ಬೇಲೂರು ಪುರಸಭೆ ಪ್ರಭಾರ ಅಧ್ಯಕ್ಷೆಗೆ ಸನ್ಮಾನ

blank

ಬೇಲೂರು: ಬೇಲೂರು ಪುರಸಭೆ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಉಷಾ ಸತೀಶ್ ಅವರನ್ನು ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಮತ್ತು ತಂಡ ಗುರುವಾರ ಅಭಿನಂದಿಸಿ ಉತ್ತಮ ಕೆಲಸ ಮಾಡುವಂತೆ ಶುಭ ಹಾರೈಸಿತು.


ಸಿ.ಎನ್.ದಾನಿ ಅವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಉಪಾಧ್ಯಕ್ಷೆ ಉಷಾ ಸತೀಶ್ ಬುಧವಾರ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿ

ಮಾತನಾಡಿದ ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್, ಪುರಸಭೆ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯವಲ್ಲಿ ಕಳೆದ ವರ್ಷ ನಡೆದ ಚುನಾವಣೆಯಲ್ಲಿ ಯಶಸ್ವಿಯಾಗಿತ್ತು. ನಂತರ ಅಧ್ಯಕ್ಷರಾಗಿದ್ದ ಸಿ.ಎನ್.ದಾನಿ ಅವರು ರಾಜೀನಾಮೆ ನೀಡಿದ್ದರಿಂದ ಉಷಾ ಸತೀಶ್ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು, ಅಧಿಕಾರ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಪಟ್ಟಣದ ಜನತೆಗೆ ಮೂಲ ಸೌಲಭ್ಯಗಳನ್ನು ದೊಕಿಸಿಕೊಡಲಿ ಎಂದು ಆಶಿಸಿದರು.


ಪುರಸಭೆ ಮಾಜಿ ಉಪಾಧ್ಯಕ್ಷ ಅರುಣ್‌ಕುಮಾರ್, ಮಾಜಿ ಸದಸ್ಯ ಜುಬೇರ್ ಅಹಮದ್, ತಾಪಂ ಮಾಜಿ ಸದಸ್ಯ ಮಂಜುನಾಥ್, ವೀರಶೈವ ಮಹಾಸಭಾ ಯುವ ಅಧ್ಯಕ್ಷ ಗೆಂಡೇಹಳ್ಳಿ ಚೇತನ್, ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಇತರರು ಇದ್ದರು.

Share This Article

ಕಡಿಮೆ ಸಮಯದಲ್ಲಿ ಮನೆಯಲ್ಲೇ ಮಾಡಿ ರುಚಿಕರ ಆಲೂಪೂರಿ; ಇಲ್ಲಿದೆ ಸುಲಭ ವಿಧಾನ | Recipe

ದಿನ ನಿತ್ಯ ಒಂದೇ ರೀತಿಯ ಬೆಳಗ್ಗಿನ ತಿಂಡಿ ತಿಂದು ಬೇಸರವಾಗಿರುತ್ತದೆ. ಆದರೆ ಏನಾದರೂ ವಿಶೇಷವಾದ ಬ್ರೇಕ್​ಫಾಸ್ಟ್​…

ಉಗುರಿನಲ್ಲಿ ಅಡಗಿದೆ ನಿಮ್ಮ ಆರೋಗ್ಯದ ರಹಸ್ಯ; ಹೇಗೆ ಅಂತೀರಾ.. ಈ ಮಾಹಿತಿ ನೋಡಿ | Health Tips

ಒಬ್ಬ ವ್ಯಕ್ತಿಯನ್ನು ನೋಡುವ ಮೂಲಕ ಅವನ ಬಗ್ಗೆ ಬಹಳಷ್ಟು ಹೇಳಬಹುದು. ಆದರೆ ಉಗುರುಗಳು ನಿಮ್ಮ ಆರೋಗ್ಯದ…

ಬೆಟ್ಟದ ನೆಲ್ಲಿಕಾಯಿ- ಅಲೋವೆರಾ ಕೂದಲಿನ ಆರೈಕೆಗೆ ಯಾವುದು ಬೆಸ್ಟ್​​; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಹುಡುಗನಾಗಲಿ ಅಥವಾ ಹುಡುಗಿಯಾಗಲಿ ಇಬ್ಬರಿಗೂ ತಮ್ಮ ಕೂದಲಿನ ಬಗ್ಗೆ ಹೆಚ್ಚು ಕಾಳಜಿ ಇರುತ್ತದೆ. ಪ್ರಸಕ್ತ ಜೀವನಶೈಲಿ,…