ಬೀರೂರು: ಎಂಟು ತಿಂಗಳಿಂದ ಪುರಸಭೆ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸುತ್ತಿದ್ದ ವನಿತಾ ಮಧು ಬಾವಿಮನೆ ಅವರು ನೀಡಿದ ರಾಜೀನಾಮೆ ಅಂಗೀಕೃತವಾಗಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್ ಹೇಳಿದರು.
ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳ ಪೈಕಿ 9 ಕಾಂಗ್ರೆಸ್, 11 ಬಿಜೆಪಿ, ಜೆಡಿಎಸ್ 2 ಹಾಗೂ ಒಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಮೊದಲ ಅವಧಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾದ ಪರಿಣಾಮ ಜೆಡಿಎಸ್‌ನ ಇಬ್ಬರು ಹಾಗೂ ಒಬ್ಬ ಪಕ್ಷೇತರ ಅಭ್ಯರ್ಥಿಯ ಬೆಂಬಲ ಪಡೆದು ಬಿಜೆಪಿಯಿಂದ ಜಯಗಳಿಸಿದ್ದ ಎಂ.ಪಿ.ಸುದರ್ಶನ್ ಅಧ್ಯಕ್ಷರಾಗಿ ಹಾಗೂ ಮೀನಾಕ್ಷಮ್ಮ ಉಪಾಧ್ಯಕ್ಷರಾಗಿ ಸತತ 30 ತಿಂಗಳ ಅಧಿಕಾರ ಪೂರೈಸಿದ್ದರು.
ನಂತರ ಎರಡನೇ ಅವಧಿಗೆ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಮೀಸಲಾತಿ ಘೋಷಣೆಯಾಗದೆ ವರ್ಷಗಳ ಕಾಲ ಪುರಸಭೆ ಸ್ಥಾನ ಖಾಲಿ ಇತ್ತು. ನಂತರ ಎರಡನೇ ಅವಧಿಗೆ ಸಾಮಾನ್ಯ ವರ್ಗಕ್ಕೆ ಮೀಸಲಾತಿಯಾಗಿದ್ದರಿಂದ ಜೆಡಿಎಸ್‌ನಿಂದ ಗೆಲುವು ಸಾಧಿಸಿದ್ದ ವನಿತಾ ಮಧು ಬಾವಿಮನೆ ಅಧ್ಯಕ್ಷರಾಗಿ ಹಾಗೂ ಎನ್.ಎಂ.ನಾಗರಾಜ್ ಉಪಾಧ್ಯಕ್ಷರಾಗಿ 8 ತಿಂಗಳು ಸೇವೆ ಸಲ್ಲಿಸಿದ್ದರು. ಇದೀಗ ಪಕ್ಷದ ಪ್ರಮುಖರ ಸೂಚನೆಯಂತೆ ರಾಜೀನಾಮೆ ನೀಡಿದ್ದು ಅಧ್ಯಕ್ಷ ಸ್ಥಾನ ತೆರವಾಗಿದೆ.
ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಹಿಂಪಡೆಯಲು 10 ದಿನಗಳ ಕಾಲಾವಕಾಶವಿದ್ದು , ಅದು ಗುರುವಾರಕ್ಕೆ ಅಂತ್ಯಗೊಂಡಿದ್ದು ಅಧ್ಯಕ್ಷರ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದು ತರೀಕೆರೆ ಉಪವಿಭಾಗಾಧಿಕಾರಿ ಕಾಂತರಾಜ್ ತಿಳಿಸಿದರು.
ಬೀರೂರು ಪುರಸಭೆ ಅಧ್ಯಕ್ಷರ ರಾಜೀನಾಮೆ ಅಂಗೀಕೃತ

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar
Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…