ಬಂದ್​ಗೆ ಜಿಲ್ಲೆಯಲ್ಲಿ ಸ್ಪಂದನೆ

ಕಾರವಾರ: ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಖಂಡಿಸಿ, ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಕಠಿಣ ಕಾನೂನು ಜಾರಿಗೆ ಆಗ್ರಹಿಸಿ ಸೋಮವಾರ ಭಾರತೀಯ ವೈದ್ಯಕೀಯ ಸಂಘ ರಾಷ್ಟ್ರಾದ್ಯಂತ ಕರೆ ನೀಡಿದ್ದ ಖಾಸಗಿ ಆಸ್ಪತ್ರೆಗಳ ಬಂದ್​ಗೆ ಜಿಲ್ಲೆಯಲ್ಲೂ ಸ್ಪಂದನೆ ದೊರಕಿದೆ.

ಜಿಲ್ಲೆಯ ನೂರಕ್ಕೂ ಅಧಿಕ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳು ಬಂದ್ ಆಗಿದ್ದವು. ಒಳ ರೋಗಿಗಳ ವಿಭಾಗ ಹಾಗೂ ತುರ್ತು ಚಿಕಿತ್ಸೆಗಳನ್ನು ಮಾತ್ರ ಸ್ವೀಕರಿಸಲಾಯಿತು. ಸರ್ಕಾರಿ ಆಸ್ಪತ್ರೆಗಳ ವೈದ್ಯರು ಕೆಲವೆಡೆ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲವೆಡೆ ದಿನಕ್ಕಿಂತ ಹೆಚ್ಚು ರೋಗಿಗಳ ಸಂಖ್ಯೆ ಕಂಡುಬಂತು.

ಬ್ಯಾಂಡೇಜ್ ಧರಿಸಿ ಪ್ರತಿಭಟನೆ: ಕಾರವಾರದ ಸರ್ಕಾರ ವೈದ್ಯಕೀಯ ಕಾಲೇಜ್​ನ ಎಂಬಿಬಿಎಸ್ ವಿದ್ಯಾರ್ಥಿಗಳು ತಲೆಗೆ ಬ್ಯಾಂಡೇಜ್ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಒತ್ತಾಯಿಸಿದರು.

Leave a Reply

Your email address will not be published. Required fields are marked *