More

  ಪುನರ್ವಸತಿ ಸ್ಥಳಕ್ಕೆ ಶಾಸಕ ಶಾಮನೂರು ಭೇಟಿ

  ದಾವಣಗೆರೆ : ನಗರದ ಪಿ.ಬಿ ರಸ್ತೆಯಿಂದ ಮಾಗಾನಹಳ್ಳಿ ರಸ್ತೆಯವರೆಗೆ ರಿಂಗ್ ರಸ್ತೆ ನಿರ್ಮಾಣ ಮಾಡಲು ರಾಮಕೃಷ್ಣ ಹೆಗಡೆ ನಗರದಲ್ಲಿನ ವಸತಿ ರಹಿತ ಒತ್ತುವರಿದಾರರನ್ನು ತೆರವುಗೊಳಿಸಿ, ದೊಡ್ಡಬಾತಿ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ಪುನರ್ವಸತಿ ಕಲ್ಪಿಸಿದ್ದು, ಆ ಸ್ಥಳಕ್ಕೆ ದಾವಣಗೆರೆ ದಕ್ಷಿಣ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಶುಕ್ರವಾರ ಭೇಟಿ ನೀಡಿದ್ದರು.
   ಅಲ್ಲಿನ ನಿವಾಸಿಗಳಿಂದ ಅಹವಾಲು ಸ್ವೀಕರಿಸಿ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಅವರು ನಿವಾಸಿಗಳಿಗೆ ಉಪಾಹಾರ ಉಣಬಡಿಸಿದರು.
   ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್, ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೋಟೂರು ಬಸವನಗೌಡ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ವೀರೇಶ್ ಕುಮಾರ್, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪಾಟೀಲ್ ಮತ್ತು ಜಿ.ಎಂ.ನಾಯ್ಕ, ನಿರ್ಮಿತಿ ಕೇಂದ್ರದ ರವಿ ಮತ್ತು ಶಿವಕುಮಾರ್ ಇದ್ದರು.
   ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, 40 ವರ್ಷಗಳಿಂದ ಇದ್ದ ರಸ್ತೆ ಒತ್ತುವರಿ ಸಮಸ್ಯೆಯನ್ನು ಬಗೆಹರಿಸಲಾಗಿದ್ದು ಶೀಘ್ರದಲ್ಲೇ ನಿವಾಸಿಗಳಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು ಎಂದು ತಿಳಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts