ಸಂಡೂರು: ತಾಲೂಕಿನ ಹಳೇ ದರೋಜಿ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದ ಹಾನಿಗೀಡಾದ ಭತ್ತದ ಜಮೀನುಗಳಿಗೆ ತಹಸೀಲ್ದಾರ್ ಅನಿಲ್ ಕುಮಾರ್ ಸೋಮವಾರ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ಕೃಷಿ ಹಾಗೂ ಕಂದಾಯ ಇಲಾಖೆಗಳಿಂದ ಬೆಳೆ ನಷ್ಟ ಕುರಿತು ಜಂಟಿ ಸರ್ವೇ ಆರಂಭವಾಗಿದೆ. ಶನಿವಾರ ಸುರಿದ ಆಲಿಕಲ್ಲು ಮಳೆಗೆ 50 ಜನ ರೈತರ 150 ಎಕರೆಗೂ ಹೆಚ್ಚು ಬೆಳೆ ನಾಶವಾಗಿರುವ ಮಾಹಿತಿ ಬಂದಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದು, ವರದಿ ಕೈಸೇರಿದ ಕೂಡಲೇ ಪರಿಹಾರಕ್ಕಾಗಿ ಮೇಲಧಿಕಾರಿಗಳಿಗೆ ಕಳಿಸಿಕೊಡಲಾಗುವುದು ಎಂದರು.