25.5 C
Bangalore
Monday, December 16, 2019

ಬನವಾಸಿ ಕದಂಬೋತ್ಸವ ಮುಂದೂಡಿಕೆ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಶಿರಸಿ: ಬನವಾಸಿಯ ಕದಂಬೋತ್ಸವವನ್ನು ಮುಂದೂಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮಂಗನ ಕಾಯಿಲೆ ಕಾರಣ ಉತ್ಸವ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದ್ದರೂ, ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಅನುಮಾನಗಳು ತಲೆದೋರಿವೆ.

- Advertisement -

ಉತ್ಸವದ ಮುಂದಿನ ದಿನಾಂಕವನ್ನು ಘೊಷಣೆ ಮಾಡದಿರುವುದರಿಂದ ಈ ವರ್ಷ ಕದಂಬೋತ್ಸವ ನಡೆಯಲಿಕ್ಕಿಲ್ಲ ಎಂಬ ಆತಂಕವೂ ಸಾರ್ವಜನಿಕರನ್ನು ಕಾಡುತ್ತಿದೆ.

ಕನ್ನಡಿಗರ ಮೊದಲ ರಾಜಧಾನಿ ಬನವಾಸಿ. ಪಂಪ ನಾಡಿನ ಕಂಪು ಎಲ್ಲೆಡೆ ಪಸರಿಸಲಿ ಎಂಬ ಉದ್ದೇಶದಿಂದ ಕದಂಬೋತ್ಸವ ಆಚರಿಸಲಾಗುತ್ತಿದೆ. ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಳ್ಳುವ ಬದಲು ಇತ್ತೀಚಿನ ವರ್ಷಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಉದ್ಘಾಟನೆಗೊಳ್ಳುತ್ತಿದೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಕದಂಬೋತ್ಸವ ಈ ಬಾರಿ ಫೆಬ್ರವರಿ 9ಕ್ಕೆ ನಿಗದಿಯಾಗಿತ್ತು. ಅಲ್ಲದೆ, ಸಿದ್ಧತೆಯೂ ಭರದಿಂದ ಸಾಗಿತ್ತು. ಆದರೆ, ಮಂಗನ ಕಾಯಿಲೆಯು ಕದಂಬೋತ್ಸವವನ್ನು ಮುಂದೂಡುವಂತೆ ಮಾಡಿದೆ.

ಬನವಾಸಿ ಭಾಗದಲ್ಲಿ ಸತ್ತ ಮಂಗಗಳಲ್ಲಿ ನರೂರಿನಲ್ಲಿ ಮಾತ್ರ ಕೆಎಫ್​ಡಿ ವೈರಸ್ ಪತ್ತೆಯಾಗಿದೆ. ಕದಂಬೋತ್ಸವ ಮೈದಾನದ ಸಮೀಪದಲ್ಲಿ ಸತ್ತಿದ್ದ ಮಂಗನಲ್ಲಿ ಕೆಎಫ್​ಡಿ ವೈರಸ್ ಕಂಡುಬರದ ಹಿನ್ನೆಲೆಯಲ್ಲಿ ಸ್ಥಳೀಯರು ನಿರಾಳಗೊಂಡಿದ್ದರು. ಆದರೂ ಮಂಗನ ಕಾಯಿಲೆ ಕಾರಣ ಮುಂದೊಡ್ಡಿ ಉತ್ಸವ ರದ್ದು ಮಾಡಲಾಗಿದೆ. ಅಲ್ಲದೆ, ಜಿಲ್ಲಾಡಳಿತವು ಉತ್ಸವದ ಮುಂದಿನ ದಿನಾಂಕವನ್ನೂ ಪ್ರಕಟಿಸಿಲ್ಲ. ಲೋಕಸಭೆ ಚುನಾವಣೆ ದಿನಾಂಕ ಸದ್ಯದಲ್ಲಿಯೇ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕದಂಬೋತ್ಸವ ಆಚರಿಸಲು ಸಾಧ್ಯವಾಗದೇ ಇರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ರಾಜಕೀಯ ಮೇಲಾಟ ?

ಕದಂಬೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದರೂ ಒಮ್ಮೆಲೇ ಮುಂದೂಡಿದ್ದರ ಹಿಂದೆ ರಾಜಕೀಯ ಕೈಗಳು ಕಾಣದ ಕೆಲಸ ಮಾಡಿವೆ ಎಂಬ ಗುಸುಗುಸು ಎದ್ದಿದೆ. ಫೆ. 7ರಂದು ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆಯಾಗಲಿದೆ. ಈ ವೇಳೆ ಜಿಲ್ಲೆಯ ಕೆಲ ಶಾಸಕರು ಸಕ್ರಿಯ ಪಾತ್ರ ವಹಿಸಬಹುದಾದ ಕಾರಣ ಕದಂಬೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಅಲ್ಲದೆ, ರಾಜಕೀಯ ಅರಾಜಕತೆಯ ವೇಳೆ ಕದಂಬೋತ್ಸವ ನಡೆಸುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಉತ್ಸವವನ್ನು ಮುಂದೂಡಲು ಮಂಗನ ಕಾಯಿಲೆ ಎಂಬ ಅಸ್ತ್ರ ಪ್ರಯೋಗಿಸಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ರಾಜ್ಯ ಸರ್ಕಾರಕ್ಕೆ ಕದಂಬೋತ್ಸವ ಆಚರಿಸಲು ಮನಸ್ಸಿಲ್ಲ. ಡಿ. 26 ಮತ್ತು 27ಕ್ಕೆ ಆಚರಿಸಬೇಕಿದ್ದ ಕದಂಬೋತ್ಸವವನ್ನು ಒಂದಿಲ್ಲೊಂದು ಕಾರಣ ನೀಡಿ ಪ್ರತಿ ವರ್ಷವೂ ಮುಂದೂಡುತ್ತಿದೆ.

– ಗಣೇಶ ಸಣ್ಣಲಿಂಗಣ್ಣನವರ್, ಬನವಾಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ.

ಡಿಸೆಂಬರ್​ನಲ್ಲಿಯೇ ಕದಂಬೋತ್ಸವ ನಡೆದಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಮಂಗನ ಕಾಯಿಲೆ ಇರುವ ಈ ದಿನಗಳಲ್ಲಿ ಕದಂಬೋತ್ಸವ ನಿಗದಿತ ದಿನಾಂಕದಂದೇ ಆಚರಿಸಿ ಎಂದು ಆಗ್ರಹಿಸುವುದೂ ಕಷ್ಟವಾಗಿದೆ.

– ಬಸವರಾಜ ದೊಡ್ಮನಿ, ಜಿಲ್ಲಾ ಪಂಚಾಯಿತಿ ಸದಸ್ಯ

ಬನವಾಸಿ ಭಾಗದಲ್ಲಿ ಮಂಗನ ಕಾಯಿಲೆಯಿಂದ ಬಳಲಿದವರು ಒಬ್ಬರೂ ಇಲ್ಲ. ಬನವಾಸಿ ಭಾಗದ ಶೇ. 99ರಷ್ಟು ಜನಕ್ಕೆ ನಿಗದಿತ ದಿನಾಂಕದಂದೇ ಕದಂಬೋತ್ಸವ ನಡೆಯಲಿ ಎಂಬ ಆಶಯ ಇದೆ.

– ಶ್ರೀಲತಾ ಕಾಳೇರಮನೆ, ತಾ. ಪಂ. ಅಧ್ಯಕ್ಷೆ, ಶಿರಸಿ

ಡಿಸಿ ಅಧಿಕೃತ ಪ್ರಕಟಣೆ

ಕಾರವಾರ: ಮಂಗನ ಕಾಯಿಲೆಯ ಭೀತಿ ಶಿವಮೊಗ್ಗದಿಂದ ಉತ್ತರ ಕನ್ನಡಕ್ಕೂ ವ್ಯಾಪಕವಾಗಿ ವಿಸ್ತರಿಸಿದ್ದು, ಇದು ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರುವ ಕದಂಬೋತ್ಸವದ ಮೇಲೂ ಪರಿಣಾಮ ಬೀರಿದೆ.

ಶಿರಸಿ ತಾಲೂಕಿನ ಬನವಾಸಿಯಲ್ಲಿ ಫೆಬ್ರವರಿ 9 ಮತ್ತು 10ರಂದು ನಡೆಯಬೇಕಿದ್ದ ಕದಂಬೋತ್ಸವವನ್ನು ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕದಂಬೋತ್ಸವಕ್ಕೆ ಜಿಲ್ಲಾಡಳಿತ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳನ್ನು ನಡೆಸಿತ್ತು. ಬನವಾಸಿ ಮತ್ತು ಸಮೀಪದಲ್ಲಿ ಮಂಗಗಳು ಶಂಕಾಸ್ಪದವಾಗಿ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಎಲ್ಲ ಅಧಿಕಾರಿಗಳು ರೋಗ ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿರುವುದರಿಂದ ಈ ದಿನಾಂಕಗಳಂದು ನಡೆಯಬೇಕಿದ್ದ ಕದಂಬೋತ್ಸವನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಈಗಾಗಲೇ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಶಂಕಿತ ಪ್ರದೇಶಗಳಲ್ಲಿ ಲಸಿಕೆಗಳನ್ನು ಹಾಕಲಾಗಿದೆ. ಕಾಡಿನ ಸಂಪರ್ಕದಲ್ಲಿರುವ ಗ್ರಾಮಗಳ ಜನರಿಗೆ ಔಷಧಗಳ ವಿತರಣೆ, ಡಿಎಂಪಿ ತೈಲ ಲೇಪನ ಹಾಗೂ ದನ-ಕುರಿ ಕೊಟ್ಟಿಗೆಗಳಿಗೆ ಉಣ್ಣೆ ನಿಯಂತ್ರಣ ಔಷಧಗಳ ಸಿಂಪಡಣೆ ಸೇರಿ ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೆ ಜಿಲ್ಲೆಗೆ ಹೆಚ್ಚುವರಿ ಔಷಧಗಳನ್ನು ಸರಬರಾಜು ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಕದಂಬೋತ್ಸವ ನಡೆಯಬೇಕಿದ್ದ ಬನವಾಸಿಯಲ್ಲಿ ಇತ್ತೀಚೆಗೆ ಮಂಗವೊಂದು ಮೃತಪಟ್ಟು ಅದರ ರಕ್ತದ ಮಾದರಿಯನ್ನು ಪರೀಕ್ಷಿಸಲಾಗಿ ಅದು ಋಣಾತ್ಮಕವಾಗಿರುವುದು ಸ್ಪಷ್ಟವಾಗಿದೆ. ಆದರೆ ಬನವಾಸಿಯಿಂದ 10 ಕಿಲೋ ಮೀಟರ್ ದೂರದಲ್ಲಿ ಮೃತಪಟ್ಟಿರುವ ಮಂಗದ ಮಾದರಿಯಲ್ಲಿ ರೋಗವಿರುವುದು ಖಚಿತವಾಗಿದೆ. ಇದರಿಂದ ಈ ಕ್ರಮ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...