16 C
Bangalore
Saturday, December 7, 2019

ಬಿಡುವು ನೀಡಿದ ಮೇಘರಾಜ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹೊನ್ನಾವರ: ತಾಲೂಕು ಹಾಗೂ ಘಟ್ಟದ ಮೇಲ್ಭಾಗದಲ್ಲಿ ಶನಿವಾರ ಮಳೆ ಕಡಿಮೆಯಾಗಿದ್ದು, ಶರಾವತಿ ನದಿ ತೀರದಲ್ಲಿ ನೆರೆ ಇಳಿಮುಖವಾಗಿ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಮನೆಗಳಿಗೆ ನೀರು ನುಗ್ಗಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದವರು ತಮ್ಮ ತಮ್ಮ ಮನೆಗಳತ್ತ ಮುಖ ಮಾಡಿದ್ದಾರೆ.

ಕಳೆದ ಐದಾರು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಲಿಂಗನಮಕ್ಕಿ ಮತ್ತು ಗೇರುಸೊಪ್ಪಾ ಜಲಾಶಯಗಳು ತುಂಬಿ ನೀರನ್ನು ಹೊರ ಬಿಡಲಾಗಿತ್ತು. ಇದರಿಂದ ಶರಾವತಿ ನದಿ ತೀರದಲ್ಲಿ ಪ್ರವಾಹವುಂಟಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು.

ಶನಿವಾರ ಮಳೆ ಕಡಿಮೆಯಾಗುತ್ತಿದ್ದಂತೆ ಜಲಾಶಯದಿಂದ ಬಿಡುವ ನೀರಿನ ಪ್ರಮಾಣವೂ ಗಣನೀಯವಾಗಿ ಕಡಿಮೆಯಾಗಿದೆ.

ನದಿ ತೀರದ ಮನೆಗಳಿಗೆ ನೀರು ನುಗ್ಗಿರುವುದರಿಂದ 10 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿತ್ತು. ಶನಿವಾರ ಅನಿಲಗೋಡ ಪರಿಹಾರ ಕೇಂದ್ರದಲ್ಲಿ ಮಾತ್ರ ಜನರು ಆಶ್ರಯ ಪಡೆದುಕೊಂಡಿದ್ದಾರೆ. ಇನ್ನುಳಿದ ಹೈಗುಂದ, ಹೊಸಾಡ, ಮೂರ್ನಕುಳಿ, ಅಳ್ಳಂಕಿ, ಇಂಡಗುಂಜಿ, ಮಳ್ಳಿಕೇರಿ, ಬೇರೊಳ್ಳಿ, ಕುಳಕೋಡ, ಕಾಸರಕೋಡ ಮಲಬಾರಕೇರಿಯ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದ ಜನರು ತಮ್ಮ ಮನೆಗೆ ತೆರಳಿದ್ದಾರೆ. ನದಿ ತೀರದ ಜನರ ಕೃಷಿ ಭೂಮಿಗಳಲ್ಲಿ ನೀರು ಮತ್ತು ಕೆಸರು ತುಂಬಿಕೊಂಡಿದೆ. ಇದರಿಂದ ಬೆಳೆ ಹಾನಿಯಾಗಿದೆ. ಜನರು ತಮ್ಮ ಮನೆ ಮತ್ತು ಕೃಷಿ ಭೂಮಿ ದುರಸ್ತಿ ಕಾರ್ಯಕ್ಕೆ ಮಂದಾಗಿದ್ದಾರೆ.

ಹಲವು ಮನೆಗಳ ಗೋಡೆ ಕುಸಿತ: ಯಲ್ಲಾಪುರ: ತಾಲೂಕಿನಲ್ಲಿ ಕಳೆದ 3-4 ದಿನಗಳಿಂದ ಮಳೆ ಜೋರಾಗಿದ್ದು, ಶನಿವಾರವೂ ಮುಂದುವರಿದಿದೆ. ಮಳೆಯ ಪರಿಣಾಮ ತಾಲೂಕಿನ ವಿವಿಧೆಡೆ ಮನೆಯ ಮೇಲ್ಛಾವಣಿ, ಗೋಡೆಗಳು ಕುಸಿದು ಹಾನಿ ಉಂಟಾಗಿದೆ.ಕುಂದರಗಿ ಗ್ರಾ.ಪಂ. ವ್ಯಾಪ್ತಿಯ ಭರತನಹಳ್ಳಿಯಲ್ಲಿ ಸುಶೀಲಾ ಕೃಷ್ಣ ಆಚಾರಿ ಹಾಗೂ ಕಿರಣ ಆಂಜನೇಯ ಬೋವಿವಡ್ಡರ್ ಅವರ ಮನೆಯ ಮೇಲ್ಛಾವಣಿ, ಗೋಡೆ ಕುಸಿದು ಹಾನಿಯಾಗಿದೆ. ಯಲ್ಲಾಪುರದ ಗಂಗಾ ನಾರಾಯಣ ಸಿದ್ದಿ ಅವರ ಮನೆಯ ಗೋಡೆ ಕುಸಿದು ಹಾನಿ ಉಂಟಾಗಿದೆ. ಕಣ್ಣಿಗೇರಿ ಗ್ರಾ.ಪಂ. ವ್ಯಾಪ್ತಿಯ ಕೋಳಿಕೇರಿಯ ಪಾಂಡುರಂಗ ಲಕ್ಷ್ಮಣ ಪಾಟೀಲ ಅವರ ಮನೆಯ ಗೋಡೆ ಕುಸಿದಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಹಾನಿ ಅಂದಾಜಿಸಿದ್ದಾರೆ.

ಸಭಾಭವನದಲ್ಲಿ ವಾಸ್ತವ್: ಸಿದ್ದಾಪುರ: ಮಳೆ-ಗಾಳಿಯಿಂದ ತಾಲೂಕಿನ ಸೋವಿನಕೊಪ್ಪ ಗ್ರಾಪಂ ವ್ಯಾಪ್ತಿಯ ಚಪ್ಪರಮನೆಯಲ್ಲಿ ಶನಿವಾರ ಎರಡು ಮನೆ ಕುಸಿದು ಬಿದ್ದಿವೆ. ಚಪ್ಪರಮನೆಯ ಮಾರುತಿ ಮಾರ್ಯ ಹರಿಜನ್ ಹಾಗೂ ರಾಮ ಈರಾ ನಾಯ್ಕ ಅವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ವಾಸ್ತವ್ಯಕ್ಕೆ ತೊಂದರೆ ಉಂಟಾಗಿದೆ. ಮಾರುತಿ ಮಾರ್ಯ ಹರಿಜನ್ ಅವರಿಗೆ ಸ್ಥಳೀಯ ಸಭಾಭವನದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕಂದಾಯ ಅಧಿಕಾರಿ ರವಿಶಂಕರ ಗೌಡರ್ ತಿಳಿಸಿದ್ದಾರೆ.

ಅಪಾಯ ಮಟ್ಟದಲ್ಲಿ ಕಾಳ: ಕಾರವಾರ: ಕಾಳಿ ನದಿಯಲ್ಲಿ ನೀರಿನ ಹರಿವು ಯಥಾಸ್ಥಿತಿಯಲ್ಲಿದ್ದು, ಸೂಪಾ, ಕದ್ರಾ ಮತ್ತು ಕೊಡಸಳ್ಳಿ ಜಲಾಶಯಗಳಿಂದ ಸತತ ನಾಲ್ಕನೇ ದಿನವೂ ನೀರು ಹೊರಬಿಡಲಾಗಿದೆ. ಸೂಪಾ ಜಲಾಶಯಕ್ಕೆ ಶನಿವಾರ 35,575 ಕ್ಯೂಸೆಕ್ ನೀರು ಹರಿದುಬಂದಿದೆ. 42 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಇದರಿಂದಾಗಿ ಕಾಳಿ ನದಿಯ ಇನ್ನುಳಿದ ಡ್ಯಾಮ್ಳಿಗೆ ನೀರು ಹೆಚ್ಚಾಗಿದೆ. ಕೊಡಸಳ್ಳಿ ಅಣೆಕಟ್ಟೆಯಲ್ಲೂ ನೀರು ಹೊರಬಿಡಲಾಗಿದೆ. ಕದ್ರಾ ಜಲಾಶಯದ ನಾಲ್ಕು ಗೇಟ್ ತೆರೆಯಲಾಗಿದ್ದು, 65 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಕಾಳಿ ನದಿ ಅಪಾಯದ ಮಟ್ಟದಲ್ಲಿನ ಹರಿಯುವಿಕೆ ಮುಂದುವರಿದಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...