23.2 C
Bangalore
Saturday, December 14, 2019

ಪುರಾತನ ರಘುನಾಥ ದೇವಸ್ಥಾನ ಜಲಾವೃತ

Latest News

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಭಟ್ಕಳ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪುರಾತನ ಹಿನ್ನೆಲೆಯ ರಘುನಾಥ ದೇವಸ್ಥಾನದಲ್ಲೂ ನೀರು ತುಂಬಿದ್ದು, ನಿತ್ಯದ ಪೂಜಾಪಾಠ ನಡೆಸಲು ತೊಡಕಾಗಿದೆ.

ಸುಮಾರು 450 ವರ್ಷಗಳ ಇತಿಹಾಸ ಹೊಂದಿರುವ ರಘುನಾಥ ದೇವಾಲಯ ಜಲಾವೃತವಾಗಿದೆ. ಮಳೆಯ ನೀರು ದೇವಸ್ಥಾನದ ಚೌಕಿಯಲ್ಲಿ ನುಗ್ಗುತ್ತಿದ್ದು, ಪೂಜೆ ನಡೆಸಲು ಆಗುತ್ತಿಲ್ಲ. ನೀರು ಮೆತ್ತಿ ಗರ್ಭಗುಡಿ ಪ್ರವೇಶಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪುರಸಭೆ ಅಧಿಕಾರಿಗಳಿಗೆ ಈ ಕುರಿತು ತಿಳಿಸಿದರೆ ಮಳೆಗಾಲ ಆಗಿರುವುದರಿಂದ ಚರಂಡಿ ತುಂಬಿ ಹರಿಯುತ್ತಿದೆ. ಸ್ವಲ್ಪ ದಿನ ಕಾಯುವಂತೆ ತಿಳಿಸಿದ್ದಾರೆ ಎಂದು ದೇವಸ್ಥಾನದ ರಾಮಚಂದ್ರ ಭಟ್ಟರು ‘ವಿಜಯವಾಣಿ’ ಜತೆಗೆ ತಮ್ಮ ಅಸಹಾಯಕತೆ ತೋಡಿಕೊಂಡರು.

ಅಲ್ಲದೆ, 1 ಎಚ್​ಪಿ ಪಂಪ್​ಸೆಟ್ ಬಳಸಿ ನೀರು ಹೊರ ಹಾಕುತ್ತಿದ್ದು, ಮಳೆ ನಿರಂತರವಾದರೆ ಇದು ಸಾಲುವುದಿಲ್ಲ ಎನ್ನುವ ಆತಂಕವಿದೆ ಎಂದು ಭಟ್ಟರು ಹೇಳಿದರು.

ಎಚ್ಚರಿಕೆಯಿಂದ ಇರಲು ಎಸಿ ಸಲಹೆ: ಪಟ್ಟಣದ ಹಲವಾರು ಮನೆಗಳಿಗೆ ನಿರಂತರವಾಗಿ ನೀರು ನುಗ್ಗುತ್ತಿರುವುದರಿಂದ ನಿವಾಸಿಗಳು ಆತಂಕಗೊಂಡಿದ್ದಾರೆ. ಅಪೂರ್ಣ ಹೆದ್ದಾರಿ ಕಾಮಗಾರಿ, ಸಮುದ್ರದ ಏರಿಳಿತವೂ ಪರಿಣಾಮ ಬೀರುತ್ತಿದೆ. ಮಳೆಯ ನೀರು ಸರಾಗವಾಗಿ ಸಮುದ್ರ ಸೇರದಿರುವುದು ಸಾರ್ವಜನಿಕರ ಚಿಂತೆಗೆ ಕಾರಣವಾಗಿದೆ. ಇನ್ನೂ ಎರಡು ದಿನ ಮಳೆ ಮುಂದುವರಿಯಲಿದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ತಾಲೂಕಿನಾದ್ಯಂತ ಅತಿವೃಷ್ಟಿ ಸೃಷ್ಟಿಯಾಗುತ್ತಿದೆ. ಈ ಹಿನ್ನೆಲೆ ಜನ ಹಾಗೂ ಜಾನುವಾರುಗಳ ಜೀವ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಾದ ಶರಾಬಿ ಹೊಳೆಯ ಚೌಥನಿ ಸೇತುವೆ, ಚೌಥನಿ ಮಸೀದಿ ಬಳಿ, ಗೌಸೀಯಾ ಮೊಹಲ್ಲಾದಿಂದ ಮುಂಡಳ್ಳಿವರೆಗೆ, ನಸ್ತಾರದಿಂದ ಮುಂಡಳ್ಳಿಯವರೆಗೆ, ವೆಂಕಟಾಪುರ ಹೊಳೆ, ಜಾಲಿ ಮತ್ತು ಹೆಬಳೆ ಬೀಚ್, ಕಡವಿನಕಟ್ಟಾ ಡ್ಯಾಮ್ ಸಾಗರ ರಸ್ತೆಯಲ್ಲಿನ ಕನ್ನೆಗುಂಡಿ ಫಾಲ್ಸ್, ಮುರ್ಡೆಶ್ವರ ಸಮುದ್ರ ಸೇರಿ ಇತರ ಪ್ರದೇಶಗಳ ಬಗ್ಗೆ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳು, ಪುರಸಭೆ ಹಾಗೂ ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ನಿಗಾ ಇಡಬೇಕು ಎಂದು ಉಪವಿಭಾಗಾಧಿಕಾರಿಗಳು ಸೂಚಿಸಿದ್ದಾರೆ.

ವರ್ಷಧಾರೆಗೆ ಶರಾವತಿ ತೀರ ಆಹುತಿ: ಹೊನ್ನಾವರ: ತಾಲೂಕಿನಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿದ್ದ ಮಳೆ ಶುಕ್ರವಾರವೂ ಮುಂದುವರಿದಿದೆ. ತಾಲೂಕಿನಲ್ಲಿನ ಶರಾವತಿ, ಗುಂಡಬಾಳ ಹಾಗೂ ಬಡಗಣಿ ನದಿಗಳು ತುಂಬಿ ಹರಿಯುತ್ತಿವೆ.

ರ್ಕ, ಹಳದೀಪುರ, ಕೆಕ್ಕಾರ, ನವಿಲಗೋಣ, ಚಂದಾವರ ಮತ್ತಿತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿನ ತೋಟಗಳಿಗೆ ಮತ್ತೆ ನೀರು ನುಗ್ಗಿದೆ. ಮನೆಗಳಿಗೂ ಆವರಿಸುವ ಆತಂಕದಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ.

ಗುರುವಾರ ಮಳೆ ಕಡಿಮೆಯಾಗಿದ್ದರಿಂದ ತಾಲೂಕಿನ ತಗ್ಗುಪ್ರದೇಶಗಳಲ್ಲಿ ಆವರಿಸಿದ್ದ ನೀರು ಕಡಿಮೆಯಾಗಿತ್ತು. ಶುಕ್ರವಾರ ಮತ್ತೆ ಬೆಳಗ್ಗೆಯಿಂದ ಸಂಜೆಯವರೆಗೂ ಧಾರಾಕಾರ ಮಳೆ ಸುರಿದ ಪರಿಣಾಮ ಮತ್ತೆ ನೀರು ಮನೆಗೆ ನುಗ್ಗುವ ಆತಂಕ ಎದುರಾಗಿದೆ.

ಶರಾವತಿ ನದಿ ತೀರದ ಮಾವಿನಕುರ್ವಾ, ಜಲವಳ್ಳಿ, ಹೆರಂಗಡಿ, ಉಪ್ಪೋಣಿ, ಕೊಡಾಣಿ, ಮಾಗೋಡ, ಅನಿಲಗೋಡ ಗ್ರಾಮಗಳ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಗುಂಡಬಾಳ ನದಿ ತೀರದ ಹಡಿನಬಾಳ, ಚಿಕ್ಕನಕೋಡ, ಗುಂಡಬಾಳ ಗ್ರಾಮಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದೆ. ಬಡಗಣಿ ತೀರದ ಹಳದೀಪುರ, ರ್ಕ ಭಾಗದಲ್ಲಿ ಹೊಲಗದ್ದೆಗಳಲ್ಲಿ ನೀರು ನಿಂತಿದ್ದು ಭತ್ತದ ಬೆಳೆ ಹಾನಿಗೊಳಗಾಗಿದೆ.

ಪಟ್ಟಣದ ಕೆಳಗಿನ ಪಾಳ್ಯದಲ್ಲಿ ಮನೆಗಳ ಸುತ್ತಮುತ್ತ ನೀರು ತುಂಬಿದೆ. ಕಾಸರಕೋಡದ ರೋಶನ್​ವೊಹಲ್ಲಾದ ಉರ್ದು ಶಾಲೆ ಅಂಗಳದಲ್ಲಿ ನೀರು ತುಂಬಿದ್ದು, ವಿದ್ಯಾರ್ಥಿಗಳು ಶಾಲೆಗೆ ಹೋಗಿ ಬರಲು ಪರದಾಡುವಂತಾಗಿದೆ. ಸರಿಯಾದ ಗಟಾರು ವ್ಯವಸ್ಥೆಯಿಲ್ಲದೇ ಈ ಸಮಸ್ಯೆ ಉಂಟಾಗಿದೆ. ರ್ಕ ತೊಪ್ಪಲಕೇರಿ ಭಾಗದಲ್ಲಿ ಕಡಲ ಕೊರೆತ ಮುಂದುವರಿದಿದ್ದು, ಈ ಭಾಗದ ಜನರು ಆತಂಕಗೊಂಡಿದ್ದಾರೆ. ಕಂದಾಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಗ್ರಾಮ ಲೆಕ್ಕಿಗರಿಂದ ಮಾಹಿತಿ ಪಡೆದುಕೊಂಡು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳುತ್ತಿದ್ದಾರೆ.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...