ಬೆಳಗಾವಿ: ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಳಗಾವಿ: ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಮುಳ್ಳಳ್ಳಿ ಅವರನ್ನು ಕೊಪ್ಪಳ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇವರ ತೆರವಾದ ಸ್ಥಾನಕ್ಕೆ ಕೊಪ್ಪಳ ಜಿಪಂದಲ್ಲಿ ಉಪಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಕೆ. ತೊರವಿ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ)ಯನ್ನಾಗಿ ನೇಮಕ ಮಾಡಲಾಗಿದೆ. ಬೆಳಗಾವಿ ಜಿಪಂದಲ್ಲಿದ್ದ ಯೋಜನಾ ನಿರ್ದೇಶಕರ ಖಾಲಿ ಹುದ್ದೆಗೆ ಚಿಕ್ಕಮಗಳೂರು ಜಿಪಂದಲ್ಲಿ ಉಪಕಾರ್ಯದರ್ಶಿ(ಆಡಳಿತ)ಯಾಗಿದ್ದ ರಾಜಗೋಪಾಲ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.