ಪ್ರತಿನಿತ್ಯ ಬಳಸಿದರೆ ಭಾಷೆಯ ಅಭಿವೃದ್ಧಿ

10 nrp 2 rotary club

ಎನ್.ಆರ್.ಪುರ: ಕನ್ನಡವು ಸಂಹವನಕ್ಕಾಗಿ ಬಳಸುವ ಮಾಧ್ಯಮವಾಗಿದೆ ಎಂದು ಲೇಖಕ ಡಾ. ಸುರೇಶ್‌ಕುಮಾರ್ ಹೇಳಿದರು.
ರೋಟರಿ ಕ್ಲಬ್ ಆಶ್ರಯದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ ಭಾವನೆಗಳನ್ನು ವ್ಯಕ್ತಪಡಿಸಲು ಇರುವ ಸಾಧನ. ಕನ್ನಡವನ್ನು ಪ್ರತಿನಿತ್ಯ ಬಳಸಿದರೆ ತಾನಾಗಿಯೇ ಉಳಿಯುತ್ತದೆ ಎಂದರು.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಜ್ಞಾನಗಂಗೋತ್ರಿ ಪ್ರೌಢಶಾಲೆ ಮುಖ್ಯಶಿಕ್ಷಕ ಜಿ.ಎ.ಶ್ರೀಕಾಂತ್ ಮಾತನಾಡಿ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವಿದೆ. ಕನ್ನಡ ಭಾಷೆಗೆ ಅತಿ ಹೆಚ್ಚು 8 ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಆದರೆ ಕನ್ನಡ ನಾಡಿನಲ್ಲಿ ಕನ್ನಡವನ್ನು ಉಳಿಸಲೆಂದೇ ಕನ್ನಡ ಕಾವಲು ಸಮಿತಿ ಇರುವುದು ವಿಷಾದದ ಸಂಗತಿ ಎಂದು ತಿಳಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ಜಿ.ಆರ್.ದಿವಾಕರ, ಕಾರ್ಯದರ್ಶಿ ಮಧು ವೆಂಕಟೇಶ್, ಡಿ.ಸಿ.ದಿವಾಕರ, ಎಸ್.ಎಸ್.ಶಾಂತಕುಮಾರ್, ಬಿ.ಟಿ.ವಿಜಯಕುಮಾರ್, ಜಿ.ದಿವಾಕರ, ಎಂ.ಆರ್.ಸುಂದರೇಶ್, ಎಸ್.ಎನ್.ಲೋಕೇಶ್, ಎಚ್.ಡಿ.ವಿನಯ್, ಶೇಷಾಚಲ, ಮನೀಶ, ರಜತ್, ಚೇತನ್, ವಿದ್ಯಾನಂದಕುಮಾರ್, ಕೆ.ಎಸ್.ರಾಜಕುಮಾರ್, ಎನ್.ಕೆ.ಕಿರಣ್, ಧನಂಜಯ್, ಅಭಿಷೇಕ್ ಇದ್ದರು.

Share This Article

ಭಾರತದ ನೋಟಿನಲ್ಲಿರುವ ಮಹಾತ್ಮ ಗಾಂಧಿಜಿ ಅವರ ಫೋಟೋ ಕ್ಲಿಕ್ಕಿಸಿದ್ದು ಯಾವಾಗ & ಎಲ್ಲಿ?; ಇಲ್ಲಿದೆ ಸಂಪೂರ್ಣ ಮಾಹಿತಿ | Information

ಭಾರತದ ನೋಟಿನಲ್ಲಿ ಮಹಾತ್ಮ ಗಾಂಧಿ ಅವರ ಫೋಟೋವನ್ನು ನೀವು ನೋಡಿರಬಹುದು. ಆದರೆ ನೋಟಿನ ಮೇಲೆ ನಗುತ್ತಿರುವ…

ಇಬ್ಬನಿಯಿಂದ ಚಳಿಗಾಲದಲ್ಲಿ ತುಳಸಿ ಗಿಡ ಹಾಳಾಗುತ್ತಿದೆಯೇ?; ಆರೈಕೆಗಾಗಿ ಇಲ್ಲಿದೆ ಸಿಂಪಲ್​ ಟ್ರಿಕ್​​ | Health Tips

ತುಳಸಿಯು ಔಷಧೀಯ ಸಸ್ಯವಾಗಿರುವುದರ ಜತೆಗೆ ಧಾರ್ಮಿಕ ನಂಬಿಕೆಗಳನ್ನೂ ಹೊಂದಿದೆ. ಈ ಸಸ್ಯವನ್ನು ಹಿಂದೂ ಧರ್ಮದಲ್ಲಿ ಅತ್ಯಂತ…

ಬಿಪಿ ಹೆಚ್ಚಾಗಲು ಈ ಆಹಾರ ಪದಾರ್ಥಗಳು ಕಾರಣವೇ; ತಜ್ಞರು ಹೇಳಿದ್ದೇನು? | Health Tips

ನೂಡಲ್ಸ್, ಪಾಪಡ್, ಉಪ್ಪಿನಕಾಯಿ, ಸಾಸ್ ಮತ್ತು ನಮ್ಕೀನ್ ಬಹುತೇಕ ಈ ಎಲ್ಲಾ ಆಹಾರ ಪದಾರ್ಥಗಳು ಪ್ರತಿಯೊಬ್ಬರ…