28.5 C
Bengaluru
Monday, January 20, 2020

ಬುದ್ಧಿವಂತನ ಬಳಗದಲ್ಲಿ ಭಿನ್ನಾಭಿಪ್ರಾಯ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ಬೆಂಗಳೂರು: ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲೂ ತೊಡಗಿ ಕೊಂಡಿರುವ ನಟ ಉಪೇಂದ್ರ ಇತ್ತೀಚೆಗೆ ‘ಐ ಲವ್ ಯೂ’ ಚಿತ್ರದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದರು. ಮುಂಬರುವ ‘ಬುದ್ಧಿವಂತ 2’ ಸಿನಿಮಾ ಬಗ್ಗೆ ಎಲ್ಲರಲ್ಲೂ ನಿರೀಕ್ಷೆ ಮನೆಮಾಡಿದೆ. ಕೆಲವೇ ದಿನಗಳ ಹಿಂದೆ ಈ ಚಿತ್ರದ ಶೂಟಿಂಗ್ ಆರಂಭಗೊಂಡಿತ್ತು. ಆದರೆ ಈಗ ಕೇಳಿ ಬರುತ್ತಿರುವ ಸುದ್ದಿ ಪ್ರಕಾರ, ‘ಬುದ್ಧಿವಂತ 2’ ತಂಡದಿಂದ ನಿರ್ದೇಶಕ ಮೌರ್ಯ ಹೊರನಡೆದಿದ್ದಾರಂತೆ! ಹೌದು, ಗಾಂಧಿನಗರದಲ್ಲಿ ಇಂಥದ್ದೊಂದು ಗುಸಗುಸು ಹರಿದಾಡುತ್ತಿದೆ. ಉಪೇಂದ್ರ ಮತ್ತು ಮೌರ್ಯ ನಡುವೆ ಸ್ಕ್ರಿಪ್ಟ್ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿರುವುದೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಚಿತ್ರೀಕರಣ ಆರಂಭವಾಗಿ 20 ದಿನ ಕಳೆದ ಬಳಿಕ ನಿರ್ದೇಶಕನ ಸ್ಥಾನದಿಂದ ಮೌರ್ಯ ಹಿಂದೆ ಸರಿದಿರುವುದು ಅಚ್ಚರಿಗೆ ಕಾರಣವಾಗಿದೆ. ಹಾಗಂತ ‘ಬುದ್ಧಿವಂತ 2’ ಕೆಲಸಗಳು ನಿಂತುಹೋಗಲಿದೆಯೇ? ಖಂಡಿತ ಇಲ್ಲ. ಹೊಸ ನಿರ್ದೇಶಕರಿಗೆ ಜವಾಬ್ದಾರಿ ನೀಡುವುದರೊಂದಿಗೆ ಚಿತ್ರೀಕರಣ ಮುಂದುವರಿಸಲು ನಿರ್ವಪಕರು ಯೋಜನೆ ರೂಪಿಸಿದ್ದಾರಂತೆ. ‘ಐ ಲವ್ ಯೂ’ ಚಿತ್ರದಲ್ಲಿ ನಿರ್ದೇಶಕ ಆರ್. ಚಂದ್ರು ಜತೆ ಕೆಲಸ ಮಾಡಿ ಅನುಭವ ಹೊಂದಿರುವ ಜಯರಾಮ್ ಈಗ ‘ಬುದ್ಧಿವಂತ 2’ಗೆ ಆಕ್ಷನ್-ಕಟ್ ಹೇಳಲಿದ್ದಾರೆ. ‘ಕ್ರಿಸ್ಟಲ್ ಪಾರ್ಕ್ ಸಿನಿಮಾಸ್’ ಬ್ಯಾನರ್​ನಲ್ಲಿ ಟಿ.ಆರ್. ಚಂದ್ರಶೇಖರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಉಪೇಂದ್ರ ದ್ವಿಪಾತ್ರದಲ್ಲಿ ಕಾಣಿಸಿ ಕೊಳ್ಳಲಿರುವುದು ‘ಬುದ್ಧಿವಂತ 2’ ಸಿನಿಮಾದ ವಿಶೇಷತೆಗಳಲ್ಲೊಂದು. ಮೊದಲ ಬಾರಿಗೆ ನಟ ಆದಿತ್ಯ ವಿಲನ್ ಫೋಷಾಕು ಧರಿಸಲಿದ್ದಾರೆ. ಸೋನಲ್ ಮೊಂತೆರೋ ಮತ್ತು ಮೇಘನಾ ರಾಜ್ ನಾಯಕಿಯರು. ಭರತ್ ಪರಶುರಾಮನ್ ಛಾಯಾಗ್ರಹಣ ಮತ್ತು ಗುರುಕಿರಣ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...