16 C
Bangalore
Thursday, December 12, 2019

ಬಿಜೆಪಿ ಕುತಂತ್ರದಿಂದ ಕೈ ಬಿಟ್ಟ ಪಾಟೀಲ

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಹಿರೇಕೆರೂರ: ಬಿಜೆಪಿ ಕುತಂತ್ರಕ್ಕೆ ಒಳಗಾಗಿ ಬಿ.ಸಿ. ಪಾಟೀಲ ಕಾಂಗ್ರೆಸ್ ಬಿಟ್ಟು ಹೋಗಿದ್ದಾರೆ. ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಸುಪ್ರೀಂ ಕೋರ್ಟ್ ಅವರಿಗೆ ಸರಿಯಾದ ಬುದ್ಧಿ ಕಲಿಸುತ್ತದೆ ಎಂದು ಹಾವೇರಿ ಲೋಕಸಭೆ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್. ಪಾಟೀಲ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಶನಿವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಮತ ಚಲಾಯಿಸಿದ ಮತದಾರರಿಗೆ ಕೃತಜ್ಞತೆ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಕಾಂಗ್ರೆಸ್ ಮತ್ತಷ್ಟು ಗಟ್ಟಿಯಾಗಿ ಬೆಳೆಯಲು ಎಲ್ಲರ ಸಹಾಯ, ಸಹಕಾರ ಅಗತ್ಯ. ಉಪಚುನಾವಣೆಯಲ್ಲಿ ಪಕ್ಷದ ಪರವಾಗಿ ಯಾರಿಗೆ ಟಿಕೆಟ್ ದೊರೆತರೂ ಎಲ್ಲರೂ ಒಗ್ಗಟ್ಟಿನಿಂದ ಅವರ ಗೆಲುವಿಗೆ ಶ್ರಮಿಸಬೇಕು. ಹಣ, ಅಧಿಕಾರ ಶಾಶ್ವತವಲ್ಲ, ಪ್ರಾಮಾಣಿಕತನಕ್ಕೆ ಬೆಲೆ ಇದ್ದೇ ಇರುತ್ತದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಮಾತನಾಡಿ, ‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ, ಬಿ.ಸಿ. ಪಾಟೀಲ ಕೇವಲ ಹಣ, ಅಧಿಕಾರದ ಆಸೆಗಾಗಿ ಪಕ್ಷ ಬಿಟ್ಟು ಹೋದರು. ಆತುರದ ನಿರ್ಧಾರದಿಂದ ತಪ್ಪು ದಾರಿ ಹಿಡಿದರು. ಇಂತಹ ಸಮಯದಲ್ಲಿ ಯಾರಿಗೂ ಚುನಾವಣೆ ಬೇಡವಾಗಿದೆ. 5 ವರ್ಷ ಪೂರೈಸಿದ ಮೇಲೆ ಯಾವ ನಿರ್ಧಾರ ಬೇಕಾದರೂ ಅವರು ತಗೆದುಕೊಳ್ಳಬಹುದಾಗಿತ್ತು’ ಎಂದರು.

ಮಾಜಿ ಸಚಿವರಾದ ಕೆ.ಬಿ. ಕೋಳಿವಾಡ, ಮನೋಹರ ತಹಸೀಲ್ದಾರ, ಜಿಪಂ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ, ಜಿಪಂ ಮಾಜಿ ಸದಸ್ಯರಾದ ಬಿ.ಎನ್. ಬಣಕಾರ, ಪಿ.ಡಿ. ಬಸನಗೌಡ್ರ, ಮುಖಂಡರಾದ ಎಸ್.ಬಿ. ತಿಪ್ಪಣ್ಣನವರ, ರಮೇಶ ಮಡಿವಾಳರ, ಶೇಖಣ್ಣ ಉಕ್ಕುಂದ ಮತ್ತಿತರರು ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ, ಜಿಪಂ ಸದಸ್ಯರಾದ ಮಹದೇವಕ್ಕ ಗೋಪಕ್ಕಳಿ, ಪ್ರಕಾಶ ಬನ್ನಿಕೋಡ, ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸಗಣ್ಣಿ, ಹನುಮಂತಪ್ಪ ಹಡಗದ ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು. ಜಿಲ್ಲಾ ಅಲ್ಪಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಸಲೀಂ ಮುಲ್ಲಾ, ವಿನಯ ಪಾಟೀಲ ನಿರ್ವಹಿಸಿದರು.

ಪಾಟೀಲ ಆತುರದ ನಿರ್ಧಾರ

ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಾ ಗಾಂಧಿ ಅವರನ್ನು ಹತ್ಯೆಮಾಡಿದ ಗೋಡ್ಸೆ ಅವರ ದೇವಸ್ಥಾನ ನಿರ್ವಿುಸಿ ಪೂಜಿಸುತ್ತಿರುವ ಬಿಜೆಪಿ ಪರವಾಗಿ ಯುವಕರು ಧ್ವನಿ ಎತ್ತುತ್ತಿದ್ದಾರೆ. ಮೋದಿ ಅವರು ಇಂದಿನ ತಯುವಕರಿಗೆ ಏನು ಮೋಡಿ ಮಾಡಿದ್ದಾರೊ ಗೊತ್ತಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇದ್ದ ಮತದಾರರ ಸ್ಥತಿ ಇಂದು ಇಲ್ಲ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಬಿ.ಸಿ. ಪಾಟೀಲ ಅವರು ಪಕ್ಷದ ಬಗ್ಗೆ ನಿಷ್ಠೆ, ನಂಬಿಕೆ, ಪ್ರಾಮಾಣಿಕತನ ಉಳಿಸಿಕೊಳ್ಳಲಿಲ್ಲ, ನಾವು ಯಾರೂ ಅವರಿಗೆ ಸಚಿವ ಸ್ಥಾನ ನೀಡಬಾರದು ಎಂದು ಯಾವತ್ತೂ ಹೇಳಿಲ್ಲ. ಇನ್ನೂ ಸಮಯಾವಕಾಶವಿತ್ತು. ಆದರೆ, ಆತುರದ ನಿರ್ಧಾರ ತಗೆದುಕೊಂಡು ಪಕ್ಷಬಿಟ್ಟು ಹೋದರು’ ಎಂದರು.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...