20.4 C
Bangalore
Monday, December 9, 2019

ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಕೈಜೋಡಿಸಿ

Latest News

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಬೀದರ್: ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜ್ಞಾನಚೇತನ ಚಾರಿಟೇಬಲ್ ಟ್ರಸ್ಟ್ನಿಂದ ಶನಿವಾರ ನಗರದ ಪ್ರಮುಖ ವ್ಯಾಪಾರ ಸ್ಥಳಗಳಲ್ಲಿ ಪ್ಲಾಸ್ಟಿಕ್ ಮುಕ್ತ ಜನಜಾಗೃತಿ ಜಾಥಾ ನಡೆಯಿತು.
ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷೆ ಮನಗೂಳಿ ಪ್ರೇಮಾವತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಪ್ಲಾಸ್ಟಿಕ್ ಬಳಕೆ ಎಲ್ಲರೂ ನಿಲ್ಲಿಸಿ ಪರಿಸರವನ್ನು ಸ್ವಚ್ಛವಾಗಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿಪತ್ತು ಎದುರಿಸಬೇಕಾಗುತ್ತದೆ. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಲು ಕೋರಿದರು.
ಜಿಲ್ಲಾ ನ್ಯಾಯಾಲಯದಿಂದ ಹೊರಟ ಜಾಥಾ ಡಿಸಿ ಕಚೇರಿ, ನಗರಸಭೆ ಕಚೇರಿ, ಮೋಹನ್ ಮಾರ್ಕೆಟ್, ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಗವಾನ್ ಚೌಕ್, ಚೌಬಾರ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ಪುನಃ ಜಿಲ್ಲಾ ನ್ಯಾಯಾಲಯ ಆವರಣಕ್ಕೆ ಬಂದು ಕೊನೆಗೊಂಡಿತು. ರ್ಯಾಲಿಯುದ್ದಕ್ಕೂ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು `ಪ್ಲಾಸ್ಟಿಕ್ ಬದಲಿಗೆ ನಾವೆಲ್ಲರೂ ಬಳಸೋಣ ಪೇಪರ್, ಕೈ ಚೀಲ, `ಪ್ಲಾಸ್ಟಿಕ್ ಬಳಕೆ ನಿಷೇಧ ಅದುವೇ ದೇವರ ಪ್ರಸಾದ, `ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೂಣೆ’ ಎನ್ನುವ ನಾನಾ ಫಲಕಗಳನ್ನು ಪ್ರದರ್ಶಿಸುವ ಮೂಲಕ ಪ್ಲಾಸ್ಟಿಕ್ ನಿಷೇಧ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮ ಟಿ.ಪಿ., ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಂ.ಪ್ರಕಾಶ, ಪ್ರಧಾನ ಕಾರ್ಯದರ್ಶಿ ಧನರಾಜ ಬಿರಾದಾರ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಜ್ಞಾನಚೇತನ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಇದ್ದರು. 

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...