22.5 C
Bengaluru
Sunday, January 19, 2020

ಬುದ್ಧಿಶಕ್ತಿಗೆ ಚುರುಕು ಮುಟ್ಟಿಸುವ ‘ಪುಟಾಣಿ’

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಹಾನಗಲ್ಲ: ‘ವಿಜಯವಾಣಿ’ಯ ಪುಟಾಣಿ ಪುರವಣಿ ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಪೂರಕವಾದ ಮಾಹಿತಿ ಒದಗಿಸುವುದಲ್ಲದೆ ಬುದ್ಧಿಶಕ್ತಿಗೆ ಚುರುಕು ಮುಟ್ಟಿಸುತ್ತದೆ ಎಂದು ಸಾಹಿತಿ ವಿಜಯಕಾಂತ ಪಾಟೀಲ ಹೇಳಿದರು.

ತಾಲೂಕಿನ ಲಕ್ಷ್ಮೀಪುರ ಗೊಲ್ಲರಬಿಡಾರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಆಟ-ಜೀಜಾಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆ ಉಳಿಸುವಲ್ಲಿ ದಿನಪತ್ರಿಕೆಗಳ ಪಾತ್ರ ಪ್ರಮುಖವಾಗಿದೆ. ಮಕ್ಕಳು ಶಾಲಾ ಅಭ್ಯಾಸದೊಂದಿಗೆ ಚಿತ್ರಕಲೆ ಮತ್ತಿತರ ಹವ್ಯಾಸ ಅಳವಡಿಸಿಕೊಳ್ಳಬೇಕು. ನಾಡಿನ ಕವಿಗಳು, ಪ್ರಕೃತಿ, ಕವನಗಳು, ವಿದ್ಯಾರ್ಥಿಗಳ ಚಿತ್ರಗಳನ್ನು ಪ್ರಕಟಿಸುವ ಮೂಲಕ ವಿದ್ಯಾರ್ಥಿಗಳಿಗೆ ಪುಟಾಣಿ ಪುರವಣಿ ಮೀಸಲಾಗಿದೆ. ಅಜ್ಜ-ಅಜ್ಜಿಯರು ಕಥೆ ಹೇಳುವ ಕಾಲ ಕಳೆದು ಹೋಗುತ್ತಿದೆ. ಪತ್ರಿಕೆಗಳಲ್ಲಿನ ಕಥೆಗಳನ್ನು ಓದಬೇಕು ಎಂದರು.

ಶಿಕ್ಷಣ ಸಮನ್ವಯಾಧಿಕಾರಿ ಡಾ.ಬಿ.ಎಂ. ಬೇವಿನಮರದ ಮಾತನಾಡಿ, ನಿಮ್ಮಲ್ಲಿರುವ ಪ್ರತಿಭೆ ಹೊರತರಲು ಪುಟಾಣಿ ಪುರವಣಿ ಸಹಕಾರಿಯಾಗುತ್ತದೆ ಎಂದರು.

ಕಲಾವಿದ ನಾಮದೇವ ಕಾಗದಗಾರ ಮಾತನಾಡಿ, ಅಕ್ಷರಗಳು ಸುಂದರವಾಗಲು ಮಕ್ಕಳು ಗೀಚಾಟ ಮಾಡಲೇಬೇಕು. ಮಗುವಿನ ಮಾನಸಿಕ ಅಭಿವೃದ್ಧಿಗೆ ಮತ್ತು ಸ್ಮರಣಶಕ್ತಿ ಹೆಚ್ಚಾಗಲು ಸಹಕಾರಿಯಾಗುತ್ತದೆ. ಕಳೆದ ಮೂರು ವರ್ಷಗಳಿಂದ ಪುಟಾಣಿ ಪುರವಣಿಯಲ್ಲಿ ಫನ್​ಟೈಮ್ ಎಂಬ ಶೀರ್ಷಿಕೆಯಲ್ಲಿ ಚಿತ್ರಗಳನ್ನು ರಚಿಸುವುದು, ಚಿತ್ರಗಳಲ್ಲಿನ ವ್ಯತ್ಯಾಸಗಳನ್ನು ಗುರುತಿಸುವುದು ಮುಂತಾದ ವಿವರ ನೀಡಲಾಗುತ್ತಿದೆ. ಬೌದ್ಧಿಕ ಬಲವರ್ಧನೆಗೆ ಪುಟಾಣಿ ಪುರವಣಿ ಓದಿ ಎಂದರು.

ರಂಗ ಕಲಾವಿದ ಅನಂತಪ್ಪ ತಹಶೀಲ್ದಾರ್ ಕಾರ್ಯಕ್ರಮ ಉದ್ಘಾಟಿಸಿದರು. ಲೇಖಕ ಟಿ. ಶಿವಕುಮಾರ, ಸಿಆರ್​ಪಿ ಬಿ.ಬಿ.ಬೇವಿನಮರದ, ಮುಖ್ಯ ಶಿಕ್ಷಕಿ ಶಿಲ್ಪಾ ನಾಯಕ ಉಪಸ್ಥಿತರಿದ್ದರು.

ನಮ್ಮ ಪರಿಸರದಲ್ಲಿನ ಹಲವು ವಿಷಯಗಳು ನಮಗೆ ಗೊತ್ತಿರುವುದಿಲ್ಲ. ಪ್ರಪಂಚದ ಅದ್ಭುತಗಳನ್ನು ಪತ್ರಿಕೆಗಳು ಬೆಳಕಿಗೆ ತರುತ್ತವೆ. ವೈಜ್ಞಾನಿಕ ಸತ್ಯಗಳನ್ನು ತಿಳಿಸುತ್ತವೆ. ಪಠ್ಯದಷ್ಟೇ ಸಾಮಾನ್ಯ ಜ್ಞಾನವೂ ಮುಖ್ಯ. ಅಬ್ರಾಹಂ ಲಿಂಕನ್, ಅಬ್ದುಲ್ ಕಲಾಂ ಸೇರಿ ಮಹಾನ್ ವ್ಯಕ್ತಿಗಳು ಕುಗ್ರಾಮದಿಂದಲೇ ಬಂದವರಾಗಿದ್ದಾರೆ. ಇಲ್ಲಿರುವವರೂ ಮುಂದೊಂದು ದಿನ ಅದೇ ಸಾಲಿಗೆ ಸೇರಲೂಬಹುದು.
| ಎಚ್. ಶ್ರೀನಿವಾಸ, ಬಿಇಒ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...