25.3 C
Bangalore
Friday, December 13, 2019

ಫುಡ್​ಪಾರ್ಕ್, ರೈಲು ಮಾರ್ಗಕ್ಕೆ ಹೆಚ್ಚಿನ ಒತ್ತು

Latest News

ಜೀತ ವಿಮುಕ್ತರಿಗೆ ಬಂಧಮುಕಗತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ಮತ್ತೊಮ್ಮೆ, ‘ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಗುರುಗಳು’ ಎಂದ ರಮೇಶ್​ ಜಾರಕಿಹೊಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲೂ ನಮ್ಮ ಗುರುಗಳು ಎಂದು ಶಾಸಕ ರಮೇಶ್​ ಜಾರಕಿಹೊಳಿ ಪುನರುಚ್ಚಾರ ಮಾಡಿದ್ದಾರೆ. ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ...

ಕನ್ನಡ ಹಬ್ಬ ಕಾರ್ಯಕ್ರಮ

ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯು ಕನ್ನಡ ಹಬ್ಬ ಕಾರ್ಯಕ್ರಮವನ್ನು ಡಿ.೧೬ ರಂದು ಮಧ್ಯಾಹ್ನ ೩.೩೦ ಕ್ಕೆ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ದಿವಂಗತರಾದ ರಾಜಶೇಖರ ಕೋಟಿ ಹಾಗೂ...

ಹಾನಗಲ್ಲ: ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಕೃಷಿ ಉತ್ಪನ್ನಗಳಿಗಾಗಿ ಫುಡ್​ಪಾರ್ಕ್ ಹಾಗೂ ಹುಬ್ಬಳ್ಳಿ-ಹಾನಗಲ್ಲ-ಶಿಕಾರಿಪುರ ರೈಲು ಮಾರ್ಗದ ಸರ್ವೆ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.

ಪಟ್ಟಣದ ಸದಾಶಿವ ಮಂಗಲಭವನದಲ್ಲಿ ಭಾನುವಾರ ಜರುಗಿದ ಕಾರ್ಯಕರ್ತರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ದೇಶದ ಜನತೆ ಪ್ರಧಾನಿ ಮೋದಿ ಅವರ ಅಭಿವೃದ್ಧಿಶೀಲ ಆಡಳಿತವನ್ನು ಮನಸಾರೆ ಮೆಚ್ಚಿದ್ದಾರೆ. ಅವರ ನಾಯಕತ್ವ ಒಪ್ಪಿಕೊಂಡಿದ್ದಾರೆ. ಘಟಬಂಧನ್ ಮಾಡಿಕೊಂಡಿದ್ದ ಪಕ್ಷಗಳ ನಾಯಕರು ಬಿಜೆಪಿ ಹಾಗೂ ಮೋದಿಯನ್ನು ಅಧಿಕಾರದಿಂದ ದೂರವಿಡಲು ದೊಡ್ಡ ಪ್ರಮಾಣದ ಅಪಪ್ರಚಾರ ನಡೆಸಿದರು. ಆದರೂ, ಬಿಜೆಪಿ 303 ಸ್ಥಾನಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ಮೋದಿ ಪ್ರಧಾನಿಯಾಗಿದ್ದಾರೆ. ಇದಕ್ಕಾಗಿ ಪಕ್ಷದ ಎಲ್ಲ ಕಾರ್ಯಕರ್ತರೂ ಅಭಿನಂದನಾರ್ಹರು ಎಂದರು.

ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ವಾಣಿಜ್ಯ ಕೇಂದ್ರಗಳಾದ ಮುಂಬೈ, ಚೆನ್ನೈ ಮಧ್ಯದಲ್ಲಿರುವ ಬೆಳಗಾವಿ, ಹುಬ್ಬಳ್ಳಿ, ಚಿತ್ರದುರ್ಗದ ಸಂಸದರು ತಮ್ಮ ನಗರಗಳನ್ನು ವಾಣಿಜ್ಯ ಘಟಕಗಳನ್ನಾಗಿ ಪರಿವರ್ತಿಸಬೇಕು. ಜಲಸಂಪನ್ಮೂಲ, ಮಾನವ ಸಂಪನ್ಮೂಲಗಳ ಸಂಪೂರ್ಣ ಬಳಕೆಯಾಗುವಂಥ ಯೋಜನೆ ತರಬೇಕು. ಹುಬ್ಬಳ್ಳಿ-ಅಂಕೋಲಾ ಮಾರ್ಗ ಪೂರ್ಣಗೊಳ್ಳಬೇಕು. ಹುಬ್ಬಳ್ಳಿ-ಶಿಕಾರಿಪುರ ರೈಲು ಮಾರ್ಗಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಸಿ.ಎಂ. ಉದಾಸಿ ಮಾತನಾಡಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಣ ಯಥೇಚ್ಛವಾಗಿ ಹಂಚಿದರೂ ಮತದಾರ ಅವರನ್ನು ಬೆಂಬಲಿಸಲಿಲ್ಲ. ನಮ್ಮ ಅಭ್ಯರ್ಥಿಯ ಗೆಲುವನ್ನು ಕಾರ್ಯಕರ್ತರು, ಮತದಾರರಿಗೆ ಸಮರ್ಪಣೆ ಮಾಡುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಾಗುವುದು ಎಂದರು.

ತಾಲೂಕಿನಲ್ಲಿ ಅತಿ ಹೆಚ್ಚು ಮತ ನೀಡಿ ಬೆಂಬಲಿಸಿದ ಮತಗಟ್ಟೆ ಪ್ರಮುಖರನ್ನು ಪಕ್ಷದ ಪರವಾಗಿ ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ತಾಲೂಕು ಅಧ್ಯಕ್ಷ ನಿಂಗಪ್ಪ ಗೊಬ್ಬೇರ, ಕಾರ್ಯದರ್ಶಿ ರಾಜು ಗೌಳಿ, ಶಿವಲಿಂಗಪ್ಪ ತಲ್ಲೂರ, ಮುಖಂಡರಾದ ಚಂದ್ರಪ್ಪ ಜಾಲಗಾರ, ಸಿದ್ಧರಾಜ ಕಲಕೋಟಿ, ಮಾಲತೇಶ ಸೊಪ್ಪಿನ, ಎ.ಎಸ್. ಬಳ್ಳಾರಿ, ಬಿ.ಎಸ್. ಅಕ್ಕಿವಳ್ಳಿ, ಅನುಪಮಾ ಚನ್ನಗೌಡರ, ಎಂ.ಬಿ. ಕಲಾಲ, ಸಿ.ಬಿ. ಪಾಟೀಲ, ಸಿದ್ಲಿಂಗಪ್ಪ ಶಂಕ್ರಿಕೊಪ್ಪ, ಕೃಷ್ಣ ಈಳಿಗೇರ, ರಾಜಣ್ಣ ಪಟ್ಟಣದ, ಬಸಣ್ಣ ಬೂದಿಹಾಳ, ಮೆಹಬೂಬಲಿ ಬ್ಯಾಡಗಿ, ಶೇಕಣ್ಣ ಮಹರಾಜಪೇಟ, ಕಲ್ಯಾಣಕುಮಾರ ಶೆಟ್ಟರ, ಚಂದ್ರಣ್ಣ ಹರಿಜನ, ಎಚ್.ಎಸ್. ಗೊಂದಿ, ಬಸಣ್ಣ ಸೂರಗೊಂಡರ, ರಾಜಣ್ಣ ಗೌಳಿ, ಡಾ.ಸುನೀಲ ಹಿರೇಮಠ, ಮಾಲತೇಶ ಆರೇರ, ಸಂತೋಷ ಟೀಕೋಜಿ ಇತರರು ಉಪಸ್ಥಿತರಿದ್ದರು.

ದಕ್ಷಿಣ ಭಾರತದ ಏಕೈಕ ಕೇಂದ್ರ ಅನುಮೋದಿತ ಬೇಡ್ತಿ ನದಿ ಯೋಜನೆ ಅನುಷ್ಠಾನದಿಂದ 20 ಟಿಎಂಸಿ ನೀರು ಬಳಕೆ ಮಾಡಿಕೊಳ್ಳುವ ಅವಕಾಶವಿದೆ. ಕೇಂದ್ರವೂ 2009ರಲ್ಲಿ ಒಪ್ಪಿಗೆ ನೀಡಿದೆ. ಇದರಿಂದ ಹಲವು ಜಿಲ್ಲೆಗಳಿಗೆ ನೀರಾವರಿ ಲಭ್ಯವಾಗಲಿದೆ. ಇದಕ್ಕೆ ಈ ಭಾಗದ ಎಲ್ಲ ಶಾಸಕರೂ ಸಂಸದರೊಂದಿಗೆ ಕೈಜೋಡಿಸುತ್ತೇವೆ.
| ಬಸವರಾಜ ಬೊಮ್ಮಾಯಿ, ಶಿಗ್ಗಾಂವಿ ಶಾಸಕ

Stay connected

278,746FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...