ಸಿನಿಮಾ

ಪುಟ್ಟಪ್ಪ ವೃತ್ತದಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

ಸೋಮವಾರಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಸರ್ಕಲ್‌ನಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್, ನಗರ ಘಟಕದ ಅಧ್ಯಕ್ಷ ಎಚ್.ಎ. ನಾಗರಾಜು, ಪಕ್ಷದ ಪ್ರಮುಖರಾದ ಈಶ್ವರಚಂದ್ರ ವಿದ್ಯಾಸಾಗರ್, ಎಚ್.ಸಿ. ನಾಗೇಶ್, ಮಂಜುನಾಥ್, ಇಂದ್ರೇಶ್, ಕೆ.ಎ. ಪ್ರಕಾಶ್, ಕುಸುಬೂರು ಉಲ್ಲಾಸ್, ಶಶಿಕಲಾ ಚೌಟ, ಮೀನಾ ಕುಮಾರಿ, ಆನಂದ ಸೇರಿದಂತೆ ಹಲವರು ಇದ್ದರು.

Latest Posts

ಲೈಫ್‌ಸ್ಟೈಲ್