ದ್ವಿಚಕ್ರವಾಹನ​-ಕಾರು ಮುಖಾಮುಖಿ ಡಿಕ್ಕಿ: ಬೈಕ್​ ಸವಾರರಿಬ್ಬರೂ ಸ್ಥಳದಲ್ಲೇ ಸಾವು

ಹಾಸನ: ಬೈಕ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಳೆನರಸೀಪುರದ ಹಳೇಕೋಟೆ-ಹರದನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಸಿಗರನಹಳ್ಳಿ ಗ್ರಾಮದ ಹರೀಶ (25) ಮತ್ತು ಉಮೇಶ(25) ಮೃತರು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಕಾರು ಹಳೇಕೋಟೆ ಕಡೆಯಿಂದ ಬರುತ್ತಿತ್ತು.

ಡಿಕ್ಕಿಯ ರಭಸಕ್ಕೆ ಬೈಕ್​ ಸವಾರರಿಬ್ಬರೂ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *