ಬಾಗಲಕೋಟೆ ಸುತ್ತ ಬೋಟಿಂಗ್ ಡಿಪಿಆರ್ ಸಿದ್ಧಪಡಿಸಿ

blank

ಬಾಗಲಕೋಟೆ : ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾದ ಬಾಗಲಕೋಟೆ ನಗರ, ಹಲವು ಸಮಸ್ಯೆ ಎದುರಿಸುತ್ತಿದೆ. ಇಲ್ಲಿನ ವ್ಯಾಪಾರ-ವಹಿವಾಟಿಗೆ ಅನುಕೂಲ ಕಲ್ಪಿಸುವ ಜತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳಿವೆ. ಬಾಗಲಕೋಟೆ ಸುತ್ತಲಿನ ಹಿನ್ನೀರಿನಲ್ಲಿ ಬೋಟಿಂಗ್ ವ್ಯವಸ್ಥೆ ಕಲಿಸಿ, ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಸಮಗ್ರ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಬಿಟಿಡಿಎ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ವೈ. ಮೇಟಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕ ಮೋಹನರಾಜ್ ಅವರಿಗೆ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಿ, ಬರಲಿರುವ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲು ಪ್ರಸ್ತಾವನೆ ಸಿದ್ಧಪಡಿಸಬೇಕು ಎಂದು ಮನವಿ ಮಾಡಿದರು.

ವ್ಯಾಪಕವಾಗಿ ಹರಡಿಕೊಂಡಿರುವ ಹಿನ್ನೀರ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅವಕಾಶವಿದೆ. ಬಾಗಲಕೋಟೆಯ ಹಳೆಯ ಮುರನಾಳ ಬಳಿ ಹಿನ್ನೀರ ವ್ಯಾಪ್ತಿಯಿಂದ ನವನಗರ ಯೂನಿಟ್-2 ಮತ್ತು 3 ಸುತ್ತುವರಿದು, ಅಲ್ಲಿಂದ ಮಹಾರುದ್ರಪ್ಪನ ಹಳ್ಳದ ಬಳಿ ಪುನಃ ಹಿನ್ನೀರ ವ್ಯಾಪ್ತಿಗೆ ಸೇರಿಸುವಂತೆ ಸುಮಾರು 30 ಮೀಟರ್ ವ್ಯಾಪ್ತಿಯ ಕಾಲುವೆ ನಿರ್ಮಿಸಬೇಕು. ಆ ಮೂಲಕ ಬೋಟಿಂಗ್ ವ್ಯವಸ್ಥೆ ಮೂಲಕ ಇಡೀ ನಗರ ಪ್ರದಕ್ಷಿಣೆ ಹಾಕುವಂತಾಗಬೇಕು. ಇದರಿಂದ ಕಾಲುವೆ ಎರಡೂ ಬದಿಗೆ ಸ್ಥಳೀಯ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸುವ ಜತೆಗೆ ಇದೊಂದು ಪ್ರವಾಸಿ ತಾಣವಾಗಿ ನಿರ್ಮಿಸಲು ಅವಕಾಶವಿದೆ. ಈ ಕುರಿತು ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ, ಜಲ ಸಂಪನ್ಮೂಲ ಇಲಾಖೆಯ ಮೂಲಕ ಬಜೆಟ್‌ನಲ್ಲಿ ಮಂಜೂರಾತಿ ಕಲ್ಪಿಸಲು ಪ್ರಯತ್ನಿಸಬೇಕು ಎಂದು ಕೋರಿದರು.

ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರ ವ್ಯಾಪ್ತಿಯ ವಿವಿಧ ನೀರಾವರಿ ಯೋಜನೆಗಳಿಗೆ ಅನುದಾನ ನೀಡಬೇಕು. ಕೆಲ ಯೋಜನೆಗಳಿಗೆ ಮಂಜೂರಾತಿ ಕೊಟ್ಟರೂ, ಅನುದಾನ ಕೊಟ್ಟಿಲ್ಲ. ಹೀಗಾಗಿ ಕಾಮಗಾರಿ ನಡೆದಿಲ್ಲ. ಕೂಡಲೇ ನನ್ನ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಂಜೂರಾದ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಬಿಜೆಎನ್‌ಎಲ್‌ನಲ್ಲಿ ಕೈಗೊಂಡ ನಿರ್ಣದಯಂತೆ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದಲ್ಲಿ ಇದ್ದ ಕಾರ್ಪಸ್ ಫಂಡ್ ಅನ್ನು ನಿಗಮಕ್ಕೆ ಪಡೆಯಲಾಗಿದೆ. ಈ ಕಾರ್ಪಸ್ ಫಂಡ್‌ನಲ್ಲಿ ನವನಗರ ಯೂನಿಟ್-1 ಮತ್ತು 2ರ ನಿರ್ವಹಣೆ ಮಾಡಲಾಗುತ್ತಿತ್ತು. ಆ ಹಣ ನಿಗಮಕ್ಕೆ ಪಡೆದ ಹಿನ್ನೆಲೆ, ನವನಗರಗಳ ನಿರ್ವಹಣೆಗೆ ಸಮಸ್ಯೆ ಆಗುತ್ತಿದೆ. ಈಗಾಗಲೇ 384 ಕೋಟಿಯಲ್ಲಿ 100 ಕೋಟಿ ಅಷ್ಟೇ ಮರಳಿ ನೀಡಿದ್ದು ಇನ್ನೂ ಬಾಕಿ ಇರುವ 284 ಕೋಟಿ ರೂ ಗಳ ಕಾರ್ಪಸ್ ಫಂಡ್ ಕೂಡಲೇ ಮರಳಿ ಕೊಡಬೇಕು ಎಂದು ಮನವಿ ಮಾಡಿದರು.

ಅಲ್ಲದೇ ನವನಗರ ಯೂನಿಟ್-3ರಲ್ಲಿ ಸುಮಾರು 200 ಎಕರೆ ಭೂಮಿಯಲ್ಲಿ ಸಮಗ್ರ ಮಾರುಕಟ್ಟೆ ನಿರ್ಮಿಸಿ, ಹಳೆಯ ಬಾಗಲಕೋಟೆ, ವಿದ್ಯಾಗಿರಿ ಹಾಗೂ ನವನಗರ ವಿವಿಧೆಡೆ ಹರಿದು-ಹಂಚಿ ಹೋಗಿರುವ ಎಲ್ಲ ವ್ಯಾಪಾರ-ವಹಿವಾಟು ಒಂದೆಡೆ ನಡೆಸಲು ಅನುಕೂಲವಾಗುತ್ತದೆ. ಈ ಕುರಿತು ಬಿಟಿಡಿಎ ಸಭೆಯಲ್ಲೂ ಚರ್ಚಿಸಲಾಗಿದೆ. ಇದಕ್ಕಾಗಿ 2 ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಕಾಯ್ದಿರಿಸಬೇಕು ಎಂದು ಒತ್ತಾಯಿಸಿದರು.

ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಬಿವೃದ್ದಿ ಕಾಮಗಾರಿಗಳು, ನಗರದಲ್ಲಿ ಮುಳುಗಡೆಯಾದ ಸಂಘ-ಸಂಸ್ಥೆಗಳ ಮತ್ತು ದೇವಸ್ಥಾನ, ,ಮಸೀದಿ ನಿರ್ಮಾಣ ಕಾರ್ಯಕ್ಕೆ ಜಾಗೆ ಮಂಜೂರು ಬಗ್ಗೆ ಇನ್ನಿತರ ಜ್ವಲಂತ ಸಮಸ್ಯೆಗಳ ಬಗ್ಗೆ ಮತ್ತು ನೀರಾವರಿ ಯೋಜನೆಗೆ ಮತ್ತು ಪುನರ್ವಸತಿ ಕಾಮಗಾರಿಗಳಿಗೆ ಬಜೆಟ್ ನಲ್ಲಿ ಅನುದಾನ ಕಾಯ್ದಿರಿಸುವಂತೆ ಆಗ್ರಹಿಸಿದರು.

ಬಿಟಿಡಿಎ ಮುಖ್ಯ ಅಭಿಯಂತರ ಬಸವರಾಜ ಡಿ, ಕೆಬಿಜೆಎನ್‌ಎಲ್ ಹಣಕಾಸು ವ್ಯವಸ್ಥಾಪಕ ಲಕ್ಷಿಕಾಂತ, ಕಾಂಗ್ರೆಸ್‌ನ ಯುವ ಮುಖಂಡ ಹೊಳಬಸು ಶೆಟ್ಟರ ಮುಂತಾದವರು ಉಪಸ್ಥಿತರಿದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…