25.6 C
Bangalore
Thursday, December 12, 2019

ಬಂಟ್ವಾಳ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ

Latest News

ಕರ್ಫ್ಯೂ ಉಲ್ಲಂಘಿಸಿ ರಸ್ತೆಗಿಳಿದ ಸಿಎಬಿ ಪ್ರತಿಭಟನಾಕಾರರ ಮೇಲೆ ಪೊಲೀಸ್​ ಫೈರಿಂಗ್​; ಮೂವರು ಸಾವು, ಹಲವರಿಗೆ ಗಾಯ

ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆ ನಿನ್ನೆ ರಾಜ್ಯಸಭೆಯಲ್ಲಿ ಅಂಗೀಕಾರ ಆಗಿ ಶೀಘ್ರವೇ ಕಾಯ್ದೆಯಾಗಿ ರೂಪುಗೊಳ್ಳಲಿದೆ. ಆದರೆ ಈ ಸಿಎಬಿ ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಕಾವು...

ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದವನಿಗೆ ಕೋರ್ಟ್​ ಆವರಣದಲ್ಲಿ ಧರ್ಮದೇಟು ನೀಡಲು ಮುಂದಾದ ಸಾರ್ವಜನಿಕರು

ಬೆಳಗಾವಿ: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಇಂದು ಬಂಧಿತನಾಗಿರುವ ಆರೋಪಿ ಸುನೀಲ ಬಾಳು ಬಾಳನಾಯಿಕನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದಾಗ ಸಾರ್ವಜನಿಕರೇ ಆತನಿಗೆ...

ಶ್ರೀರಾಮಸೇನಾದಿಂದ ದತ್ತ ತಿಲಕ ಕಾರ್ಯಕ್ರಮ

ದಾವಣಗೆರೆ: ಶ್ರೀರಾಮಸೇನಾ ಜಿಲ್ಲಾ ಘಟಕದಿಂದ ನಗರದ ಜಯದೇವ ವೃತ್ತದಲ್ಲಿರುವ ದತ್ತಾತ್ರೇಯ ದೇವಸ್ಥಾನದಲ್ಲಿ ಗುರುವಾರ ದತ್ತ ತಿಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದತ್ತನ ಭಜನೆ ಮಾಡಿದ ಕಾರ್ಯಕರ್ತರು,...

ಜಿಲ್ಲಾಧಿಕಾರಿ ಭರವಸೆ ಪ್ರತಿಭಟನೆ ವಾಪಸ್

ಬಾಗಲಕೋಟೆ: ತಾಲೂಕಿನ ನಾಯನೇಗಲಿ ಗ್ರಾಮದ ಬಳಿ ಇರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬಿನ ತೂಕದಲ್ಲಿ ಹೆಚ್ಚುವರಿಯಾಘಿ ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ...

ಶೀಘ್ರ ಚಾಲುಕ್ಯ ಪ್ರಾಧಿಕಾರ ಸಭೆ

ಬಾಗಲಕೋಟೆ: ಇತ್ತೀಚೆಗೆ ರಚಿಸಲಾಗಿರುವ ಚಾಲುಕ್ಯ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕೃತ ಸಭೆಯನ್ನು ಶೀಘ್ರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿ ಕೆ.ರಾಜೇಂದ್ರ...

ಸಂದೀಪ್ ಸಾಲ್ಯಾನ್ ಬಂಟ್ವಾಳ
ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಸಲುವಾಗಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆ ಮೂಲ ಸೌಕರ್ಯಗಳೊಂದಿಗೆ ಮೇಲ್ದರ್ಜೆಗೇರಿದೆ. ಆದರೂ ಸಿಬ್ಬಂದಿ ಕೊರತೆ, ಕೆಲ ಸಿಬ್ಬಂದಿಯ ದರ್ಪದ ನಡವಳಿಕೆ, ಆಸ್ಪತ್ರೆಯ ಅವ್ಯವಸ್ಥೆಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ಪದೇ ಪದೆ ಟೀಕೆ, ಆಕ್ರೋಶದ ಮಾತುಗಳು ಕೇಳಿಬರುತ್ತಿದೆ. ಸಿಬ್ಬಂದಿಯಿಲ್ಲದೆ ಬಳಲುತ್ತಿರುವ ಸರ್ಕಾರಿ ಆಸ್ಪತ್ರೆಗೆ ಶೀಘ್ರ ಮೇಜರ್ ಸರ್ಜರಿಯೂ ಆಗಬೇಕಿದೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಕಚೇರಿ ಖಾಲಿ ಖಾಲಿ: ೩೦ ಹಾಸಿಗೆಯ ಆಸ್ಪತ್ರೆಯಾಗಿದ್ದ ಬಂಟ್ವಾಳದ ಸರ್ಕಾರಿ ಆಸ್ಪತ್ರೆ ೧೦೦ ಹಾಸಿಗೆಯ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿ ಸಾಕಷ್ಟು ಅಗತ್ಯ ಸೌಲಭ್ಯಗಳು, ಸುಧಾರಿತ ವೈದ್ಯಕೀಯ ಯಂತ್ರೋಪಕರಣ ಆಸ್ಪತ್ರೆಗೆ ಒದಗಿ ಬಂದಿದೆ. ಆದರೆ ಅಗತ್ಯ ಬೇಕಿರುವ ಸಿಬ್ಬಂದಿಯೇ ತಕ್ಕಷ್ಟು ಇಲ್ಲದಿರುವುದರಿಂದ ಆಸ್ಪತ್ರೆ ಸಮಸ್ಯೆಯ ಆಗರವಾಗಿದೆ. ೮೨ ಮಂಜೂರಾದ ಹುದ್ದೆಗಳ ಪೈಕಿ ೪೪ ಹುದ್ದೆಗಳು ಖಾಲಿ ಇವೆ. ಕಚೇರಿಯಲ್ಲಿ ಆಡಳಿತ ವೈದ್ಯಾಧಿಕಾರಿ ಹಾಗೂ ಸಹಾಯಕ ಆಡಳಿತ ವೈದ್ಯಾಧಿಕಾರಿ ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, ಕಚೇರಿ ಅಧೀಕ್ಷಕ, ೫ ಕಚೇರಿ ಕ್ಲಕ್ ಹುದ್ದೆಗಳು ಖಾಲಿ ಉಳಿದಿವೆ. ೩೩ ಗ್ರೂಪ್ ಡಿ ಹುದ್ದೆಗಳ ಪೈಕಿ ೩೧ ಸ್ಥಾನ ಖಾಲಿ ಇದೆ. ಈ ಸ್ಥಾನಕ್ಕೆ ೧೮ ಮಂದಿ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಲಾಗಿತ್ತಾದರೂ ಅರ್ಥಿಕ ಸಂಕಷ್ಟದ ನೆಪದಿಂದ ಈ ಸಿಬ್ಬಂದಿಯನ್ನು ಕೆಲ ದಿನಗಳಿಂದ ಕೆಲಸದಿಂದ ವಜಾಗೊಳಿಸಲಾಗಿದ್ದು, ಇಬ್ಬರು ಸಿಬ್ಬಂದಿ ಮಾತ್ರ ಕರ್ತವ್ಯನಿರತರಾಗಿದ್ದಾರೆ. ೨ ವೈದ್ಯ, ೨ ಲ್ಯಾಬ್ ಟೆಕ್ನಿಷಿಯನ್, ೨ ಫಾರ್ಮಸಿಸ್ಟ್, ೧ ಎಕ್ಸ್‌ರೇ ಟೆಕ್ನಿಷಿಯನ್ ಹುದ್ದೆಗಳು ಖಾಲಿಯಾಗಿವೆ. ಪ್ರತಿದಿನ ೬೦೦ ಮಂದಿ ಹೊರ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ೪೦ರಿಂದ ೫೦ ಮಂದಿ ಒಳ ರೋಗಿಯಾಗಿ ದಾಖಲಾಗುತ್ತಾರೆ. ಲಭ್ಯವಿರುವ ಸಿಬ್ಬಂದಿ ಬಳಸಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಈ ಆಸ್ಪತ್ರೆಯಲ್ಲಿದೆ.

ಸಿಬ್ಬಂದಿ ನಡವಳಿಕೆ ಬಗ್ಗೆ ಅಸಮಾಧಾನ: ಆಸ್ಪತ್ರೆಯ ರೋಗಿಗಳೊಂದಿಗೆ ಸಿಬ್ಬಂದಿ ಸರಿಯಾಗಿ ಸ್ಪಂದಿಸುವುದಿಲ್ಲ. ರೋಗಿಗಳಿಗೆ ಬೇಕಾಗುವ ಮಾಹಿತಿ ನೀಡುವುದಿಲ್ಲ. ವೈದ್ಯರನ್ನು ಕಾಣಬೇಕಾದರೆ ಗಂಟೆಗಟ್ಟಲೆ ಕಾಯಬೇಕು ಎನ್ನುವ ದೂರು ಸಾರ್ವಜನಿಕರಿಂದ ಹಿಂದಿನಿಂದಲೂ ಕೇಳಿಬರುತ್ತಿದೆ. ಇತ್ತೀಚೆಗೆ ವಿಪರೀತ ವಾಂತಿ ಭೇದಿ, ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ದಾಖಲು ಮಾಡಲು ವೈದ್ಯರೂ ಸೂಚಿಸಿದ್ದರೂ ಕರ್ತವ್ಯದಲ್ಲಿದ್ದ ಸ್ಟಾಫ್ ನರ್ಸ್ ನಿರಾಕರಿಸಿದ ಪರಿಣಾಮ ಎರಡು ಗಂಟೆ ತಡವಾಗಿ ರೋಗಿಗೆ ಚಿಕಿತ್ಸೆ ನೀಡಿದ್ದರಿಂದ ಸಾಕಷ್ಟು ತೊಂದರೆಯಾಗಿದೆ. ಈ ಬಗ್ಗೆ ಆಸ್ಪತ್ರೆಯ ಮೇಲಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದನೆ ಸಿಕ್ಕಿಲ್ಲ ಎನ್ನುವ ಸಂದೇಶ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.

ಶಾಸಕ ದಿಢೀರ್ ಭೇಟಿ: ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶದ ಸಂದೇಶ ವೈರಲ್ ಆದ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಕ್ ಮಂಗಳವಾರ ಬೆಳಗ್ಗೆ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಒಳ ಹಾಗೂ ಹೊರ ರೋಗಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ಸೇವೆ ಬಗ್ಗೆ ಮಾಹಿತಿ ಪಡೆದುಕೊಂಡರು. ರೋಗಿಗಳ ಅನುಕೂಲದ ದೃಷ್ಟಿಯಿಂದ ಆಸ್ಪತ್ರೆ ಪ್ರವೇಶ ಭಾಗದಲ್ಲಿ ವೈದ್ಯರ ದೂರವಾಣಿ ಸಂಪರ್ಕ ಸಂಖ್ಯೆ ಹಾಕುವಂತೆ ತಾಲೂಕು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದ್ದಾರೆ. ಜಿ.ಪಂ. ಕಾರ್ಯ ನಿರ್ವಾಹಣಾಧಿಕಾರಿಗೆ ದೂರವಾಣಿ ಕರೆ ಮಾಡಿ ವಜಾಗೊಂಡಿರುವ ೧೮ಮಂದಿ ಹೊರಗುತ್ತಿಗೆ ಕಾರ್ಮಿಕರನ್ನು ಮತ್ತೆ ನಿಯುಕ್ತಿಗೊಳಿಸುವಂತೆ ಮನವಿ ಮಾಡಿದರು. ಶೌಚಗೃಹವ್ನನು ಸ್ವಚ್ಛವಾಗಿಟ್ಟುಕೊಳ್ಳುವಂತೆ ವೈದ್ಯಾಧಿಕಾರಿಗೆ ಸೂಚಿಸಿದರು. ಈ ಸಂದರ್ಭ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸದಾಶಿವ, ಪ್ರಮುಖರಾದ ರಮಾನಾಥ ರಾಯಿ, ರಾಮದಾಸ ಬಂಟ್ವಾಳ ಹಾಜರಿದ್ದರು.

ಬದಲಾವಣೆ ಬೇಕಾಗಿದೆ: ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳು ಹೆಚ್ಚಾಗಿ ಬಡವರು, ಅನಕ್ಷರಸ್ಥರೇ ಆಗಿರುತ್ತಾರೆ. ಆದ್ದರಿಂದ ಆಸ್ಪತ್ರೆಯ ಸಿಬ್ಬಂದಿ ರೋಗಿಗಳೊಂದಿಗೆ ಮಾನವೀಯತೆ ಹಾಗೂ ಸೌಜನ್ಯದಿಂದ ವರ್ತಿಸುವಂತೆ ಆಸ್ಪತ್ರೆಯ ಆಡಳಿತ ನೋಡಿಕೊಳ್ಳಬೇಕು. ಆಸ್ಪತ್ರೆಯಲ್ಲಿ ಸಾಕಷ್ಟು ತಜ್ಞ ವೈದ್ಯರಿದ್ದರೂ ರೋಗಿಗಳಿಗೆ ಈ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ಓರ್ವ ವೈದ್ಯರ ಬಳಿ ಸಾಲುಗಟ್ಟಿ ನಿಲ್ಲುವ ದೃಶ್ಯ ನಿತ್ಯ ಕಂಡು ಬರುತ್ತಿದೆ. ಈ ಬಗ್ಗೆ ರೋಗಿಗಳಿಗೆ ಮಾಹಿತಿ ನೀಡಿ ರೋಗಿಗಳಿಗೆ ಅನುಕೂಲ ಕಲ್ಪಿಸಬೇಕು. ತಜ್ಞ ವೈದ್ಯರು ರಜೆ ಅಥವಾ ಅನ್ಯ ಕೆಲಸದ ನಿಮಿತ್ತ ಹೊರ ಹೋಗಿದ್ದಾಗ ಅವರ ತಪಾಸಣಾ ಕೊಠಡಿಯ ಬಳಿ ವೈದ್ಯರು ಇಲ್ಲದಿರುವ ಬಗ್ಗೆ ಮಾಹಿತಿ ಫಲಕ ಹಾಕಬೇಕು ಎನ್ನುವ ಸಲಹೆಗಳು ಜನರಿಂದ ಕೇಳಿ ಬಂದಿದೆ.

ನೋ ಪಾರ್ಕಿಂಗ್‌ನಲ್ಲೇ ಪಾರ್ಕಿಂಗ್: ರೋಗಿಗಳೊಂದಿಗೆ ಅವರನ್ನು ಕರೆ ತರುವ ಮಂದಿಗೂ ತಾಳ್ಮೆ ಅಗತ್ಯ ಬೇಕಿದೆ. ವೈದ್ಯರು ಎಲ್ಲ ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆ ನೀಡಬೇಕಾಗಿರುವುದರಿಂದ ಆಸ್ಪತ್ರೆಯ ಹೊರ ಆವರಣ ಕಿರಿದಾಗಿದ್ದು ಅಲ್ಲಿ ನೋಪಾರ್ಕಿಂಗ್ ಎನ್ನುವ ಸೂಚನಾ ಬರಹವಿದ್ದರೂ ಅದೇ ಜಾಗದಲ್ಲಿ ವಾಹನ ಪಾರ್ಕಿಂಗ್ ಮಾಡಲಾಗುತ್ತಿದೆ. ಕೆಲವೊಮ್ಮೆ ಆಸ್ಪತ್ರೆ ಆವರಣದೊಳಗೆ ವಾಹನ ದಟ್ಟಣೆ ನಿಯಂತ್ರಿಸುವುದೇ ಹರಸಾಹಸವಾಗುತ್ತಿದೆ ಎನ್ನುತ್ತಾರೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸದಾಶಿವ, ಆಸ್ಪತ್ರೆಯ ಆಡಳಿತ, ಸಿಬ್ಬಂದಿ, ರೋಗಿಗಳ ಮಧ್ಯೆ ಅನ್ಯೋನ್ಯತೆ ಇದ್ದಾಗ ಲಭ್ಯವಿರುವ ವ್ಯವಸ್ಥೆಯನ್ನು ಉತ್ತಮ ಪಡಿಸಿಕೊಳ್ಳಲು ಸಾಧ್ಯವಿದೆ.

Stay connected

278,753FansLike
588FollowersFollow
625,000SubscribersSubscribe

ವಿಡಿಯೋ ನ್ಯೂಸ್

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...