ಬೀದರ್: ನಗರ ಸ್ವಚ್ಛ, ಸುಂದರವಾಗಿಡಲು ಹಾಗೂ ಸರ್ವತೋಮುಖ ಅಭಿವೃದ್ಧಿಗಾಗಿ ನಗರಸಭೆ ಚುನಾವಣೆಯಲ್ಲಿ ಸ್ಥಳೀಯರು ಬಿಜೆಪಿಗೆ ಬೆಂಬಲಿಸಲಿದ್ದಾರೆ. ಈ ಸಲ ಕಮಲ ಅರಳುವುದು ಗ್ಯಾರಂಟಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ನಗರದ ಎಲ್ಲ ವಾಡ್೯ಗಳಿಗೆ ಕುಡಿವ ನೀರು, ರಸ್ತೆ ಮತ್ತು ಚರಂಡಿ ವ್ಯವಸ್ಥೆಯಾಗಬೇಕು. ಉದ್ಯಾನ ಸೇರಿ ಸಮಗ್ರ ಅಭಿವೃದ್ಧಿ ಆಗಬೇಕಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಮುಖ್ಯವಾಗಿದೆ ಎಂದು ಶುಕ್ರವಾರ ಇಲ್ಲಿ ಹೊರಡಿಸಿದ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಉತ್ತಮ ಕೆಲಸ ನಡೆದಿವೆ. ನಾನು ಸಚಿವನಾದ ನಂತರ ನಗರ ವಿಕಾಸಕ್ಕೆ ಆದ್ಯತೆ ನೀಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗಾಗಿ ನಗರಸಭೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೇರುವ ಅಗತ್ಯವಿದೆ. ಮತದಾರರು ಸಾಥ್ ನೀಡಲು ಕೋರಿದ್ದಾರೆ.