ಔರಾದ್: ಎಲ್ಲರೂ ಪ್ರಜಾಪ್ರಭುತ್ವವನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಸ್ವಾತಂತ್ರೃಕ್ಕೆ ಬೆಲೆ ಸಿಕ್ಕಂತಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಜಗನ್ನಾಥ ದೇಶಮುಖ ಹೇಳಿದರು.
ಪಟ್ಟಣದಲ್ಲಿ ಶನಿವಾರ ತಾಲೂಕು ಆಡಳಿತ ಆಯೋಜಿಸಿದ್ದ ಕಲ್ಯಾಣ ಕನರ್ಾಟಕ ಉತ್ಸವ ಹಾಗೂ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮಂಡಿಸಿದ ಅವರು, ನಿಜಾಮನ ಆಡಳಿತ ವಿರೋಧಿಸಿ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಉಪನ್ಯಾಸಕ ವಿಜಯಕುಮಾರ ವಿಶ್ವಕರ್ಮ ಮಾತನಾಡಿ, ವಿಶ್ವಕರ್ಮನ ತತ್ವಗಳು ಎಲ್ಲರಿಗೂ ದಾರಿದೀಪವಾಗಿವೆ. ಅವರನ್ನು ಯಾವುದೇ ಜಾತಿಗೆ ಸೀಮಿತ ಮಾಡಬಾರದು ಎಂದು ತಿಳಿಸಿದರು.
ಪಪಂ ಅಧ್ಯಕ್ಷೆ ಅಂಬಿಕಾ ಪವಾರ, ತಹಸೀಲ್ದಾರ್ ಅರುಣಕುಮಾರ ಕುಲಕಣರ್ಿ, ಗ್ರೇಡ್-2 ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಇಒ ಬೀರೇಂದ್ರಸಿಂಗ್ ಠಾಕೂರ್, ಮುಖ್ಯಾಧಿಕಾರಿ ಶಿವಕುಮಾರ ಘಾಟೆ, ಪಪಂ ಸದಸ್ಯ ಧೊಂಡಿಬಾರಾವ ನರೋಟೆ, ಸಿಪಿಐ ಮಲ್ಲಿಕಾಜರ್ುನ ಇಕ್ಕಳಕಿ ಇತರರಿದ್ದರು.