ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣ ಸೇರಿ ಸಾಹಿತ್ಯ ಸಮ್ಮೇಳನದಲ್ಲಿ ಪಂಚ ನಿರ್ಣಯ

ಧಾರವಾಡ: ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು ಹಾಗೂ ಸರ್ಕಾರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭಿಸುವ ಯೋಚನೆ ಕೈಬಿಡಬೇಕು ಎನ್ನುವುದು ಸೇರಿ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಐದು ನಿರ್ಣಯಗಳನ್ನು ಅಂಗೀಕರಿಸಿತು.

ಸಮ್ಮೇಳನ ಸಮಾರೋಪದ ದಿನವಾದ ಭಾನುವಾರ ಸಂಜೆ ಕಸಾಪ ಗೌರವ ಕೋಶಾಧ್ಯಕ್ಷ ಪಿ. ಮಲ್ಲಿಕಾರ್ಜುನಪ್ಪ ನಿರ್ಣಯ ಪ್ರಕಟಿಸಿದರು.

ಪಂಚ ನಿರ್ಣಯಗಳು ಹೀಗಿವೆ

  1. 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಸ್ವಾಗತ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರಿಗೆ ಮತ್ತು ಆತಿಥ್ಯ ತೋರಿದ ಧಾರವಾಡ ಜನತೆಗೆ ಧನ್ಯವಾದಗಳು.
  2. ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆ ಹಾಡುವ ಅವಧಿಯನ್ನು ಗರಿಷ್ಠ 2 ನಿಮಿಷ 30 ಸೆಕೆಂಡ್​ಗಳಿಗೆ ಸರ್ಕಾರ ನಿಗದಿಗೊಳಿಸಬೇಕು.
  3. ರಾಜ್ಯ ಸರ್ಕಾರವು ಬರುವ ಶೈಕ್ಷಣಿಕ ವರ್ಷದಿಂದ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸುವ ನಿರ್ಣಯವನ್ನು ಅನುಷ್ಠಾನಕ್ಕೆ ತರಬಾರದು.
  4. ಕೇಂದ್ರ ಸರ್ಕಾರ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯುವ ಅವಕಾಶ ನೀಡಬೇಕು.
  5. ಎಲ್​ಕೆಜಿಯಿಂದ 7ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸಬೇಕು.