ಯಾದಗಿರಿ: ಕೇಂದ್ರ ಬಿಜೆಪಿ ಸರ್ಕಾರ ಮುಂಬರುವ ಲೋಕಸಭಾ ಸಭೆ ಚುನಾವಣೆಯನ್ನು ಭಾವನಾತ್ಮಕವಾಗಿ ಚುನಾವಣೆಯಲ್ಲಿ ಗೆಲ್ಲಲು ಮುಂದಾಗಿದೆ ಎಂದು ಅಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಆರೋಪಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿ ಘೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸರ್ಕಾರ ರಾಮನ ಹೇಸರಿನಲ್ಲಿ ರಾಜಕೀಯ ಮಾಡಲು ಮುಂದಾಗಿದೆ ಆದ್ರೆ ನಾನು ಕೇಂದ್ರ ಬಿಜೆಪಿ ಪಕ್ಷದ ನಾಯಕರಿಗೆ ಮನವಿ ಮಾಡಿ ಹೇಳುತ್ತೇನೆ ನೀವು ಅಭಿವೃದ್ಧಿ ಮಾಡಿ ರಾಮ ರಾಜ್ಯವನ್ನು ಸ್ಥಾಪಿಸಲು ಮುಂದಾಗಬೇಕು ಮಾತನಾಡಿದರು.
ಕರ್ನಾಟಕ ರಾಜ್ಯದ ಬಿಜೆಪಿ ನಾಯಕರಿಗೆ ರೈತರು ಎದಿರಿಸುವಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವುದನ್ನು ಬಿಟ್ಟು ದ್ವಜಾದ ಬಗ್ಗೆ ಹೊರಟಕ್ಕೆ ಇಳಿದಿದೆ ಇದು ರಾಜಕೀಯ ಮಾಡಲು ಮುಂದಾಗಿದೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಕುಟುಂಬ ರಾಜಕೀಯ ಮಾಡುತ್ತಿದೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕುಟುಂಬದಲ್ಲಿ ಒಬ್ಬರು ಸಂಸದರು ಇದ್ದಾರೆ ಒಬ್ಬರು ಶಾಸಕರು ಇದ್ದಾರೆ ಮತ್ತು ಬಿಜೆಪಿ ಪಕ್ಷದ ರಾಜ್ಯದ್ಯಕ್ಷರು ಆಗಿದ್ದಾರೆ ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ಏನು ಉತ್ತರಕ್ಕೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ಎಐಸಿಸಿ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಕುಟುಂಬ ರಾಜಕಾರಣ ಮಾಡಿದೆ ಇನ್ನೂ ಜೆಡಿಎಸ್ ಪಕ್ಷ ಅಂತೂ ಸ್ವ ಕುಟುಂಬ ಪಕ್ಷ ಆಗಿದೆ ಎಂದು ಕೂಟಿಕಿದರು.
ಕರ್ನಾಟಕ ಸರ್ಕಾರ ಮಾತು ಎತ್ತಿದರೆ ನಾವು ಕನ್ನಡ ಪರ ಇದ್ದೇವೆ ಎಂದು ಜಂಬಕೊಚ್ಚಿಕೊಳ್ಳುತ್ತಿದೆ ಆದರೆ ಇಲ್ಲಿಯವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿಷ್ಕ್ರಿಯವಾಗಿದೆ ಇಲ್ಲಿಯವರೆಗೂ ಸರ್ಕಾರದ ಅಕಾಡೆಮಿ ಅಧ್ಯಕ್ಷರನ್ನಾಗಲಿ ಸದಸ್ಯರ ನೇಮಿಸಲು ಹಿಂದೆಟು ಆಕುತ್ತಿದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.