ಪುರಪಿತೃಗಳಿಗೆ ದೊರಕದ ಅಧಿಕಾರ

ಶಿರಹಟ್ಟಿ: ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಸೆ. 3ಕ್ಕೆ ಬರೋಬ್ಬರಿ ಎರಡು ವರ್ಷ ಕಳೆದರೂ ಆಯ್ಕೆಯಾದ ಪುರಪಿತೃಗಳಿಗೆ ಇನ್ನೂ ಅಧಿಕಾರ ಭಾಗ್ಯ ದೊರೆತಿಲ್ಲ, ಹೀಗಾಗಿ, ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಉಂಟಾಗಿದೆ.

2018, ಆಗಸ್ಟ್ 31 ರಂದು ಶಿರಹಟ್ಟಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು ಸೆ.3 ರಂದು ಫಲಿತಾಂಶ ಬಂದಿತ್ತು. ನೂತನ ಸದಸ್ಯರು ಆಯ್ಕೆಯಾದ ಬೆನ್ನಲ್ಲೇ ಮೀಸಲಾತಿ ಪಟ್ಟಿ ಕೂಡ ಹೊರಬಿದ್ದಿತ್ತು. ಆದರೆ, ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪಟ್ಟಿ ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಂದಲೇ ಸೃಷ್ಟಿಯಾದ ಗೊಂದಲ ಎರಡು ವರ್ಷ ಕಳೆದರೂ ಬಗೆಹರಿದಿಲ್ಲ. ಲಕ್ಷಾಂತರ ರೂ. ಖರ್ಚು ಮಾಡಿ ಆಯ್ಕೆಯಾದ 18 ಪಟ್ಟಣ ಪಂಚಾಯಿತಿ ಸದಸ್ಯರು ಅಧಿಕಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

18 ಸದಸ್ಯರ ಬಲ ಹೊಂದಿದ ಪ.ಪಂ.ಗೆ 2 ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ನ-10, ಬಿಜೆಪಿ-7 ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿದ್ದರೂ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಏನೆಲ್ಲ ಕಸರತ್ತು ನಡೆದಿದ್ದವು. ಆದರೆ, ಮೀಸಲಾತಿ ಗೊಂದಲ ಸೃಷ್ಟಿಯಾದ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನನೆಗುದಿದೆ ಬಿದ್ದಿದೆ. ಜನಪ್ರತಿನಿಧಿಗಳ ಆಡಳಿತಕ್ಕೆ ಅವಕಾಶ ಇಲ್ಲದ್ದರಿಂದ ಅಧಿಕಾರಿಗಳದ್ದೇ ಕಾರಬಾರು ನಡೆದಿದೆ. ಆಡಳಿತ ಯಂತ್ರ ತುಕ್ಕು ಹಿಡಿದಂತಾಗಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ.

ಪಟ್ಟಣದ ಅಭಿವೃದ್ಧಿಗೆ ಸ್ಥಳೀಯ ಸಂಸ್ಥೆಗಳ ಪಾತ್ರ ಮುಖ್ಯವಾಗಿದೆ. ಆದರೆ, 2 ವರ್ಷವಾದರೂ ಮೀಸಲಾತಿ ಸಮಸ್ಯೆ ಇತ್ಯರ್ಥವಾಗಿಲ್ಲ. ರೊಟೇಶನ್ ನಿಯಮಾವಳಿ ಅನುಸರಿಸಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಆಯ್ಕೆ ಮಾಡಿದ ಜನರೇ ಸರ್ಕಾರದ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಾರೆ.
| ಮಂಜುನಾಥ ಘಂಟಿ ಪುರಸಭೆ ಕಾಂಗ್ರೆಸ್ ಸದಸ್ಯ

ಅಧಿಕಾರದಿಂದ ಕೆಳಗಿಳಿದ ರೇಣುಕಾ ಕುಷ್ಟಗಿ

ಗಜೇಂದ್ರಗಡ: ತಾಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಸದಸ್ಯರು ಮಂಡಿಸಿದ ಅವಿಶ್ವಾಸ ನಿರ್ಣಯ ಅಂಗೀಕಾರವಾಗಿದ್ದರಿಂದ ಅಧ್ಯಕ್ಷೆ ರೇಣುಕಾ ಕುಷ್ಟಗಿ ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ತಿಳಿಸಿದ್ದಾರೆ.

ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಿಗದಿಯಾಗಿದ್ದದ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ 13 ಸದಸ್ಯರ ಪೈಕಿ 9 ಸದಸ್ಯರು ಅಧ್ಯಕ್ಷೆ ರೇಣುಕಾ ಕುಷ್ಟಗಿ ವಿರುದ್ಧ ಕೈ ಎತ್ತುವ ಮೂಲಕ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಸೂಚಿಸಿದರು. ಪರಿಣಾಮ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಅವರು ಅವಿಶ್ವಾಸ ನಿರ್ಣಯದ ಮಾಹಿತಿ ನೀಡಿ, ಜಿಲ್ಲಾಧಿಕಾರಿ ಜತೆಗೆ ರ್ಚಚಿಸಿ ಶೀಘ್ರವೇ ಗ್ರಾಪಂ ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದರು.

13 ಸದಸ್ಯ ಬಲದ ಗ್ರಾಪಂನಲ್ಲಿ 9 ಕಾಂಗ್ರೆಸ್ ಹಾಗೂ ನಾಲ್ವರು ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಹೀಗಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ರೇಣುಕಾ ಕುಷ್ಟಗಿ ಅವರನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿತ್ತು. ಕೆಲ ತಿಂಗಳ ನಂತರ ರೇಣುಕಾ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಗೊಂಡು ಅಧ್ಯಕ್ಷರಾಗಿ ಮುಂದುವರಿದಿದ್ದರು. ಆದರೆ, ಕೆಲ ಸದಸ್ಯರು ‘ಅಧ್ಯಕ್ಷರು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆೆ ನೀಡುತ್ತಿಲ್ಲ’ ಎಂದು ಆರೋಪಿಸಿ ಅವಿಶ್ವಾಸ ನಿರ್ಣಯ ಮಂಡಿಸಿ ಅಧ್ಯಕ್ಷರನ್ನು ಪದಚ್ಯುತಗೊಳಿಸಿದ್ದಾರೆ.

ಗ್ರಾ.ಪಂ. ಸದಸ್ಯರಾದ ಲಲಿತಾ ರಾಠೋಡ, ಲಕ್ಷ್ಮವ್ವ ಭಜಂತ್ರಿ, ಲಕ್ಷ್ಮವ್ವ ಗೌಡ್ರ, ಲಕ್ಷ್ಮಿಬಾಯಿ ಪೂಜಾರ, ರೋಣವ್ವ ಮಾದರ, ನೀಲವ್ವ ಗುರಿಕಾರ, ಸಾವಿತ್ರವ್ವ ದಾಸರ, ದೊಡ್ಡನಗೌಡ ಗೋನಾಳ, ದುರಗಪ್ಪ ಹರಿಜನ, ತಾ.ಪಂ. ಉಪಾಧ್ಯಕ್ಷ ಶಶಿಧರ ಹೂಗಾರ, ಪುರಸಭೆ ಸದಸ್ಯರಾದ ಮಿಥುನ ಪಾಟೀಲ, ವೆಂಕಟೇಶ ಮುದಗಲ್, ಮುರ್ತಜಾ ಡಾಲಾಯತ, ಅಂದಪ್ಪ ಬಿಚ್ಚೂರ, ಎ.ಸಿ. ಪಾಟೀಲ, ಪ್ರಭು ಮೇಟಿ, ವೀರೇಶ ರಾಠೋಡ, ವೀರಣ್ಣ ಶೆಟ್ಟರ್, ತುಳಸಿರಾಮ ಮಾಳೋತ್ತರ, ಬಸವರಾಜ ಬಂಕದ, ಅರ್ಜುನ ರಾಠೋಡ, ಉಪ ತಹಸೀಲ್ದಾರ್ ವೀರಣ್ಣ ಅಡಗತ್ತಿ ಇತರರು ಇದ್ದರು.

Share This Article

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ