಡಿ, ತಾಪಂ ಅಧ್ಯಕ್ಷೆ ದಾಕ್ಷಾಯಣಿ ಸುರಗಿಮಠ, ಉಪಾಧ್ಯಕ್ಷ ಕೃಷ್ಣಮೂರ್ತಿ ನಾಡಿಗ, ಜಿ.ಪಂ. ಸದಸ್ಯರಾದ ರವಿಗೌಡ ಪಾಟೀಲ, ಎಲ್.ಟಿ. ಪಾಟೀಲ, ಜಯಮ್ಮ ಹಿರೇಹಳ್ಳಿ, ತೋಟಗಾರಿಕೆ ಇಲಾಖೆ ಅಧಿಕಾರಿ ಡಿ.ನಾಗಾರ್ಜುನಗೌಡ, ತಾಪಂ ಸದಸ್ಯರು, ಅಧಿಕಾರಿಗಳು ಇದ್ದರು.

ಶಾಸಕರ ಸಲಹೆ

ಅಂಗನವಾಡಿ ಮಕ್ಕಳಿಗೆ ಅಡುಗೆ ಮತ್ತು ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಭಾರಿ ಸಿಡಿಪಿಒ ದೀಪಾ ಬಂಗೇರ ಅವರಿಗೆ, ರೈತರಿಗೆ ಅನುಕೂಲವಾಗುವಂತೆ ಗ್ರಾಪಂಗಳಲ್ಲಿ ತಾಡಪತ್ರಿ ವಿತರಿಸುವಂತೆ ಕೃಷಿ ಅಧಿಕಾರಿ ಎಂ.ಎಸ್. ಕುಲಕರ್ಣಿ ಹಾಗೂ ಕುಡಿಯುವ ನೀರಿನ ಕುರಿತು ವಿಶೇಷ ಕಾಳಜಿ ವಹಿಸುವಂತೆ ಅರಣ್ಯಾಧಿಕಾರಿ ಮತ್ತು ಪಿಡಿಒಗಳಿಗೆ ಶಾಸಕರು ಸಲಹೆ ನೀಡಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...