Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಬೆಳಗಾವಿ ಕನಿಷ್ಠ ಬೆಂಬಲ ಬೆಲೆ ನಾಮಫಲಕ ಎಲ್ಲೆಡೆ ಅಳವಡಿಕೆ

Wednesday, 11.07.2018, 3:00 AM       No Comments

ಬೆಳಗಾವಿ: ಅತಿವೃಷ್ಟಿ, ಅನಾವೃಷ್ಟಿ ಹಾಗೂ ಸೂಕ್ತ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಮುಂಗಾರಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಾಮಫಲಕವನ್ನು ಪ್ರತಿ ಹಳ್ಳಿಯಲ್ಲಿ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ ಎಂದು ಸಂಸದ ಸುರೇಶ ಅಂಗಡಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಂಕಷ್ಟಕ್ಕೆ ಸ್ಪಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಗಾರು ಹಂಗಾಮಿನ 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ರೈತರು ಮಧ್ಯವರ್ತಿಗಳ ಹಿಂಬಾಲಿಸದೆ ನೇರವಾಗಿ ಮಾರಾಟ ಮಾಡಿ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಆಯಾ ಗ್ರಾಪಂ, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಸರ್ಕಾರಿ ಕಚೇರಿಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಬೆಳೆಗಳ ಬೆಂಬಲ ಬೆಲೆ ದರ ಪಟ್ಟಿಯನ್ನು ಅಳವಡಿಸುವಂತೆ ಜಿಲ್ಲಾಡಳಿತ, ಜಿಪಂ, ಕೃಷಿ, ತೋಟಗಾರಿಕೆ ಸೇರಿ ಸಂಬಂಧಿಸಿದ ಎಲ್ಲ ಇಲಾಖೆ ಮುಖ್ಯಸ್ಥರಿಗೆ ಪತ್ರ ಬರೆದು ಸೂಚನೆ ನೀಡಲಾಗುತ್ತಿದೆ. ಈ ವಿಷಯದಲ್ಲಿ ಸಂಬಂಧಿಸಿದ ಅಧಿಕಾರಿಗಳು ನಿರ್ಲಕ್ಷೃ ಮಾಡದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.

ಹೈಬ್ರಿಡ್ ಜೋಳ ಕ್ವಿಂಟಾಲ್‌ಗೆ 2,430 ರೂ., ಸೂರ್ಯಕಾಂತಿ 5,388 ರೂ., ತೊಗರಿ 5,675 ರೂ., ಉದ್ದು 5,600 ರೂ., ಹೆಸರು ಬೇಳೆ 6,975 ರೂ., ಸೋಯಾಬೀನ್ 3999 ರೂ., ನೆಲಗಡಲೆ 4, 890 ರೂ. ಬೆಂಬಲ ಬೆಲೆ ಘೋಷಿಸಲಾಗಿದೆ.

ಕಳೆದ ವರ್ಷ ಭತ್ತ ಕ್ವಿಂಟಲ್‌ಗೆ 1,550 ರೂಪಾಯಿ ಇತ್ತು. ಇದೀಗ ಬೆಂಬಲ ಬೆಲೆಯಿಂದ 1,750 ರೂ.ಆಗಿದೆ. ಶೇ. 12.9 ಹೆಚ್ಚಳ ಆಗಿದೆ. ರಾಗಿಗೆ ಪ್ರತಿ ಕ್ವಿಂಟಾಲ್‌ಗೆ 2,897 ರೂ. ಬೆಂಬಲ ಬೆಲೆ ಘೋಷಿಸಲಾಗಿದ್ದು, ಶೇ. 50 ರಷ್ಟು ಬೆಂಬಲ ಬೆಲೆ ನೀಡಿದೆ. ಹೀಗೆ ಮುಸುಕಿನ ಜೋಳ, ಎಳ್ಳು ಸೇರಿ ಇನ್ನಿತರ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ ಎಂದು ಸಂಸದರು ವಿವರಿಸಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ರಾಜು ಚಿಕ್ಕನಗೌಡರ ಇತರರು ಉಪಸ್ಥಿತರಿದ್ದರು.

ರಾಜ್ಯ ಸರ್ಕಾರವೇ ಅಡ್ಡಿ

ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ಸೇರಿ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿ ದೃಷ್ಟಿಯಿಟ್ಟುಕೊಂಡು ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಕಷ್ಟು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆದರೆ, ರಾಜ್ಯದ ಸಮ್ಮಿಶ್ರ ಸರ್ಕಾರ ಇರುವುದರಿಂದ ಕೇಂದ್ರ ಸರ್ಕಾರದ ಯೋಜನೆಗಳು ಫಲಾನುಭವಿಗಳಿಗೆ ಮುಟ್ಟುತ್ತಿಲ್ಲ. ರಾಜ್ಯ ಸರ್ಕಾರ ತನ್ನ ಯೋಜನೆಗಳ ಪ್ರಚಾರದ ಭರಾಟೆಯಲ್ಲಿ ಕೇಂದ್ರದ ಯೋಜನೆಗಳನ್ನು ನಿರ್ಲಕ್ಷೃ ಮಾಡುತ್ತಿದೆ ಎಂದು ಸಂಸದ ಸುರೇಶ ಅಂಗಡಿ ಆಕ್ರೋಶ ವ್ಯಕ್ತಪಡಿಸಿದರು.

ನೆಹರು-ದೇವೇಗೌಡ ವಂಶದ ಸರ್ಕಾರ

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಬದಲಿಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೆ ಕಬ್ಬಿನ ಬಾಕಿ ಬಿಲ್ ಪಾವತಿ ಸೇರಿ ರೈತರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಆದರೆ, ನೆಹರು ಮತ್ತು ದೇವೇಗೌಡರ ವಂಶದ ಸರ್ಕಾರ ಆಡಳಿತ ನಡೆಸುತ್ತಿರುವುದರಿಂದ ಸಮಸ್ಯೆಗಳು ಜಟಿಲವಾಗುತ್ತಿವೆ. ಸಮ್ಮಿಶ್ರ ಸರ್ಕಾರ ತಮ್ಮ ಕುಟುಂಬದ ರಕ್ಷಣೆಗಾಗಿ ರಾಜ್ಯವನ್ನು ಬಲಿಪಶು ಮಾಡುತ್ತಿದೆ ಎಂದು ಸಂಸದ ಸುರೇಶ ಅಂಗಡಿ ದೂರಿದರು.

ಪಕ್ಷದಿಂದ ಕರ ಪತ್ರ ಹಂಚಿಕೆ

ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದರಿಂದ ಬಿಜೆಪಿಯಿಂದಲೇ ಎಲ್ಲ ಯೋಜನೆಗಳ ಸಮಗ್ರ ಮಾಹಿತಿ ಕುರಿತು ಜನರಿಗೆ ತಿಳಿಸಲು ಕರ ಪತ್ರ ಹಂಚಿಕೆ ಮಾಡಲಾಗುವುದು. ಅವಶ್ಯಬಿದ್ದರೆ ಮನೆ ಮನೆಗೆ ತೆರಳಿ ಯೋಜನೆ ಲಾಭ ತಿಳಿಸಲಾಗುವುದು ಎಂದು ಸಂಸದ ಸುರೇಶ ಅಂಗಡಿ ತಿಳಿಸಿದರು.

Leave a Reply

Your email address will not be published. Required fields are marked *

Back To Top