ಬೈಲಹೊಂಗಲ: ಮೊಹರಂ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು ಎಂದು ಸಿಪಿಐ ಪಂಚಾಕ್ಷರಿ ಸಾಲಿಮಠ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೋಮವಾರ ಶಾಂತಿಪಾಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
ಬೈಲಹೊಂಗಲ ಶಾಂತಿ, ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಎಲ್ಲ ಧರ್ಮದವರು ಪ್ರೀತಿ, ವಾತ್ಸಲ್ಯದಿಂದ ಹಬ್ಬಗಳನ್ನು ಆಚರಿಸುತ್ತಾ ಬಂದಿದ್ದಾರೆ. ಮೊಹರಂ ಹಬ್ಬವನ್ನು ಎಲ್ಲರೂ ಕೂಡಿಕೊಂಡು ಶಾಂತಿಯಿಂದ ಆಚರಿಸಬೇಕು.
ಯಾರಾದರೂ ಶಾಂತಿ ಕದಡಿದರೆ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ನೀಡುವ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಹಿತಕರ ಘಟನೆ ನಡೆದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಕುಡಿದ ಮತ್ತಿನಲ್ಲಿ ಹೆಣ್ಣು ಮಕ್ಕಳನ್ನು ಚುಡಾಯಿಸಿದರೆ ಶಿಸ್ತು ಕ್ರಮ ಕೈಕೊಳ್ಳಲಾಗುವುದು. ಎಲ್ಲ ಕಡೆ ಬೀಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು ಎಂದರು. ಎಲ್ಲ ಡೋಲಿಗಳ ಹಿರಿಯರು, ಸಾರ್ವಜನಿಕರು, ಪೊಲೀಸರು ಇದ್ದರು.