ಬಸ್ ನಿಲ್ದಾಣಕ್ಕೆ ಸೌಕರ್ಯ ಒದಗಿಸಿ

Latest News

ಚೆನ್ನೈ ರೈಲು ನಿಲ್ದಾಣವೊಂದರಲ್ಲಿ ಸೆಲೆಬ್ರಿಟಿ ನಾಯಿ: ಪ್ರಯಾಣಿಕರನ್ನು ಎಚ್ಚರಿಸುವ ಶ್ವಾನದ ಕತೆ ಬಲು ರೋಚಕ!

ಚೆನ್ನೈ: ಮಾಲೀಕನಿಂದ ಪರಿತ್ಯಕ್ತಗೊಂಡಿರುವ ನಾಯಿಯೊಂದು ಚೆನ್ನೈನ ಪಾರ್ಕ್​ ಟೌನ್​ ರೈಲ್ವೆ ನಿಲ್ದಾಣದ ದಿನ ನಿತ್ಯದ ಪ್ರಯಾಣಿಕರ ನಡುವೆ ಮಿನಿ ಸೆಲೆಬ್ರಿಟಿಯಾಗಿ ಮಿಂಚುತ್ತಿದೆ. ರೈಲು ಹಳಿಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ಭಟ್ಕಳ: ಪ್ರವಾಸಿ ಕೇಂದ್ರ ಮುರ್ಡೆಶ್ವರ ಬಸ್ ನಿಲ್ದಾಣದಲ್ಲಿ ಮೂಲಸೌಕರ್ಯ ಸೇರಿ ಅಭಿವೃದ್ಧಿ ಕಾರ್ಯಗಳಿಗೆ ಯಾವ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕಳೆದ ವರ್ಷದಿಂದ ತಿಳಿಸಿದರೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಸುನೀಲ ನಾಯ್ಕ ಕೆಎಸ್​ಆರ್​ಟಿಸಿ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಇಲ್ಲಿನ ತಾಪಂ ಸಭಾಭವನದಲ್ಲಿ ನಡೆದ ತ್ರೖೆಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರು.

ಮುರ್ಡೆಶ್ವರ ಪ್ರಸಿದ್ಧ ಕ್ಷೇತ್ರ. ಇಲ್ಲಿನ ನಿಲ್ದಾಣದಲ್ಲಿ ಕನಿಷ್ಠ ಸೌಲಭ್ಯವನ್ನಾದರೂ ಪ್ರಯಾಣಿಕರಿಗೆ ಒದಗಿಸಿ. ಭಟ್ಕಳದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ. ಮಳೆಗಾಲದಲ್ಲಿ ಪ್ರಯಾಣಿಕರು, ವಿದ್ಯಾರ್ಥಿಗಳು ನಿಲ್ಲಲೂ ಆಗುತ್ತಿಲ್ಲ. ತುರ್ತು ಕ್ರಮವನ್ನೂ ಏಕೆ ಕೈಗೊಂಡಿಲ್ಲ ಎಂದು ಸಭೆಯಲ್ಲಿದ್ದ ಶ್ರೀಧರ ಭಟ್ ಅವರನ್ನು ಕೇಳಿದರು. ಇದಕ್ಕೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಮಾಹಿತಿ ಪಡೆದುಕೊಂಡು ಬನ್ನಿ ಎಂದು ಅವರನ್ನು ಸಭೆಯಿಂದ ಹೊರಕ್ಕೆ ಕಳುಹಿಸಲಾಯಿತು.

ನೆರೆಯ ಉಡುಪಿ ಜಿಲ್ಲೆಯಲ್ಲಿ ಸುವರ್ಣ ತ್ರಿಭುಜ ಮೀನುಗಾರಿಕೆ ದೋಣಿಯಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 12 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಆದರೆ, ಭಟ್ಕಳ ತಾಲೂಕಿನ ಇಬ್ಬರು ಮೀನುಗಾರರ ಕುಟುಂಬಕ್ಕೆ 7 ಲಕ್ಷ ರೂ. ನೀಡಲಾಗಿದೆ. ಈ ರೀತಿಯ ತಾರತಮ್ಯ ಮಾಡದೇ ಪೂರ್ಣ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ವಿ.ಎನ್. ಬಾಡಕರ್ ಹಾಗೂ ಮೀನುಗಾರಿಕೆ ಇಲಾಖೆ ಅಧಿಕಾರಿ ರವಿ ಅವರಿಗೆ ಶಾಸಕರು ಸೂಚಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರತಿಯೊಬ್ಬ ರೈತರಿಗೂ ತಲುಪಿಸಬೇಕು. ಯಾವ ರೈತರೂ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.

ಡಿಜಿಟಲ್ ಮೀಟರ್​ನಲ್ಲಿ ಹೆಚ್ಚುವರಿ ವಿದ್ಯುತ್ ಬಿಲ್ ಬರುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದರ ಬಗ್ಗೆ ಪರಿಶೀಲಿಸಿ, ಬಿಲ್ ಸರಿಯಾಗಿ ಬರುವಂತೆ ನೋಡಿಕೊಳ್ಳಿ ಎಂದು ಹೆಸ್ಕಾಂ ಇಂಜಿನಿಯರ್ ಕೆ.ಜಿ. ಮಂಜುನಾಥ್ ಅವರಿಗೆ ಸೂಚಿಸಿದರು.

ಹಲವು ಶಾಲೆಗಳು ಮಳೆಗಾಲದಲ್ಲಿ ಸೋರುತ್ತಿವೆ. ದುರಸ್ತಿ ಕಂಡಿಲ್ಲ. ಅಲ್ಲದೆ, ಕೆಲವೆಡೆ ಶಿಕ್ಷಕರು ಮನಸ್ಸಿಗೆ ಬಂದ ಸಮಯಕ್ಕೆ ಶಾಲೆಗೆ ಬರುತ್ತಾರೆ ಎನ್ನುವ ದೂರುಗಳಿವೆ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ. ತಾಲೂಕಿನ ಎಸ್​ಎಸ್​ಎಲ್​ಸಿ ಶೇಕಡವಾರು ಫಲಿತಾಂಶ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಯಾವುದೇ ಶಾಲೆಗಳಲ್ಲಿ ಅಗತ್ಯ ದುರಸ್ತಿ ಇದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಬಿಇಒ ಎಂ.ಆರ್. ಮುಂಜಿ ಅವರಿಗೆ ತಿಳಿಸಿದರು.

ರೋಗಿಗಳಿಗೆ ಆಯುಷ್ಮಾನ್ ಭಾರತಕಾರ್ಡ್​ನಿಂದ ದೊರಕುವ ಸೌಲಭ್ಯಗಳು ನೇರವಾಗಿ ಫಲಾನುಭವಿಗಳಿಗೆ ರೋಗಿಗಳಿಗೆ ತಲುಪುವಂಥ ವ್ಯವಸ್ಥೆ ಮಾಡಬೇಕು ಎಂದು ಆರೋಗ್ಯಾಧಿಕಾರಿ ಡಾ. ಮೂರ್ತಿರಾಜ್ ಭಟ್​ಗೆ ಶಾಸಕರು ಸೂಚಿಸಿದರು.

ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ, ತಾಪಂ ಅಧ್ಯಕ್ಷ ಈಶ್ವರ ನಾಯ್ಕ, ತಾಪಂ ಇಒ ಪ್ರಭಾಕರ ಚಿಕ್ಕನಮನೆ, ಜಿಪಂ, ತಾಪಂ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...