21 C
Bengaluru
Thursday, January 23, 2020

ಪ್ರಶ್ನೆ ಅರ್ಥೈಸಿಕೊಳ್ಳದಿದ್ದರೆ ಅಂಕ ನಷ್ಟ ನಿಶ್ಚಿತ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಶಿವಮೊಗ್ಗ: ಪರೀಕ್ಷೆಯಲ್ಲಿ ಕೇಳುವ ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿದ್ಯಾರ್ಥಿಗಳು ವಿಫಲರಾದರೆ ಅಂಕ ನಷ್ಟ ನಿಶ್ಚಿತ. ಹೀಗಾಗಿ ಮೊದಲು ಪ್ರಶ್ನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳಬೇಕು ಎಂದು ಹರಿಹರ ತಾಲೂಕು ಗುತ್ತೂರು ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ಶ್ರೀಧರ ಮಯ್ಯ ತಿಳಿಸಿದರು.

ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್, ‘ವಿಜಯವಾಣಿ’ ದಿನಪತ್ರಿಕೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಶನಿವಾರ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪರೀಕ್ಷಾ ಸಿದ್ಧತಾ ಕಾರ್ಯಾಗಾರ ‘ಪರೀಕ್ಷೆ ಒಂದು ಹಬ್ಬ’ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿಜ್ಞಾನ ಪರೀಕ್ಷೆ ಎದುರಿಸುವ ಕುರಿತು ಮಾತನಾಡಿದರು.

ಉತ್ತರ ಒಂದೇ ಆದರೂ ಬಗೆಬಗೆಯಾಗಿ ಪ್ರಶ್ನೆಗಳನ್ನು ಕೇಳುವ ಅವಕಾಶಗಳಿರುತ್ತವೆ. ಕೆಲವೊಮ್ಮೆ ಪ್ರಶ್ನೆಗಳು ದೀರ್ಘವಾಗಿರುತ್ತವೆ. ಇದನ್ನು ಗಮನಿಸಿದ ವಿದ್ಯಾರ್ಥಿಗಳು ಉತ್ತರ ಇನ್ನೆಷ್ಟು ದೀರ್ಘವಾಗಿರಬಹುದು ಎಂದು ಚಿಂತೆಗೆ ಬೀಳುತ್ತಾರೆ. ಯಾವಾಗಲೂ ಪ್ರಶ್ನೆಗಳು ಟಿವಿಯಂತೆ ದೊಡ್ಡದಾಗಿರುತ್ತವೆ. ಉತ್ತರ ಮಾತ್ರ ರಿಮೋಟ್​ನಂತೆ ಚಿಕ್ಕದಾಗಿರುತ್ತದೆ ಎಂದು ನಿದರ್ಶನ ಸಹಿತ ವಿವರಿಸಿದರು.

ಪ್ರಶ್ನೆ ಪತ್ರಿಕೆ ವಿನ್ಯಾಸ ಬದಲಾಗಿದೆ ಎಂಬ ಆತಂಕ ಬೇಡ. ಹೇಗೆ ಬದಲಾಗಿದೆ ಎಂಬುದನ್ನು ಗಮನಿಸಿದರೆ ಸಾಕು. ಬರವಣಿಗೆ ಕೌಶಲ ಹೆಚ್ಚಲಿ ಎಂಬ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆಯಷ್ಟೇ. 5 ಅಂಕದ ಪ್ರಶ್ನೆ ಮಾತ್ರ ಹೊಸದಾಗಿ ಸೇರ್ಪಡೆಯಾಗಿದೆ. ಇನ್ನುಳಿದಂತೆ ಬಹು ಆಯ್ಕೆ ಪ್ರಶ್ನೆಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕೊಡೆ ಎಂದಿಗೂ ಮಳೆಯನ್ನು ನಿಲ್ಲಿಸಲು ಸಾಧ್ಯವಿಲ್ಲ. ಆದರೆ ನಮ್ಮನ್ನು ಮಳೆಯಿಂದ ರಕ್ಷಿಸುತ್ತದೆ. ಅದೇ ರೀತಿ ಆತ್ಮವಿಶ್ವಾಸ ನಮ್ಮನ್ನು ಎಲ್ಲ ಸಮಯದಲ್ಲೂ ಗೆಲುವಿನ ದಡ ಸೇರಿಸದೇ ಇರಬಹುದು. ಆದರೆ ಅಪಾಯವನ್ನು ಎದುರಿಸಲು ಸಹಾಯ ಮಾಡುತ್ತದೆ. ಹೀಗಾಗಿ ವಿದ್ಯಾರ್ಥಿಗಳು ಎಂದಿಗೂ ಆತ್ಮವಿಶ್ವಾಸವನ್ನು ತೊರೆಯಬಾರದು ಎಂದು ಹೇಳಿದರು.

ಪ್ರತಿ ಅಂಕಕ್ಕೂ ಮಹತ್ವ: ಪರೀಕ್ಷೆಯಲ್ಲಿ ಗಳಿಸುವ ಪ್ರತಿ ಅಂಕಕ್ಕೂ ಮಹತ್ವವಿದೆ. ಒಂದು ಅಂಕ ನಮ್ಮನ್ನು ಉನ್ನತ ಶ್ರೇಣಿಗೆ ಕೊಂಡೊಯ್ಯಬಹುದು. ಅದೇ ಒಂದು ಅಂಕ ನಮ್ಮ ಹಿನ್ನಡೆಗೂ ಕಾರಣವಾಗಬಹುದು. ಹೀಗಾಗಿ ಆತಂಕ ತೊರೆದು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಸಜ್ಜಾಗಿ ಎಂದು ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ಅಧ್ಯಕ್ಷ ಜಗದೀಶ್ ಸಂಪಳ್ಳಿ ವಿದ್ಯಾರ್ಥಿಗಳಿಗೆ ತಿಳಿಸಿದರು. ಪಠ್ಯ, ಪ್ರಶ್ನೆಪತ್ರಿಕೆ ಮಾದರಿ ಬದಲಾಗುತ್ತದೆ ಎಂಬ ಆತಂಕ ಬೇಡ. ಕೆಲ ವಿಷಯಗಳು ಹಲವು ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಎನಿಸಬಹುದು. ಆದರೆ ನಿಗದಿತ ಗುರಿ, ಶಿಸ್ತು, ಬದ್ಧತೆಯಿಂದ ಓದಿನಲ್ಲಿ ತೊಡಗಿಸಿಕೊಂಡರೆ ಪರೀಕ್ಷೆಯನ್ನು ಸರಾಗವಾಗಿ ಎದುರಿಸಬಹುದು ಎಂದರು.

ಡಿಡಿಪಿಐ ಎಚ್.ಮಂಜುನಾಥ್, ಬಿಇಒ ಕೆ.ಬಿ.ಲೋಕೇಶಪ್ಪ, ಶಿಕ್ಷಣ ಸಂಯೋಜಕ ಜಿಲಾನಿಸಾಬ್, ಮೈಸೂರು ಎಜುಕೇಷನ್ ಅಕಾಡೆಮಿ ಟ್ರಸ್ಟ್ ಸದಸ್ಯರಾದ ಉಮೇಶ್, ಬಿ.ಎನ್.ಕೃಷ್ಣಮೂರ್ತಿ, ಗಣೇಶ್ ಬಾಬು ಮುಂತಾದವರಿದ್ದರು. ಟ್ರಸ್ಟ್​ನ ಅಧ್ಯಕ್ಷ ಜಗದೀಶ್ ಸಂಪಳ್ಳಿ ಅಧ್ಯಕ್ಷತೆ ವಹಿಸಿದ್ದರು. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...