23.2 C
Bangalore
Saturday, December 14, 2019

ಪುಸ್ತಕ ನೀತಿ ಜಾರಿಯಾಗಲಿ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಹುಬ್ಬಳ್ಳಿ: ಪ್ರಕಾಶಕರು, ಲೇಖಕರಿಗೆ ಅನ್ಯಾಯ ಆಗಬಾರದು. ಗುಣಮಟ್ಟದ ಪುಸ್ತಕಗಳು ಎಲ್ಲ ಓದುಗರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ಪುಸ್ತಕ ನೀತಿಯೊಂದು ಜಾರಿಯಾಗಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಹೇಳಿದರು.

ಪ್ರಾಧಿಕಾರದ ಬೆಳ್ಳಿ ಹಬ್ಬದ ನಿಮಿತ್ತ ಕಾಳಿದಾಸ ನಗರದ ನಾಗಸುಧೆ ಜಗಲಿಯಲ್ಲಿ ಭಾನುವಾರ ಆಯೋಜಿಸಿದ್ದ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಎಂಬ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಹುತೇಕ ಲೇಖಕರಿಗೆ ಹಕ್ಕು ಸ್ವಾಮ್ಯದ ಮಾಹಿತಿ ಗೊತ್ತಿರುವುದಿಲ್ಲ. ಗೌರವ ಧನ ಎಷ್ಟು? ಏನು? ಎಂಬಿತ್ಯಾದಿ ಅಂಶಗಳನ್ನು ಪ್ರಕಾಶಕರ ಬಳಿ ಕೇಳುವುದೇ ಇಲ್ಲ. ತಮ್ಮ ಪುಸ್ತಕ ಪ್ರಕಟಗೊಂಡ ಖುಷಿಯಲ್ಲಷ್ಟೇ ಇರುತ್ತಾರೆ. ಕೆಲವು ಪ್ರತಿ ಪ್ರಕಟಗೊಂಡು ಗ್ರಂಥಾಲಯ ಸೇರುತ್ತವೆ. ಆದರೆ ಓದುಗರಿಗೆ ಮುಟ್ಟುವುದಿಲ್ಲ. ಇದೇ ರೀತಿ ಪ್ರಕಾಶನ ಕ್ಷೇತ್ರ ಲೇಖಕರನ್ನು ಶೋಷಣೆ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರು. ಪ್ರಾಧಿಕಾರದ ಬೆಳ್ಳಿ ಹಬ್ಬದ ನಿಮಿತ್ತ ಪುಸ್ತಕ ಓದುವ ಸಂಸ್ಕೃತಿ ಬೆಳೆಸುವುದಕ್ಕಾಗಿ ಉಚಿತ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಬಿ.ಟಿ. ಲಲಿತಾ ನಾಯಕ್ ಹಾಗೂ ಪ್ರೊ. ಚಿದಾನಂದ ಮೂರ್ತಿ ಅವರ ಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿ ಪುಸ್ತಕ ವಿತರಿಸಲಾಗಿದೆ ಎಂದರು.

ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಈ ವರ್ಷ ಅಚ್ಚು ಮೆಚ್ಚಿನ ಪುಸ್ತಕ ಯೋಜನೆ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಇಷ್ಟವಾದ ಪುಸ್ತಕ ಓದಿ ಆ ಕುರಿತು ಚರ್ಚೆ, ಸಂವಾದ, ನಿರೂಪಣೆ ಮಾಡುವುದು ಯೋಜನೆ ಉದ್ದೇಶ. ಇದರಿಂದ ಪುಸ್ತಕ ಪ್ರೀತಿ ಬೆಳೆಯುತ್ತದೆ. ಪ್ರತಿ ಕಾರ್ಯಕ್ರಮಕ್ಕೆ 5 ಸಾವಿರ ರೂ. ನೀಡುತ್ತೇವೆ. ಕಾಲೇಜು ವಿದ್ಯಾರ್ಥಿಗಳಿಗಾಗಿ ‘ಜಾಣ-ಜಾಣೆಯರು’ ಯೋಜನೆ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬಳಗ ಕಟ್ಟಿಕೊಂಡು ಪುಸ್ತಕ ಓದಿ ಸಂವಾದ ನಡೆಸುವುದು ಇದರ ಉದ್ದೇಶ. ಪ್ರಕಾಶನ ಕಮ್ಮಟಗಳನ್ನು ಮಾಡುತ್ತಿದ್ದೇವೆ ಎಂದರು.

ಬಹಳಷ್ಟು ಲೇಖಕರು ಪ್ರಾಧಿಕಾರ ಹುಡುಕಿ ಕೊಂಡು ಬರುತ್ತಿದ್ದರು. ಈಗ ಪ್ರಾಧಿಕಾರನೇ ಮನೆ ಗಳಿಗೆ ಬರುತ್ತಿದೆ. ಶಾಲೆ-ಕಾಲೇಜುಗಳಿಗೆ ಹೋಗುತ್ತಿದೆ. ನೀರು, ಆಹಾರ, ಬಟ್ಟೆಯಂತೆ ಪುಸ್ತಕಗಳು ಜೀವನಾವಶ್ಯಕ ವಸ್ತುಗಳಾಗಬೇಕು ಎಂದರು.

ಕಥೆಗಾರ ಬಸು ಬೇವಿನಗಿಡದ ಮಾತನಾಡಿದರು. ಸಿ.ಎಂ. ಮುನಿಸ್ವಾಮಿ, ಸುನಂದಾ ಕಡಮೆ, ಪ್ರಕಾಶ ಕಡಮೆ ಇತರರು ವೇದಿಕೆಯಲ್ಲಿದ್ದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...