ಬಣಕಲ್: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲೂಕು ಘಟಕದಿಂದ ಶಾಸಕಿ ನಯನಾ ಮೋಟಮ್ಮ ಅವರಿಗೆ ಮನವಿ ಸಲ್ಲಿಸಲಾಯಿತು.
ಮಹಾಒಕ್ಕೂಟದ ಮೂಡಿಗೆರೆ ತಾಲೂಕು ಘಟಕದ ಅಧ್ಯಕ್ಷೆ ಗಾನವಿ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಮುಖ್ಯಪುಸ್ತಕ ಬರಹಗಾರರಿಗೆ ಮಾಸಿಕ 20 ಸಾವಿರ ರೂ. ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಮತ್ತು ಗ್ರಾಪಂ ಮಟ್ಟದ ಒಕ್ಕೂಟದ ಸಖಿಯರಿಗೆ ಮಾಸಿಕ 15 ಸಾವಿರ ರೂ. ವೇತನ ನೀಡಬೇಕು. ಸರ್ಕಾರದಿಂದ ನೇರವಾಗಿ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ವೇತನ ಜಮೆಯಾಗಬೇಕು ಎಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಶಾಸಕಿ ನಯನಾ ಮೋಟಮ್ಮ ಮಾತನಾಡಿ, ಮುಖ್ಯಪುಸ್ತಕ ಬರಹಗಾರರು, ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಒಕ್ಕೂಟದ ಸಖಿಯರ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುವುದು ಎಂದರು.
ರಾಜ್ಯ ಗ್ರಾಪಂ ಮಟ್ಟದ ಮುಖ್ಯ ಪುಸ್ತಕ ಬರಹಗಾರರ ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಮತ್ತು ಸಖಿಯರ ಮಹಾಒಕ್ಕೂಟದ ಮೂಡಿಗೆರೆ ತಾಲೂಕು ಘಟಕದ ಕಾರ್ಯದರ್ಶಿ ಶ್ವೇತಾ ಶೆಟ್ಟಿ, ಖಜಾಂಚಿ ಪ್ರಾಪ್ತಿ ಹಾಗೂ ಮುಖ್ಯ ಪುಸ್ತಕ ಬರಹಗಾರರು, ಸಂಪನ್ಮೂಲ ವ್ಯಕ್ತಿಗಳು, ಸಖಿಯರು ಇದ್ದರು.