ಬಿಜೆಪಿಗೆ ಮುಸ್ಲಿಮರು ಮತ ಹಾಕಲ್ಲ

ಚಿಂತಾಮಣಿ: ಮುಸ್ಲಿಮರು ಕಾಂಗ್ರೆಸ್​ಗೆ ಬೆಂಬಲ ನೀಡುತ್ತಾ ಬಂದಿದ್ದು, ಯಾವುದೇ ಕಾರಣಕ್ಕೂ ಕೋಮುವಾದಿ ಬಿಜೆಪಿಗೆ ಮತ ಹಾಕಲ್ಲ ಎಂದು ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆ ಹಾಗೂ ವಕ್ಪ್ ಖಾತೆ ಸಚಿವ ಜಮೀರ್ ಅಹಮದ್ ಹೇಳಿದರು.

ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಏಳು ಬಾರಿ ಗೆದ್ದಿರುವ ಕೆ.ಎಚ್.ಮುನಿಯಪ್ಪ ಈ ಬಾರಿಯೂ ಗೆಲುವು ಸಾಧಿಸಲಿದ್ದಾರೆ. ಕೆಲವರು ಅಲ್ಪಸಂಖ್ಯಾತರು ಕಾಂಗ್ರೆಸ್​ಗೆ ಮತ ಹಾಕಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಹಾಗೇನಾದರೂ ಮುಸ್ಲಿಮರು ಬಿಜೆಪಿಗೆ ಮತ ಹಾಕಿದರೆ ಅಂಥವರು ಮುಸ್ಲಿಮರೇ ಅಲ್ಲ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಹಮದ್ ಷಫೀಕ್, ಮುಖಂಡರಾದ ಅಮರ್, ಸಾಧಿಕ್, ಕೋತ್ತೂರು ಬಾಬು, ನವೀದ್, ಮಲಿಕ್, ಜಮೀಲ್, ಕೃಷ್ಣಪ್ಪ, ತಜ್ಮುಲ್ ಪಾಷಾ, ವಕೀಲ ರಹಮತ್ ಮತ್ತಿತರರಿದ್ದರು.