21.7 C
Bengaluru
Tuesday, January 21, 2020

ಪ್ರಾಣಿ- ಪಕ್ಷಿಗಳಿಗೆ ಶವರ್​ಬಾತ್!

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಗದಗ: ಪ್ರಸ್ತುತ ಬೇಸಿಗೆಯಲ್ಲಿ ಸೂರ್ಯ ಧಗಧಗಿಸುತ್ತಿದ್ದು, ಭೂಮಿಯು ನಿಗಿನಿಗಿ ಕೆಂಡದಂತಾಗಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ತಾಪಮಾನದಿಂದ ಜನ ತಂಪು ಪಾನೀಯಗಳಿಗೆ ಮೊರೆ ಹೋಗುತ್ತಿದ್ದಾರೆ. ಆದರೆ, ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಹೇಳತೀರದು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ತನ್ನ ವ್ಯಾಪ್ತಿಯಡಿ ಬರುವ ಬಿಂಕದಕಟ್ಟಿ ಮೃಗಾಲಯದಲ್ಲಿರುವ ಪ್ರಾಣಿ-ಪಕ್ಷಿಗಳಿಗೆ ನೀರಿನಲ್ಲಿ ಮಿಂದೆದ್ದು ತಂಪಿನ ಅನುಭವ ಪಡೆಯುವ ರೀತಿಯಲ್ಲಿ ಸ್ಪ್ರಿಂಕ್ಲರ್ ಅಳವಡಿಸಿದೆ. ಹುಲಿಯು ಕೊಳದಲ್ಲಿ ಮಿಂದೇಳುತ್ತಿದ್ದರೆ, ಪ್ರಾಣಿ-ಪಕ್ಷಿಗಳು ಸ್ಪ್ರಿಂಕ್ಲರ್ ನೀರಿಗೆ ಮೈಯೊಡ್ಡಿ ತಂಪಿನ ಅನುಭವ ಪಡೆಯುತ್ತಿವೆ.

ಕಳೆದ ಏಪ್ರಿಲ್ ತಿಂಗಳಿನಿಂದ ಜಿಲ್ಲೆಯಾದ್ಯಂತ ಸರಾಸರಿ 38, 39 ಹಾಗೂ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಝುಳಕ್ಕೆ ಮೃಗಾಲಯದಲ್ಲಿನ ವಿವಿಧ ಜಾತಿಯ 35ಕ್ಕೂ ಹೆಚ್ಚು ಪ್ರಾಣಿ-ಪಕ್ಷಿಗಳು ತತ್ತರಿಸಿದ್ದವು. ಇದನ್ನರಿತ ಮೃಗಾಲಯದ ಅಧಿಕಾರಿಗಳು ಪ್ರಾಣಿ-ಪಕ್ಷಿಗಳ ಪಂಜರದಲ್ಲಿ ಸ್ಪ್ರಿಂಕ್ಲರ್ ಅಳವಡಿಸಿ, ನೀರು ಸಿಂಚನ ಮಾಡುವ ಮೂಲಕ ಬಿಸಿಲಿನ ತಾಪ ತಣಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕಡವೆ, ಜಿಂಕೆ, ಚುಕ್ಕೆ ಜಿಂಕೆ, ಕೊಂಡುಕುರಿ ಹಿಂಡು ಇರುವ ಆವರಣದಲ್ಲಿ ಮತ್ತು ಆಸ್ಟ್ರಿಚ್(ಉಷ್ಟ್ರಪಕ್ಷಿ) ಮತ್ತು ಎಮು ಪಕ್ಷಿಗಳ ಪಂಜರದಲ್ಲಿ 10 ಸ್ಪ್ರಿಂಕ್ಲರ್​ಗಳನ್ನು ಅಳವಡಿಸಲಾಗಿದೆ. ಪ್ರತಿನಿತ್ಯ ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ಪ್ರಾಣಿ-ಪಕ್ಷಿಗಳು ತಂಪಾಗಿರಲು ನೀರು ಸಿಂಚನ ಮಾಡಲಾಗುತ್ತಿದೆ. ಸ್ಪ್ರಿಂಕ್ಲರ್​ನಿಂದ ಚಿಮ್ಮುವ ನೀರಿನ ಕೆಳಗೆ ಪ್ರಾಣಿಗಳು ಮೈಯೊಡ್ಡಿ ನಿಂತು ತಂಪಾದ ಅನುಭವ ಪಡೆಯುತ್ತಿವೆ.

ಹುಲಿಗಳ ಆವಾಸಕ್ಕೆ ಕಾಡಿನ ಸಹಜ ಪರಿಸರ ಹೋಲುವಂತೆ ಅಭಿವೃದ್ಧಿಪಡಿಸಿರುವ ‘ಟೈಗರ್ ಡೇಕ್ರಾಲ್’ನಲ್ಲಿ ಪುಟ್ಟ ಕೊಳ ನಿರ್ವಿುಸಲಾಗಿದ್ದು, ಬಿಸಿಲಿನ ತಾಪದಿಂದ ರಕ್ಷಣೆ ಪಡೆಯಲು ಹುಲಿಗಳು ಈ ನೀರಿನಲ್ಲೇ ವಿರಮಿಸುತ್ತವೆ. ಚಿರತೆಗಳಿರುವ ಪಂಜರದ ಅರ್ಧ ಮೇಲ್ಭಾಗಕ್ಕೆ ಹುಲ್ಲು ಹೊದೆಸಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ, ಪ್ರಾಣಿಗಳ ವಿಶ್ರಾಂತಿಗಾಗಿ ಅಲ್ಲಲ್ಲಿ ಒಣಹುಲ್ಲಿನ ಛಾವಣಿ ಇರುವ ನೆರಳಿನ ಮನೆಗಳನ್ನು ನಿರ್ವಿುಸಲಾಗಿದೆ.

ಇನ್ನು ಮೃಗಾಲಯ ವೀಕ್ಷಿಸಲು ಬರುವ ಸಾರ್ವಜನಿಕರಿಗೂ ಪ್ರಾಣಿ-ಪಕ್ಷಿಗಳ ವೀಕ್ಷಣೆಯ ಪಥದಲ್ಲಿ ಹುಲ್ಲಿನ ಹೊದಿಕೆಯುಳ್ಳ ಗುಡಿಸಲು ಮಾದರಿಯಲ್ಲಿ ನಾಲ್ಕು ವೀಕ್ಷಣಾ ಸ್ಥಳಗಳನ್ನು ನಿರ್ವಿುಸಲಾಗಿದೆ. ಗಿಡ-ಮರಗಳು ನೀರಿಲ್ಲದೇ ಒಣಗಬಾರದು ಎಂಬ ಉದ್ದೇಶದಿಂದ ಮೃಗಾಲಯದ ಸುತ್ತಲಿನ ದಿಡ-ಮರಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಲಾಗಿದೆ. ಅಲ್ಲದೆ, ಅಲ್ಲಲ್ಲಿರುವ ಹುಲ್ಲುಗಾವಲು ಪ್ರದೇಶ ಹಸಿರಿನಿಂದ ತುಂಬಿರಲು ಸ್ಪ್ರಿಂಕ್ಲರ್ ಜೋಡಿಸಲಾಗಿದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...