22.5 C
Bengaluru
Sunday, January 19, 2020

ಬಿಸಿಲ ಬೇಗೆಗೆ ಜನ ತತ್ತರ!

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಮುಂಡಗೋಡ: ತಾಲೂಕಿನಾದ್ಯಂತ ಬೇಸಿಗೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪದಿಂದ ಜನರು ಮನೆ ಬಿಟ್ಟು ಹೊರಗೆ ಬರಲು ಹಿಂಜರಿಯುತ್ತಿದ್ದಾರೆ.

ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಇದರಿಂದಾಗಿ ಬೆಳಗ್ಗೆ ಹಾಗೂ ಸಂಜೆಯ ವೇಳೆಗೆ ಮಾತ್ರ ಪಟ್ಟಣದ ರಸ್ತೆಯಲ್ಲಿ ಜನರು ಸಂಚರಿಸುವುದು ಗೋಚರಿಸುತ್ತಿದೆ. ಮಧ್ಯಾಹ್ನದ ವೇಳೆಯಲ್ಲಿ ರಸ್ತೆಗಳಲ್ಲಿ ಜನರಿಲ್ಲದೇ ಬಿಕೋ ಎನ್ನುವ ದೃಶ್ಯ ಸಾಮಾನ್ಯವಾಗಿ ಕಂಡು ಬರುತ್ತಿದೆ.

ಹಳ್ಳಿಗಳ ಜನರು ತಮ್ಮ ಕೆಲಸಗಳ ನಿಮಿತ್ತ ಪಟ್ಟಣಕ್ಕೆ ಬೆಳಗ್ಗೆ ಬಂದು ಮಧ್ಯಾಹ್ನದ ಹೊತ್ತಿಗೆ ವಾಪಸಾಗುತ್ತಿದ್ದಾರೆ. ಇನ್ನು, ಉಷ್ಣಾಂಶ ಹೆಚ್ಚಾಗಿರುವುದರಿಂದ ಜನರು ಎಳೆನೀರು, ಹಣ್ಣುಗಳ ಜ್ಯೂಸ್, ಲಿಂಬು ಸೋಡಾದಂತಹ ತಂಪು ಪಾನಿಯಗಳಿಗೆ ಮೊರೆ ಹೋಗುತ್ತಿದ್ದಾರೆ. ಐಸ್ಕ್ರೀಮ್ ಕಲ್ಲಂಗಡಿ, ಪಪ್ಪಾಯಿ ಮತ್ತಿತರ ಹಣ್ಣುಗಳಿಗೆ ಬೇಡಿಕೆ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು ಶನಿವಾರ 36- 38 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಾಮಾನ್ಯವಾಗಿ ಮಾರ್ಚ್​ನಲ್ಲಿ 25- 27 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವುದು ವಾಡಿಕೆ. ಆದರೆ, ಇದೇ ಮೊದಲ ಬಾರಿಗೆ ಮಾರ್ಚ್​ನಲ್ಲಿಯೇ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎನ್ನುತ್ತಾರೆ ಸಾರ್ವಜನಿಕರು.

ಒಟ್ಟಿನಲ್ಲಿ ತಾಲೂಕಿನಲ್ಲಿ ಈ ಬಾರಿಯ ಬೇಸಿಗೆಯ ಬಿಸಿಲಿನ ಧಗೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಯಾವಾಗ ಬೇಸಿಗೆ ಮುಗಿದು ಮಳೆ ಪ್ರಾರಂಭವಾಗುವುದೋ ಎಂದು ಮಳೆಗಾಲವನ್ನು ಕಾತರದಿಂದ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ಬೇಸಿಗೆಯಲ್ಲಿ ವ್ಯಾಪಾರ ಹೆಚ್ಚು. ಆದರೆ, ಈ ಬಾರಿ ಆರಂಭದಲ್ಲಿಯೇ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಕೋಲಿಂಕ್ಸ್ ಕುಡಿಯಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಲಿಂಬು ಸೋಡಾ, ಸೋಡಾ ಶರಬತ್​ನಂತಹ ತಂಪು ಪಾನೀಯಗಳು ಮತ್ತು ನೀರಿನ ಬಾಟಲ್​ಗಳು ಹೆಚ್ಚು ಮಾರಾಟವಾಗುತ್ತಿವೆ.
| ಉಮೇಶ ರಾಯ್ಕರ, ಕೋಲಿಂಕ್ಸ್ ಅಂಗಡಿ ಮಾಲೀಕ

ಅಂಗಡಿಯಲ್ಲಿ ಕುಳಿತಾಗ ಕಾಯ್ದ ರಸ್ತೆಯಿಂದ ಬಿಸಿಗಾಳಿ ಬರುತ್ತದೆ. ಹಗಲಿಗಷ್ಟೇ ಅಲ್ಲದೆ, ರಾತ್ರಿ ಕೂಡಾ ತುಂಬಾ ಸೆಕೆಯಾಗುತ್ತಿದ್ದು ಫ್ಯಾನ್ ಹಾಕಿದರೆ ಸ್ವಲ್ಪ ಹೊತ್ತು ತಂಪು ಗಾಳಿ ಬೀಸಿ, ನಂತರ ಫ್ಯಾನಿನ ಗಾಳಿಯೂ ಬಿಸಿಯಾಗಿರುತ್ತದೆ. ರಾತ್ರಿಯಲ್ಲಿಯೂ ಝುಳದಿಂದಾಗಿ ನಿದ್ರೆ ಬಾರದಂತಾಗಿದೆ.
| ಇಬ್ರಾಹಿಂ ನಿಶಾಂದಾರ ಸ್ಟೇಶನರಿ ಅಂಗಡಿ ಮಾಲೀಕ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...