ಬಾಳೆಹೊನ್ನೂರು: ಬಿ.ಕಣಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರವಿಚಂದ್ರ ಬುಧವಾರ ಅವಿರೋಧ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಎಇಇ ಇಂದ್ರಜಿತ್ ಕಾರ್ಯನಿರ್ವಹಿಸಿದರು. ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ ರವಿಚಂದ್ರ ಮಾತನಾಡಿ, ಗ್ರಾಮವನ್ನು ಸರ್ವತೋಮುಖ ಅಭಿವೃದ್ಧಿಪಡಿಸಲಾಗುವುದು ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಚನ್ನಕೇಶವ್ ಮಾತನಾಡಿ, ಎಲ್ಲ ಸದಸ್ಯರನ್ನೂ ಒಗ್ಗೂಡಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಜಿಪಂ ಮಾಜಿ ಅಧ್ಯಕ್ಷ ಎಚ್.ಎಂ.ಸತೀಶ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಹನೀಫ್, ತಾಪಂ ಮಾಜಿ ಅಧ್ಯಕ್ಷ ಎಂ.ಎಸ್.ಜಯಪ್ರಕಾಶ್, ಜಿಪಂ ಮಾಜಿ ಸದಸ್ಯರಾದ ಮಹಮ್ಮದ್ ಇಫ್ತೆಖಾರ್ ಆದಿಲ್, ಚಂದ್ರಮ್ಮ, ಗ್ರಾಪಂ ಉಪಾಧ್ಯಕ್ಷೆ ರಂಜಿತಾ, ಪ್ರಮುಖರಾದ ಹೇಮಲತಾ, ಎಂ.ಎಸ್.ಅರುಣೇಶ್, ಎಂ.ಜೆ.ಮಹೇಶ್, ಸದಾಶಿವ, ಜಾನಕಿ, ಇಬ್ರಾಹಿಂ ಶಾಫಿ, ಮಹಮ್ಮದ್ ಜುಹೇಬ್, ಶಶಿಕಲಾ, ಜಾನ್ ಡಿಸೋಜಾ ಇತರರಿದ್ದರು.