ಚಾಮರಾಜನಗರ: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯವು 2025ನೇ ಸಾಲಿನ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ (31-07-2025ಕ್ಕೆ ಅನ್ವಯವಾಗುವಂತೆ) 5 ವರ್ಷ ಮೇಲ್ಟಟ್ಟ ಹಾಗೂ 18 ವರ್ಷದೊಳಗಿನ ಎಲ್ಲಾ ಮಕ್ಕಳು ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿಯನ್ನು ವೆಬ್ ಸೈಟ್ ಠಿಠಿ://ಡಿಚ್ಟ.ಜಟ.ಜ್ಞಿ ಮೂಲಕ ಜು.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನ ಮೊದಲನೇ ಮಹಡಿಯ ಕೊಠಡಿ ಸಂಖ್ಯೆ 127ರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂ.ಸಂ. 08226-222354 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:cha chamarajanagara news