25.5 C
Bangalore
Monday, December 16, 2019

ಬಿದರಳೆಮ್ಮ ದೇವಿಗೆ ಜಲದಿಗ್ಬಂಧನ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಮುಂಡರಗಿ: ತುಂಗಭದ್ರಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ತಾಲೂಕಿನ ಸಿಂಗಟಾಲೂರ ಬ್ಯಾರೇಜ್​ನಿಂದ ಶುಕ್ರವಾರ 1,79,595 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗಿದೆ. ತಾಲೂಕಿನ ವಿಠಲಾಪುರ ಗ್ರಾಮದ ಹಲವಾರು ಮನೆಗಳು ಶುಕ್ರವಾರ ಜಲಾವೃತಗೊಂಡಿದ್ದು ಸ್ಥಳೀಯರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.

- Advertisement -

ವಿಠಲಾಪುರದ ಹತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ಹೊರ ಹಾಕಲು ಹರಸಾಹಸ ಪಡುತ್ತಿದ್ದಾರೆ. ಮನೆಗಳ ಸುತ್ತಲೂ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದೆ. ಜತೆಗೆ ಹಾವು ಚೇಳುಗಳ ಕಾಟವೂ ಶುರುವಾಗಿದ್ದು ಭಯದ ವಾತಾವರಣ ನಿರ್ವಣವಾಗಿದೆ. ಜನರು ಮನೆಯಿಂದ ಹೊರಗೆ ಬಾರದಂತಹ ಸ್ಥಿತಿ ನಿರ್ವಣವಾಗಿದೆ.

ಬಿದರಳ್ಳಿ ಗ್ರಾಮದ ಬಿದರಳೆಮ್ಮ ದೇವಸ್ಥಾನ, ಗ್ರಂಥಾಲಯ, ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ. ಹಮ್ಮಿಗಿ-ಗುಮ್ಮಗೋಳ ಗ್ರಾಮಕ್ಕೆ ತೆರಳುವ ರಸ್ತೆ ಸಂಪರ್ಕ ಕಡಿದುಕೊಂಡಿದೆ. ಬ್ಯಾರೇಜ್ ಮುಂಭಾಗದ ಹಳೇ ಶಿಂಗಟಾಲೂರ ಗ್ರಾಮದಲ್ಲಿ 16 ಕುಟುಂಬಗಳಿದ್ದು ಆ ಗ್ರಾಮಕ್ಕೆ ತೆರಳುವ ರಸ್ತೆ ಮತ್ತು ಹಳೇ ಬಸ್ ನಿಲ್ದಾಣದ ಕಟ್ಟಡದ ಸುತ್ತಲೂ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದೆ. ನದಿ ಭಾಗದ ಬಹುತೇಕ ಜಮೀನುಗಳು ಜಲಾವೃತವಾಗಿದ್ದರಿಂದ ಭತ್ತ, ಕಬ್ಬು, ಮತ್ತಿತರ ಬೆಳೆಗಳು ನೀರಲ್ಲಿ ಮುಳುಗಿವೆ.

ಶಾಸಕ, ಅಧಿಕಾರಿಗಳ ಪರಿಶೀಲನೆ: ನೆರೆಪೀಡಿತ ವಿಠಲಾಪುರ ಗ್ರಾಮಕ್ಕೆ ಶಾಸಕ ರಾಮಣ್ಣ ಲಮಾಣಿ, ತಹಸೀಲ್ದಾರ್ ಡಾ.ವೆಂಕಟೇಶ ನಾಯಕ, ತಾ.ಪಂ. ಇಒ ಎಸ್.ಎಸ್. ಕಲ್ಮನಿ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪ್ರವಾಹ ಭೀತಿ ಎದುರಿಸುತ್ತಿರುವ ಕುಟುಂಬಕ್ಕೆ ಸರ್ಕಾರಿ ಶಾಲೆಯಲ್ಲಿ ಪರಿಹಾರ ಕೇಂದ್ರ ತೆರೆಯಲು ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಹ ಭೀತಿಗೆ ಒಳಪಡುವ ಕುಟುಂಬ ಸದಸ್ಯರಿಗೆ ಶಾಲೆಯಲ್ಲಿ ಊಟದ ವ್ಯವಸ್ಥೆ ಮಾಡಿಕೊಡುವಂತೆ ಅಕ್ಷರ ದಾಸೋಹ ಅಧಿಕಾರಿ ರಂಜಿತಾ ತಳಗೇರಿ ಅವರಿಗೆ ಸೂಚಿಸಲಾಯಿತು.

ಗ್ರಾಮಸ್ಥರೊಂದಿಗೆ ಸಭೆ: ವಿಠಲಾಪುರ ಗ್ರಾಮದ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ರಾಮಣ್ಣ ಲಮಾಣಿ ಹಾಗೂ ಅಧಿಕಾರಿಗಳು ಗ್ರಾಮಸ್ಥರೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅಳಲು ತೋಡಿಕೊಂಡ ಸಂತ್ರಸ್ತರು, ‘ಸಿಂಗಟಾಲೂರ ಬ್ಯಾರೇಜ್​ನಿಂದ ಗ್ರಾಮವು ಮುಳುಗಡೆಯಾದರೂ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ ಮತ್ತು ಪುನರ್ವಸತಿ ಕಲ್ಪಿಸಿಲ್ಲ. ಈ ಗ್ರಾಮದಲ್ಲಿ ಮೂಲ ಸೌಲಭ್ಯ ಸಹ ದೊರೆಯುತ್ತಿಲ್ಲ. ಹೀಗಾದರೆ ನಾವು ಬದುಕು ಸಾಗಿಸುವುದು ಹೇಗೆ ಎಂದು ಎಂದು ಸಂತ್ರಸ್ತರಾದ ಬಸಮ್ಮ ಸ್ವಾಗಿ, ನೀಲವ್ವ ನೆಗಳೂರ, ಬಸವರಾಜ ಹರಿಜನ, ನಿಂಗರಾಜ ಸ್ವಾಗಿ ಇತರರು ಅಳಲು ತೋಡಿಕೊಂಡರು, ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರಾಮಣ್ಣ ಲಮಾಣಿ, ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ರ್ಚಚಿಸಿ ಒಂದು ವರ್ಷದೊಳಗೆ ಪುನರ್ವಸತಿ ಕಲ್ಪಿಸಿಕೊಡುತ್ತೇವೆ. ವರ್ಷದೊಳಗೆ ಈ ಕೆಲಸ ಮಾಡದಿದ್ದರೆ ನನ್ನನ್ನು ನಿಮ್ಮೂರಿಗೆ ಕಾಲಿಡಲು ಬಿಡಬೇಡಿ ಎಂದರು.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...