More

  ಬಿಜೆಪಿಯಿಂದ ಒಡೆದಾಳುವ ನೀತಿ

  ಯಾದಗಿರಿ: ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯ ಬರಗಾಲದಿಂದ ತತ್ತರಿಸಿದರೂ ಕೇಂದ್ರ ಸಕರ್ಾರ ನಯಾಪೈಸೆ ಪರಿಹಾರ ನೀಡದೆ ತಾರತಮ್ಯ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಕಿಡಿಕಾರಿದರು.


  ನಗರದ ವೈಷ್ಣವಿ ಫಂಕ್ಷನ್ ಹಾಲ್ನಲ್ಲಿ ಮಂಗಳವಾರ ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗ ತಾಲೂಕು ಘಟಕದ ನೂತನ ಅಧ್ಯಕ್ಷ ಭೀಮರಾಯ ಕಾಂಗ್ರೆಸ್ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಜಾತಿ, ಧರ್ಮದ ನಡುವೆ ಜಗಳ ಹಚ್ಚುವ ಮೂಲಕ ಭಾವನಾತ್ಮಕ ವಿಷಯಗಳನ್ನು ಕೈಗೆತ್ತಿಕೊಂಡು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಆ ಪಕ್ಷ ಎಂದಿಗೂ ಶೋಷಿತ, ದಲಿತರ ಮತ್ತು ಬಡವರಿಗೆ ಕಲ್ಯಾಣವಾಗುವ ಯೋಜನೆ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು.

  ಪ್ರಧಾನಿ ನರೇಂದ್ರ ಮೋದಿ, ರೈತರ ಸಾಲ ಮನ್ನಾ ಮಾಡಲಿಲ್ಲ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಕಾರ್ಯಕರ್ತರು ತಳಮಟ್ಟದಿಂದ ಪಕ್ಷ ಸಂಘಟಿಸಿ, ಈ ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿಯಲು ಶ್ರಮಿಸಬೇಕು. ನೂತನ ಪದಾಧಿಕಾರಿಗಳು ಬೂತ್ ಮಟ್ಟದಿಂದ ಪಕ್ಷ ಸಂಘಟಿಸುವಂತೆ ಮನವಿ ಮಾಡಿದರು.

  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಆರಬೋಳ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ನೀಲಕಂಠ ಬಡಿಗೇರ, ಮುಖಂಡ ಮಲ್ಲಿಕಾಜರ್ುನ ಪೂಜಾರಿ, ಆರ್.ಚನ್ನಬಸವ ವನದುರ್ಗ, ಗಿರೆಪ್ಪಗೌಡ ಬಾಣತಿಹಾಳ, ಅಯ್ಯಣ್ಣ ಕನ್ಯಾಕೋಳೂರ, ಸಣ್ಣ ನಿಂಗಪ್ಪ ನಾಯ್ಕೋಡಿ, ಇಬ್ರಾಹಿಂಸಾಬ ಶಿರವಾಳ, ಶಾಂತಪ್ಪ ಕಟ್ಟಿಮನಿ, ಮಹಾದೇವಪ್ಪ ಸಾಲಿಮನಿ, ಗೌಡಪ್ಪಗೌಡ ಆಲ್ದಾಳ ಉಪಸ್ಥಿತರಿದ್ದರು. ಮಲ್ಲಪ್ಪ ಉಳ್ಳಂಡಗೇರಿ, ವೆಂಕಟೇಶ ಆಲೂರ, ಶಿವಕುಮಾರ ತಳವಾರ, ಈರಗಪ್ಪ ಹೋತಪೇಟ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts