18 C
Bangalore
Friday, December 6, 2019

ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಗದಗ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು.

ಸಂಜೆ 6.30ಕ್ಕೆ ಸರಿಯಾಗಿ ಬಿಎಸ್​ವೈ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಲೇ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿ.ಎಸ್. ಯಡಿಯೂರಪ್ಪ ಅವರಿಗೆ ಜಯಘೊಷ ಹಾಕಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮೋಹನ ಮಾಳಶೆಟ್ಟಿ, ಶ್ರೀಪತಿ ಉಡುಪಿ, ರಾಜು ಕುರಡಗಿ, ಮುಖಂಡರಾದ ಕಾಂತಿಲಾಲ್ ಬನ್ಸಾಲಿ, ಎಂ.ಎಂ. ಹಿರೇಮಠ, ಕಿಶನ್ ಮೇರವಾಡೆ, ಸಂಗಮೇಶ ದುಂದೂರ, ಬಿ.ಎಚ್. ಲದವಾ, ಪ್ರಶಾಂತ ನಾಯ್ಕರ, ಸಿದ್ದು ಪಲ್ಲೇದ, ಅನಿಲ ಅಬ್ಬಿಗೇರಿ, ಅಮರೇಶ ಬೆಟಗೇರಿ, ಮಾಬು ಯಲಿಗಾರ, ಜಯಶ್ರೀ ಉಗಲಾಟದ, ಪದ್ಮಾ ಯಗಪಲ್ಲಿ, ಅಕ್ಕಮ್ಮ ವಸ್ತ್ರದ, ಸಾವಿತ್ರಿ ಪಾಟೀಲ, ಕಮಲಾಕ್ಷಿ ಗೊಂದಿ, ಸಾವಿತ್ರಿ ಪಾಟೀಲ ಮತ್ತಿತರಿದ್ದರು.

ಲಕ್ಷೆ್ಮೕಶ್ವರದಲ್ಲಿ ಬಿಜೆಪಿ ವಿಜಯೋತ್ಸವ

ಲಕ್ಷ್ಮೇಶ್ವರ: ಬಿ.ಎಸ್. ಯಡಿಯೂರಪ್ಪನವರು ಶುಕ್ರವಾರ ಸಂಜೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಪಟ್ಟಣದ ಬಿಜೆಪಿ ನಗರ ಘಟಕದಿಂದ ಕಾರ್ಯಕರ್ತರು ಶ್ರೀ ಸೋಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇದೇ ಸಂದರ್ಭದಲ್ಲಿ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಮಾಜಿ ಸೈನಿಕ ಪಟ್ಟಣದ ಹನುಮಂತಗೌಡ ಶೀಲವಂತರ ಅವರನ್ನು ಸನ್ಮಾನಿಸುವ ಮೂಲಕ ಭಾರತ ಮಾತೆಗೆ ಜೈಘೊಷ ಕೂಗಿದರು. ಬಳಿಕ ಬಿಜೆಪಿ ತಾಲೂಕಾಧ್ಯಕ್ಷ ವಿರುಪಾಕ್ಷಪ್ಪ ಅಣ್ಣಿಗೇರಿ ಮಾತನಾಡಿ, ರಾಜ್ಯದ ರೈತರ, ಬಡವರ, ಸಾಮಾನ್ಯರ ಆಶೋತ್ತರಗಳಿಗೆ ಧ್ವನಿಯಾಗಿರುವ ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಲಿದೆ ಎಂದರು.

ಪಟ್ಟಣದ ಸೇರಿ ತಾಲೂಕಿನ ಶಿಗ್ಲಿ, ಸೂರಣಗಿ, ಬಾಲೇಹೊಸೂರ, ಬಟ್ಟೂರ, ಬಡ್ನಿ, ಅಡರಕಟ್ಟಿ, ಗೊಜನೂರ, ಯಳವತ್ತಿ, ಯತ್ನಳ್ಳಿ, ಕುಂದ್ರಳ್ಳಿ, ಆದ್ರಳ್ಳಿ, ರಾಮಗೇರಿ , ಗೋವನಾಳ, ಬಸಾಪುರ, ಹರದಗಟ್ಟಿ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಸಂಭ್ರಮಾಚರಣೆಯಲ್ಲಿ ಹಿರಿಯರಾದ ಪೂರ್ಣಾಣಿ ಖರಾಟೆ, ಆದಂಸಾಬ ಬಂಕಾಪುರ, ನಗರ ಘಟಕ ಅಧ್ಯಕ್ಷ ಗಂಗಾಧರ ಮೆಣಸಿನಕಾಯಿ, ನಗರ ಬಿಜೆಪಿ ಘಟಕದ ಕಾರ್ಯದರ್ಶಿ ದುಂಡೇಶ ಕೊಟಗಿ ಬಸವರಾಜ ಅರಳಿ, ಕವಿತಾ ಘೊಂಗಡಿ, ಗಿರಿಜಾ ಗಾಂಜಿ, ನಿಂಗಪ್ಪ ಬನ್ನಿ, ಅಶೋಕ ನೀರಾಲೋಟಿ, ಮುತ್ತಣ್ಣ ಚೋಟಗಲ್, ವಿಶ್ವನಾಥ ಖರಾಟೆ, ಶರಣು ಚನ್ನೂರ, ತಾವರೆಪ್ಪ ಲಮಾಣಿ, ಇತರರಿದ್ದರು.

ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಗಜೇಂದ್ರಗಡ: ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿದ್ದರಿಂದ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.

ಬಿಜೆಪಿ ಮುಖಂಡ ರಾಜೇಂದ್ರ ಘೊರ್ಪಡೆ, ಅಶೋಕ ವನ್ನಾಲ ಮಾತನಾಡಿ, ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ರಾಜ್ಯ ರೈತರಿಗೆ, ಬಡವರಿಗೆ ಇನ್ನಷ್ಟು ಅನುಕೂಲವಾಗಲಿದೆ. ಶಾಸಕ ಕಳಕಪ್ಪ ಬಂಡಿ ಅವರು ಸಚಿವರಾಗಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು. ಬಿ.ಎಂ. ಸಜ್ಜನರ, ರಾಜೇಂದ್ರ ಘೊರ್ಪಡೆ, ಬಸವರಾಜ ಕಡಬಲಕಟ್ಟಿ, ಬಸವರಾಜ ಬಂಕದ, ಕನಕಪ್ಪ ಅರಳಿಗಿಡದ, ಸುಮಿತ್ರಾ ತೊಂಡಿಹಾಳ, ಲೀಲಾವತಿ ಸವಣೂರ, ಕೌಸರಬಾನು ಹುನಗುಂದ ಇತರರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...