25.7 C
Bangalore
Monday, December 16, 2019

ಪ್ರೀತಿ ಇದ್ದಾಗ ನೀತಿ ಸ್ವಾಭಾವಿಕ

Latest News

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ರಾಣೆಬೆನ್ನೂರ: ಸ್ವಾರ್ಥ ಬದಿಗೊತ್ತಿ, ನಿಸ್ವಾರ್ಥ ಸೇವೆ ಸಲ್ಲಿಸುತ್ತ ಸರ್ವರ ಶ್ರೇಯಸ್ಸು ಬಯಸುವವರ ಜೀವನ ಸಾರ್ಥಕವಾಗುತ್ತದೆ ಎಂದು ದಾವಣಗೆರೆ ರಾಮಕೃಷ್ಣ ಮಿಷನ್ ಕಾರ್ಯದರ್ಶಿ ಶ್ರೀ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್ ಹೇಳಿದರು.

ನಗರದ ಲಲಿತ ಭವನದಲ್ಲಿ ಭಾನುವಾರ ಶ್ರೀರಾಮಕೃಷ್ಣ-ವಿವೇಕಾನಂದ ಭಾವಪ್ರಚಾರ ಪರಿಷತ್​ನ ಐದನೇ ವಾರ್ಷಿಕ ಸಮ್ಮೇಳನದಲ್ಲಿ ಶ್ರೀಮಾತಾ ಚಿಂತನಧಾರ ಗೋಷ್ಠಿಯಲ್ಲಿ ‘ಶ್ರೀಮಾತೆ ಮತ್ತು ನೀತಿ ಸಂಹಿತೆ’ ವಿಷಯದ ಕುರಿತು ಅವರು ಮಾತನಾಡಿದರು.

ಮನಸ್ಸು, ಬುದ್ಧಿ, ಜ್ಞಾನ, ಮಾತು ಮತ್ತು ಕೃತಿಗಳೆಲ್ಲದರ ಮುಖೇನ ಯಾರು ಇತರರ ಶ್ರೇಯಸ್ಸನ್ನು ಬಯಸುವರೋ ಅವರ ಜೀವನ ಸಾರ್ಥಕವಾಗುತ್ತದೆ. ಇಂತಹ ಅದ್ಭುತ ಜೀವನ ನಡೆಸಿದ ಶ್ರೀ ಮಾತೆ ಶಾರದಾದೇವಿಯವರದು ನೀತಿ ಸಂಹಿತೆ ಮಾತ್ರವಲ್ಲ, ಅದು ಪ್ರೀತಿ ಸಂಹಿತೆಯಾಗಿದೆ. ಪ್ರೀತಿ ಇದ್ದಾಗ ನೀತಿ ಸ್ವಾಭಾವಿಕವಾಗುತ್ತದೆ ಎಂದರು.

ಸಂಹಿತೆ ಎಂದರೆ ಸರಿಯಾದ ರೀತಿಯಲ್ಲಿ ಇತರರನ್ನು ಅರ್ಥೈಸಿಕೊಂಡು ಅವರ ಅವಶ್ಯಕತೆಗನುಗುಣವಾಗಿ ಸಹಾಯ ಮಾಡುವುದಾಗಿದ್ದು, ಪರಹಿತಾಸಕ್ತಿಯೇ ನೈತಿಕತೆಯಾಗಿದೆ. ಶ್ರೀಮಾತೆಯವರು ಸದಾ ಇತರರ ಹಿತಚಿಂತನೆಯಲ್ಲೇ ತೊಡಗಿರುತ್ತಿದ್ದರು. ಅವರ ಜೀವನದ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದರು.

ರಾಮಕೃಷ್ಣ ವಿವೇಕಾನಂದ ವೇದಾನಂತ ಆಶ್ರಮದ ಅಧ್ಯಕ್ಷ ಸ್ವಾಮಿ ಅಭಯಾನಂದಜೀ ಮಹಾರಾಜ್, ತಾಯರೂಪದಿ ಗುರುಕರಣೆ ವಿಷಯದ ಕುರಿತು ಮಾತನಾಡಿ, ಸರಳತೆಯಲ್ಲಿ ಶ್ರೇಷ್ಠತೆ ಅಡಗಿದೆ ಎಂಬುದನ್ನು ಅರಿಯಲು ಸೂಕ್ಷ್ಮತೆ ಬೇಕು ಎಂದರು. ಸರ್ವಸ್ಯಾರ್ತಿ ಹರೇ ದೇವಿ ವಿಷಯದ ಕುರಿತು ಮೈಸೂರಿನ ರಾಮಕೃಷ್ಣ ಆಶ್ರಮದ ಶ್ರೀಸ್ವಾಮಿ ಜ್ಞಾನಯೋಗಾನಂದಜೀ ಮಹಾರಾಜ್, ವಾತ್ಸಲ್ಯತೀರ್ಥ ಶ್ರೀಮಾತೆ ವಿಷಯದ ಕುರಿತು ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವಿಜಯಾನಂದಜೀ ಮಹಾರಾಜ್ ಮಾತನಾಡಿದರು.

ಹರಿಹರ ವೀರಶೈವ-ಲಿಂಗಾಯತ ಪೀಠಾಧಿಪತಿ ವಚನಾನಂದ ಸ್ವಾಮೀಜಿ, ಭಕ್ತರಿಗೆ ಯೋಗಾಸನ ಮತ್ತು ಪ್ರಾಣಾಯಾಮ ತರಗತಿಯನ್ನು ನೆರವೇರಿಸಿಕೊಟ್ಟರು. ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದ ಸರಸ್ವತಿ ಅವರು ಧ್ಯಾನದ ತರಗತಿಯನ್ನು ನೆರವೇರಿಸಿಕೊಟ್ಟರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಆರ್. ಶಂಕರ ಇತರರಿದ್ದರು. ಶ್ರೀ ವೀರೇಶಾನಂದಜೀ ಸ್ವಾಗತಿಸಿ, ನಿರೂಪಿಸಿದರು. ಸ್ವಾಮಿ ಜಗನ್ನಾಥಾನಂದಜೀ ವಂದಿಸಿದರು.

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...