16 C
Bangalore
Thursday, December 12, 2019

ಬದಲಾದ ಜೀವನ ಶೈಲಿ ಮಧುಮೇಹಕ್ಕೆ ದಾರಿ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಚಿಕ್ಕಮಗಳೂರು: ಆಧುನಿಕ ಕಾಲದಲ್ಲಿ ಆಹಾರ ಪದ್ಧತಿ ಹಾಗೂ ಜೀವನ ಶೈಲಿಯಿಂದಲೇ 30ರಿಂದ 40 ವರ್ಷದೊಳಗಿನ ಯುವ ಸಮೂಹ ಮಧುಮೇಹ ರೋಗಕ್ಕೆ ತುತ್ತಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಸಾಂಕ್ರಾಮಿಕ ವಿಭಾಗದ ಉಪನಿರ್ದೇಶಕ ಎಚ್.ವಿ.ರಂಗಸ್ವಾಮಿ ವಿಷಾದಿಸಿದರು.

ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಏರ್ಪಡಿಸಿದ್ದ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮದಲ್ಲಿ ಮಧುಮೇಹ ಕುರಿತ ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದರು.

2020ರ ವೇಳೆಗೆ ಭಾರತ ಮಧುಮೇಹಿಗಳ ತವರೂರಾಗಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಭಿಪ್ರಾಯ ಪಟ್ಟಿದೆ. ಇದಕ್ಕೆ ಪುಷ್ಠಿ ನೀಡುವಂತೆ 2000ದಲ್ಲಿ ಭಾರತದಲ್ಲಿ 31.7 ದಶಲಕ್ಷದಷ್ಟಿದ್ದ ಮಧುಮೇಹಿಗಳ ಸಂಖ್ಯೆ ಈಗ 62.4 ದಶಲಕ್ಷ ಮೀರಿದೆ. ಜಗತ್ತಿನ ಪ್ರತಿ 7ರಲ್ಲಿ ಒಬ್ಬರಿಗೆ ಮಧುಮೇಹ ಇದೆ ಎಂದರು.

ಭಾರತೀಯ ಆಹಾರ ಪದ್ಧತಿ ಅಳವಡಿಸಿಕೊಂಡು ಪ್ರತಿದಿನ ವ್ಯಾಯಾಮ ಮಾಡಿದರೆ ಮಾತ್ರ ಮಧುಮೇಹದಿಂದ ದೂರ ಇರಬಹುದು. ಯುವ ಸಮೂಹದಲ್ಲಿ ಬದಲಾದ ಆಹಾರ ಹಾಗೂ ಜೀವನ ಶೈಲಿ ಬದುಕಿಗೆ ದುಬಾರಿಯಾಗಿದೆ ಎಂದರು.

ಭಾರತ ಮಧುಮೇಹಿಗಳ ತವರೂರಾಗಿ ರೂಪುಗೊಳ್ಳುತ್ತಿದೆ. ಯುವಜನರ ಜತೆ ಮಕ್ಕಳಲ್ಲೂ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ಆತಂಕಕಾರಿ. ಯುವ ಸಮೂಹ ಹೆಚ್ಚು ಕ್ರಿಯಾಶೀಲರಾಗಬೇಕು. ಆಲಸ್ಯ ತೊರೆಯುವ ಜತೆಗೆ ಜಂಕ್ ಫುಡ್ ತಿನ್ನುವುದನ್ನೂ ತ್ಯಜಿಸಬೇಕು ಸಲಹೆ ನೀಡಿದರು.

ಜಿಪಂ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದರ ಜತೆಗೆ ಪ್ರತಿದಿನ ಯೋಗ, ಧ್ಯಾನ ಮಾಡಿ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್​ಕುಮಾರ್ ಮಾತನಾಡಿ, ಜನರು ಯಾವುದೇ ಸಮಸ್ಯೆ ಇದ್ದರೂ ವೈದ್ಯರ ಬಳಿ ಮುಕ್ತವಾಗಿ ಹೇಳಿಕೊಂಡಾಗ ಸೂಕ್ತ ಪರಿಹಾರ ಮತ್ತು ಚಿಕಿತ್ಸೆ ಪಡೆಯಬಹುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರಭು, ಜಿಲ್ಲಾ ಸಂಯೋಜಕ ಡಾ. ಮಾಲತೇಶ್, ಮಕ್ಕಳ ತಜ್ಞ ಡಾ.ನಾಗಸಿಂಹ, ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ಜಿಲ್ಲಾ ಆಶಾ ಮೇಲ್ವಿಚಾರಕಿ ಜ್ಯೋತಿ, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬೇಬಿ ಇದ್ದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...