ಬಸವಣ್ಣ ಸಮಾನತೆಯ ಹರಿಕಾರ

blank

ಚಿಟಗುಪ್ಪ: ಸಾಮಾಜಿಕ ಸುಧಾರಕ, ಕ್ರಾಂತಿಕಾರಿ, ಆಡಳಿತಗಾರ, ಅರ್ಥಶಾಸ್ತ್ರಜ್ಞ, ವಿವೇಚನಾವಾದಿ, ಮುಕ್ತ ಚಿಂತಕ, ವಿಶ್ವದ ತತ್ವ ಜ್ಞಾನಿ ಅಣ್ಣ ಬಸವಣ್ಣನವರು ಎಂದು ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಸ್ವಾಮೀಜಿ ನುಡಿದರು.

ಪಟ್ಟಣದ ಗಾಂಧಿ ವೃತ್ತದಲ್ಲಿ ೪೫ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದ ಶ್ರೀಗಳು, ಬಸವಣ್ಣನವರು ಸಮಾನತೆಯ ಹರಿಕಾರರು, ಅವರು ಜಾತಿರಹಿತ ಸಮಾಜವನ್ನು ಕಟ್ಟಿದರು. ಅಂದು ಅವರು ಕಟ್ಟಿದ ಅನುಭವ ಮಂಟಪವು ಸೌಹಾರ್ದತೆ, ಸಹೋದರತ್ವ, ಭಾವೈಕ್ಯತೆಯ ಮೌಲ್ಯಾಧಾರಿತ ಸಿದ್ಧಾಂತಗಳ ಸಂದೇಶಗಳನ್ನು ಜಾಗತಿಕ ಪ್ರಪಂಚಕ್ಕೆ ಸಾರಿದೆ. ಈ ನಿಟ್ಟಿನಲ್ಲಿ ಬಸವಾದಿ ಶರಣರ ಉದ್ದೇಶಗಳು ಈಡೇರಿಸುವದಕ್ಕಾಗಿ ನಾವೆಲ್ಲರೂ ಇಂದು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಚಾಲಕ ಸಂಗಮೇಶ ಜವಾದಿ ಮಾತನಾಡಿ, ಪ್ರತಿ ವರ್ಷವೂ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ ಸಾನಿಧ್ಯದಲ್ಲಿ ಶರಣ ಕಮ್ಮಟ ಅನುಭವ ಮಂಟಪ ಉತ್ಸವವೂ ಯಶಸ್ವಿಯಾಗಿ ನಡೆದುಕೊಂಡು ಬರುತ್ತದೆ. ಈದಿಗ ೪೫ನೇ ಶರಣ ಕಮ್ಮಟ, ಅನುಭವ ಮಂಟಪ ಉತ್ಸವಕ್ಕೆ ಸರ್ವ ರೀತಿಯಿಂದ ಸಜ್ಜಾಗಿದೆ. ನ.೨೩,೨೪ರಂದು ಅತ್ಯಂತ ವೈಭವದಿಂದ, ಅದ್ದೂಯಾಗಿ ಆಚರಿಸಲಾಗುತ್ತದೆ. ಈ ಉತ್ಸವಕ್ಕೆ ಸರ್ವರಿಗೂ ಆದರದ ಸ್ವಾಗತವಿದೆ ಎಂದರು.

ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷೆ ಇಂದುಮತಿ ಗಾರಂಪಳ್ಳಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಬಸವದಳದ ಅಧ್ಯಕ್ಷ ರಾಜು ದೇವಣಿ, ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಭೀಮಶೆಟ್ಟಿ ವಡ್ಡನಕೇರಾ, ಚಂದ್ರಶೇಖರ ತಂಗಾ, ಪ್ರಮುಖರಾದ ಅನೀಲಕುಮಾರ ಸಿರಿಗಿರಿ, ಶಾಂತಕುಮಾರ ಗೋಪಾ, ಗುರುನಾಥ ಮಾಹಾಜನ, ಮನೋಹರ ಜಕ್ಕಾ, ಶೌರ್ಯ ಜವಾದಿ, ಚನ್ನವೀರ ಲಾತೂರೆ, ಶ್ರಾವ್ಯ ಜವಾದಿ ಇತರರಿದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…