ಚಿಕ್ಕಮಗಳೂರು: ಪೋಕ್ಸೊ ಕಾಯ್ದೆಗಳ ಕುರಿತು ಹಲವಾರು ಕಾರ್ಯಕ್ರಮಗಳನ್ನು ಮತ್ತು ಕಾರ್ಯಾಗಾರವನ್ನು ಆಯೋಜಿಸಿ ಮಕ್ಕಳಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮ ವಹಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು ಹೇಳಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಗರದ ತಾಲೂಕು ಪಂಚಾಯಿತಿ ಡಾ. ಬಿ. ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಸಾಗಾಣಿಕೆ ಹಾಗೂ ಮಾರಾಟ, ಶಾಲೆಯಿಂದ ಹೊರಗುಳಿದ ಮಕ್ಕಳ ಪುನರ್ವಸತಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ಮೊಬೈಲ್ ಬಳಕೆಯಿಂದ ಮಕ್ಕಳ ಜೀವನ ಅತಂತ್ರವಾಗುತ್ತಿದೆ. ಇಂತಹ ಚಟಗಳಿಂದ ಹೊರತಂದು ಅರಿವು ಮೂಡಿಸಿ ಮಕ್ಕಳನ್ನು ಜಾಗೃತರಾಗಿರುವಂತೆ ಮಾಡುವುದು ನಮ್ಮ ಕರ್ತವ್ಯ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಒಂದೊAದು ಕಾಯ್ದೆಗಳ ಕುರಿತು ಕಾರ್ಯನಿರ್ವಹಿಸುವುದರಿಂದ ಎಲ್ಲಾ ಕೆಲಸಗಳು ಸ್ವಾರಸ್ಯವಾಗಿರುತ್ತದೆ ಎಂದ ಅವರು ಜಿಲ್ಲೆಯಲ್ಲಿ ಯಾವುದೇ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಕೃತ್ಯಗಳು ಜರುಗದಂತೆ ಪ್ರತಿಯೊಬ್ಬರು ಕ್ರಮ ವಹಿಸಬೇಕು. ಪ್ರತಿ ಗ್ರಾಮಗಳಲ್ಲೂ ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಮಾಡಿ ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದ ಅವರು ಬಾಲ್ಯ ವಿವಾಹದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಪೂರೈಸುವಂತೆ ಸಂಬAಧ ಪಟ್ಟ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಪ್ರತಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷಿತ ಸಮಿತಿ ರಚಿಸಬೇಕು. ನಿಲಯ ಗ್ರಂಥಾಲಯಗಳಲ್ಲಿ ಎಲ್ಲಾ ಕಾಯ್ದೆ ಕಾನೂನುಗಳ ಪುಸ್ತಕಗಳನ್ನು ಸಮಗ್ರಹಿಸಿ ಮಕ್ಕಳ ಕಲಿಕೆಗೆ ಸಹಕರಿಸಬೇಕು. ಮಕ್ಕಳಿಗೆ ಅತಿಥ್ಯದ ಜೊತೆಗೆ ಆರೋಗ್ಯ ತಪಾಸಣೆ ಮಾಡಲು ನಿಲಯದಲ್ಲಿ ಪೂರ್ಣ ಅವದಿಯ ನರ್ಸ್ನ್ನು ನೇಮಿಸುವಂತೆ ಮತ್ತು ವಿದ್ಯಾರ್ಥಿನಿಲಯಗಳಲ್ಲಿ ಕಡ್ಡಾಯವಾಗಿ ಆಪ್ತ ಸಮಾಲೋಚಕರನ್ನು ನೇಮಿಸಬೇಕು ನಿಲಯಗಳಿಗೆ ಮಕ್ಕಳನ್ನು ದಾಖಲಿಸುವಾಗ ಪ್ರತಿ ಮಗುವಿನ ವೈದ್ಯಕಿಯ ತಪಾಸಣೆಯ, ಮಕ್ಕಳ ಮತ್ತು ಪೋಷಕರ ಒಪ್ಪಿಗೆ ಪತ್ರ ಹಾಗೂ ಮಗುವಿನ ಗೃಹ ತನಿಖಾ ವರದಿ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಪಡೆಯಬೇಕು. ನಿಲಯದ ಮೇಲ್ವಿಚಾರಕರು ಪ್ರತಿ ಮಗುವಿನೊಂದಿಗೆ ಆಪ್ತ ಸಮಾಲೋಚನೆಯನ್ನು ಕಡ್ಡಾಯವಾಗಿ ನಡೆಸುವಂತೆ ಅಧಿಕಾರಿಗಳು ಕ್ರಮ ವಹಿಸಿ ಎಂದರು.
ಪ್ರತಿಯೊAದು ಶಾಲೆಗಳಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಅವರೊಂದಿಗೆ ಸಂವಾದ ನಡೆಸಿ ಅವರಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಅವರಿಗೆ ಆತ್ಮಸ್ಥೆÊರ್ಯ ತುಂಬಬೇಕು. ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸಿ ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಚ್ಚು ಮಕ್ಕಳು ದಾಖಲಾಗುವಂತೆ ಕಾರ್ಯಕ್ರಮಗಳನ್ನು ಮಾಡುವುದು ಮತ್ತು ಶಿಕ್ಷಣದಿಂದ ಆಗುವ ಉಪಯೋಗಗಳ ಕುರಿತು ಮಕ್ಕಳು ಮತ್ತು ಪೋಷಕರಲ್ಲಿ ಅರಿವು ಮೂಡಿಸಬೇಕು ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳ ಸಂಖ್ಯೆ ಕ್ರಮೇಣ ಕ್ಷೀಣಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ಹಾಗಾಗಿ ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಶಾಲೆಗೆ ಕರೆತಂದು ಅವರಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಬರುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮಾಡುವುದು ೬ ರಿಂದ ೧೪ ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣವನ್ನು ನೀಡುವಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ವರಪ್ಪ ಪಿ. ಮಾತನಾಡಿ ಜಿಲ್ಲಾ ಮಕ್ಕಳ ಸುರಕ್ಷಿತ ಸಮಿತಿ ಕುರಿತು ಮಾಹಿತಿ ನೀಡಿ ಜಿಲ್ಲೆಯಲ್ಲಿನ ಯಾವುದಾದರೂ ಮಕ್ಕಳು ಸಮಸ್ಯೆಗಳಿಗೆ ಸಿಲುಕ್ಕಿದ್ದಲ್ಲಿ ಅಥವಾ ಯಾವುದೇ ವ್ಯಕ್ತಿ ಲೈಂಗಿಕ ಕಿರುಕುಳ ನೀಡುತ್ತಿದ್ದಲ್ಲ್ಲಿ ತಕ್ಷಣ ಜಿಲ್ಲಾ ಮಕ್ಕಳ ಸುರಕ್ಷಣಾ ಕಾಯ್ದೆ ಟೋಲ್ ಫ್ರೀ ಸಂಖ್ಯೆ ೧೦೯೮ ನ್ನು ಸಂಪರ್ಕಿಸಿ ದೂರು ನೀಡಲು ತಿಳಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ, ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಯೋಜನ ಸಮನ್ವಯ ಅಧಿಕಾರಿ ಎಚ್.ಸಿ.ಭಾಗಿರಥಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.