ಸಿನಿಮಾ

ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನ ನೀಡಿ

ಹುಬ್ಬಳ್ಳಿ: ಹು-ಧಾ ಪೂರ್ವ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿರುವ, 3ನೇ ಬಾರಿ ಶಾಸಕರಾಗಿರುವ ಪ್ರಸಾದ ಅಬ್ಬಯ್ಯ ಅವರನ್ನು ತಕ್ಷಣವೇ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ಅವರಿಗೆ ಸಚಿವ ಸ್ಥಾನ ಕಲ್ಪಿಸುವವರೆಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ತರುತ್ತೇವೆ ಎಂದು ಹು-ಧಾ ಸಮಗ್ರ ನವನಿರ್ವಣ ವೇದಿಕೆ ಕಾರ್ಯಾಧ್ಯಕ್ಷ ಗಂಗಾಧರ ದೊಡ್ಡವಾಡ ಹೇಳಿದರು.

ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯ ಅನೇಕರು ರಾಜಕೀಯವಾಗಿ ಉನ್ನತ ಹುದ್ದೆ ಅಲಂಕರಿಸಿದರೂ ಇಲ್ಲಿನ ಸಮಸ್ಯೆಗಳತ್ತ ಹೆಚ್ಚಿನ ಒಲವು ತೋರಲಿಲ್ಲ. ಹೊರಗಿನವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದರೂ ನಿರೀಕ್ಷಿತ ಫಲ ಸಿಗಲಿಲ್ಲ ಎಂದರು.

ವೇದಿಕೆ ಗೌರವಾಧ್ಯಕ್ಷ ಸುರೇಶ ಕುನ್ನೂರ ಮಾತನಾಡಿ, ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿ ನಿಧಾನವಾಗಿ ಸಾಗಿದೆ. ವ್ಯವಸ್ಥಿತಿ ಉದ್ಯಾನ, ಶೌಚಗೃಹಗಳಿಲ್ಲ. ಆಟಕ್ಕೆ ಸೂಕ್ತವಾದ ಮೈದಾನವಿಲ್ಲ. ಮೈಸೂರು, ಶಿವಮೊಗ್ಗ, ಮಂಗಳೂರು ಸಾಕಷ್ಟು ಅಭಿವೃದ್ಧಿ ಕಂಡಿದೆ. ಇಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ ಸಿಗುತ್ತಿಲ್ಲ. ಇದರಿಂದ ಇಲ್ಲಿ ಉನ್ನತ ವ್ಯಾಸಂಗ ಮಾಡಿದವರು ಬೆಂಗಳೂರು, ಹೊರ ರಾಜ್ಯಕ್ಕೆ ಹೋಗಿ ನೌಕರಿ ಗಿಟ್ಟಿಸುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಿ.ಸಿ. ಗೌಡರ, ಬಿ.ಆರ್. ಬೆಳಗಲಿ ಇದ್ದರು.

Latest Posts

ಲೈಫ್‌ಸ್ಟೈಲ್