28.5 C
Bengaluru
Monday, January 20, 2020

ಪೊಲೀಸ್ ವೇತನ ಹೆಚ್ಚಳಕ್ಕೆ ಹಣಕಾಸು ಇಲಾಖೆ ಅಡ್ಡಿ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬೆಂಗಳೂರು: ಸಬ್ ಇನ್​ಸ್ಪೆಕ್ಟರ್ ಮತ್ತು ಡಿವೈಎಸ್ಪಿ/ಎಸಿಪಿ ದರ್ಜೆ ಅಧಿಕಾರಿಗಳ ವೇತನ ಪರಿಷ್ಕರಣೆಗೆ ಹಣಕಾಸು ಇಲಾಖೆ ಅಡ್ಡಗಾಲು ಹಾಕಿದ್ದು, ಪೊಲೀಸರಲ್ಲಿ ತೀವ್ರ ಅಸಮಾಧಾನ ಉಂಟುಮಾಡಿದೆ.

ಪಿಎಸ್​ಐ, ಡಿವೈಎಸ್ಪಿಗಳಿಗೆ ವೇತನ ಹೆಚ್ಚಳ ಮಾಡಿದರೆ ಇದೇ ಹುದ್ದೆಗಳಿಗೆ ಸಮಾನವಾದ ಅನ್ಯ ಇಲಾಖೆ ಅಧಿಕಾರಿಗಳ ವೇತನ ಪರಿಷ್ಕರಣೆಗೆ ಬೇಡಿಕೆ ಇಡಬಹುದು. ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಲಿದೆ ಎಂದು ಹಣಕಾಸು ಇಲಾಖೆ ಅಭಿಪ್ರಾಯ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿ ಅನುಸಾರ ಡಿವೈಎಸ್ಪಿ ಹುದ್ದೆ ಕಂದಾಯ ಇಲಾಖೆ ಉಪ ವಿಭಾಗಾಧಿಕಾರಿ ಸ್ಥಾನಕ್ಕೆ, ಸಬ್​ಇನ್​ಸ್ಪೆಕ್ಟರ್​ಗಳ ಹುದ್ದೆ ಶಿರಸ್ತೇದಾರ್ ಹುದ್ದೆಗೆ ಸಮಾನವಾಗಿವೆ.

ಔರಾದ್ಕರ್ ವರದಿ ಅನ್ವಯ ಪೊಲೀಸರ ವೇತನ ಪರಿಷ್ಕರಣೆ ಮಾಡಿ ಡಿಜಿಪಿ ನೀಲಮಣಿ ಎನ್. ರಾಜು ಆದೇಶ ಹೊರಡಿಸಿದ್ದರು. ಪಟ್ಟಿಯಲ್ಲಿ ಪಿಎಸ್​ಐ ಮತ್ತು ಡಿವೈಎಸ್ಪಿ/ಎಸಿಪಿ ಹುದ್ದೆಗಳನ್ನು ಕೈ ಬಿಡಲಾಗಿತ್ತು. ಸೇವಾ ಹಿರಿತನ ಆಧಾರದಡಿ ವೇತನ ಪರಿಷ್ಕರಿಸುವ ಕಾರಣಕ್ಕೆ ಆ 2 ಹುದ್ದೆಗಳನ್ನು ಕೈ ಬಿಡಲಾಗಿದ್ದು, ಮುಂದಿನ ಹಂತದಲ್ಲಿ ಹೆಚ್ಚಳವಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಇನ್ನುಳಿದಂತೆ ತಾತ್ಕಾಲಿಕ ತಡೆ ಹಿಡಿದಿರುವ ಪೇದೆ, ಮುಖ್ಯಪೇದೆ, ಇನ್​ಸ್ಪೆಕ್ಟರ್ ಮತ್ತು ನಾನ್ ಐಪಿಎಸ್ ಅಧಿಕಾರಿಗಳ ವೇತನ ಜಾರಿಗೆ ಯಾವುದೇ ಅಡ್ಡಿಯಿಲ್ಲ. ತಾಂತ್ರಿಕ ಕಾರಣಕ್ಕೆ ಅಡ್ಡಿಯಾಗಿದೆ ಎಂದು ಡಿಜಿಪಿ ಅಧಿಕಾರಿಗಳು ತಿಳಿಸಿದ್ದಾರೆ.

ಔರಾದ್ಕರ್ ವರದಿ ಅನುಸಾರ ಪೊಲೀಸರ ವೇತನ ಪರಿಷ್ಕರಣೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ತಾಂತ್ರಿಕ ಅಡಚಣೆಯಿಂದ ತಾತ್ಕಾಲಿಕ ತಡೆ ಹಿಡಿದ್ದು, ಎಲ್ಲವನ್ನು ಶೀಘ್ರದಲ್ಲೇ ಸರಿಪಡಿಸಲಾಗುತ್ತದೆ. ಅಗ್ನಿಶಾಮಕ ದಳ ಮತ್ತು ಬಂದೀಖಾನೆ ಇಲಾಖೆ ಪೊಲೀಸರ ವೇತನವೂ ಅಧಿಕವಾಗಲಿದೆ.

|ಬಸವರಾಜ ಬೊಮ್ಮಾಯಿ ಗೃಹ ಸಚಿವ

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...