ಬಾರ್ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

ಶಿರಸಿ: ನಗರದ ಖಾಜಿ ಗಲ್ಲಿಯಲ್ಲಿ ಆರಂಭಿಸಲಾದ ಮದ್ಯದಂಗಡಿ ಯನ್ನು ಸ್ಥಳಾಂತರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿ ಮೂರು ತಿಂಗಳು ಕಳೆದರೂ ಯಾವುದೇ ಕ್ರಮವಾಗಿಲ್ಲ. ತಕ್ಷಣವೇ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಿವಾಸಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಬಾರ್ ತೆರೆದಿರುವ ಸ್ಥಳದಿಂದ 30 ಮೀ. ಅಂತರದಲ್ಲಿ ಅಂಗನವಾಡಿ ಕೇಂದ್ರವಿದೆ. ಸಮೀಪದಲ್ಲಿಯೇ ಮಸೀದಿ ಇದೆ. ಬಾರ್ ಮಾಲೀಕ ಈ ಎಲ್ಲ ಅಂಶಗಳನ್ನು ಮರೆಮಾಚಿ ಅನುಮತಿ ಪಡೆದುಕೊಂಡಿದ್ದಾನೆ. ಈ ಕುರಿತು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೂ ಮನವಿ ಸಲ್ಲಿಸಲಾಗಿತ್ತು. ಸ್ಥಳಾಂತರಿಸುವುದಾಗಿ ಆ ಸಂದರ್ಭದಲ್ಲಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ಯಾವುದೇ ಕ್ರಮವಾಗಿಲ್ಲ. ಇದರಿಂದಾಗಿ ಇಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಸಂಜೆಯ ವೇಳೆ ಮಹಿಳೆಯರು ಮತ್ತು ಮಕ್ಕಳು ಓಡಾಡದ ಸ್ಥಿತಿ ಉಂಟಾಗಿದೆ. ಇನ್ನಾದರೂ ಈ ಬಗ್ಗೆ ಲಕ್ಷ್ಯ ವಹಿಸಬೇಕು ಎಂದರು. ಬಳಿಕ ಮೆರವಣಿಗೆಯಲ್ಲಿ ತೆರಳಿ ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ನಗರಸಭೆ ಸದಸ್ಯ ದಯಾನಂದ ನಾಯಕ, ಸ್ಥಳೀಯ ಪ್ರಮುಖರಾದ ಅಬ್ಬಾಸ್ ತೋನ್ಸೆ, ಜಗದೀಶ ಗೌಡ, ಖಾದರ ಆನವಟ್ಟಿ, ಇಕ್ಬಾಲ್ ಬಿಳಗಿ, ಫಯಾಜ್ ಭರತನಳ್ಳಿ, ಫಜಲ್ ರೆಹಮಾನ್ ಇತರರಿದ್ದರು.

Leave a Reply

Your email address will not be published. Required fields are marked *