ಬಲ್ಳಾರಿ ಲೋಕಸಭೆ ಕ್ಷೇತ್ರ ಬಿಎಸ್ಪಿ ಅಭ್ಯರ್ಥಿಯಾಗಿ ಗೂಳಪ್ಪ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಬಿಎಸ್ ಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ಗೂಳಪ್ಪ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಮಾಜದಲ್ಲಿ ಬದಲಾವಣೆ ಬಯಸಿ, ಎಲ್ಲ ವರ್ಗದವರಿಗೆ ನ್ಯಾಯ ಸಿಗಬೇಕು. ಪ್ರತಿಯೊಬ್ಬರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ದೇಶದ ಅಭಿವೃದ್ಧಿಗಾಗಿ ಬಿಎಸ್ಪಿ ಪಕ್ಷದಿಂದ ದೇಶದಲ್ಲಿ ಹಾಗೂ ರಾಜ್ಯದ ೨೮ಕ್ಷೇತ್ರಗಳಲ್ಲಿ ಮಾಯಾವತಿಯವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂದು ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ರೈತರ ಮಗನಾಗಿ, ಕಾರ್ಮಿಕರೊಂದಿಗೆ ಕೆಲಸ ಮಾಡಿ ಅವರ ಕಷ್ಟ ನೋವುಗಳನ್ನು ಅರಿತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಲು ಹಾಗೂ ದೇಶದ ಪ್ರಧಾನಿಯಾಗಿ ಮಾಯಾವತಿಯವರನ್ನು ಆಯ್ಕೆ ಮಾಡಲು ಪಕ್ಷಕ್ಕೆ ಬೆಂಬಲ ನೀಡಿ ಹೆಚ್ಚಿನ ಮತಗಳನ್ನು ನೀಡುವ ಮೂಲಕ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಕೋರಿದರು.

Leave a Reply

Your email address will not be published. Required fields are marked *