18 C
Bangalore
Friday, December 6, 2019

ಭಗವದ್ಗೀತಾ ಅಭಿಯಾನ ಉದ್ಘಾಟನೆ 9ರಂದು

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಹುಬ್ಬಳ್ಳಿ: ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯಿಂದ ವಿಜಯನಗರದ ಕೆಂಪಣ್ಣವರ ಕಲ್ಯಾಣಮಂಟಪದಲ್ಲಿ ನ. 9ರಂದು ಸಂಜೆ 4 ಗಂಟೆಗೆ ಶ್ರೀ ಭಗವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೃಂಗೇರಿ ಶ್ರೀ ಶಾರದಾಪೀಠಮ್ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅಭಿಯಾನ ಉದ್ಘಾಟಿಸುವರು. ತಾವು ಸಾನ್ನಿಧ್ಯ ವಹಿಸುವುದಾಗಿ ತಿಳಿಸಿದರು. ಡಿ. 19ರಂದು ಬೆಳಗ್ಗೆ 10.30ಕ್ಕೆ ನಗರದ ನೆಹರು ಮೈದಾನದಲ್ಲಿ ರಾಜ್ಯಮಟ್ಟದ ಭಗವದ್ಗೀತೆಯ 8ನೇ ಅಧ್ಯಾಯದ ಮಹಾಸಮರ್ಪಣೆ ನಡೆಯಲಿದೆ. ಸಾಧು- ಸಂತರು, ಮಠಾಧೀಶರು, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದು, ಲಕ್ಷ ಜನರು ಕೂಡುವ ನಿರೀಕ್ಷೆ ಇದೆ ಎಂದರು.

2007ರಿಂದ ಭಗವದ್ಗೀತಾ ಅಭಿಯಾನ ನಡೆಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಮೊದಲ ಬಾರಿಗೆ ಆರಂಭವಾದ ಅಭಿಯಾನ 10 ವರ್ಷ ಪೂರೈಸಿ 11ನೇ ವರ್ಷಕ್ಕೆ ಕಾಲಿಟ್ಟಿದೆ. ಈ ವರ್ಷದ ಅಭಿಯಾನದ ಮಹಾಸಮರ್ಪಣೆ ಮತ್ತೆ ಹುಬ್ಬಳ್ಳಿಯಲ್ಲಿ ಸಂಪನ್ನಗೊಳ್ಳುತ್ತಿದೆ. ಗೀತಾ ಜಯಂತಿ ಸಂದರ್ಭದಲ್ಲಿ ನಡೆಯುತ್ತಿರುವ ಮಹಾ ಅಭಿಯಾನದಲ್ಲಿ ರಾಜ್ಯದ 30 ಜಿಲ್ಲೆಯ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ಡಿ. 18ರಂದು ಬೆಳಗ್ಗೆ 9 ಗಂಟೆಯಿಂದ ನಗರದ ಹವ್ಯಕ ಭವನದಲ್ಲಿ 18 ಅಧ್ಯಾಯಗಳ ಅಖಂಡ ಭಗವದ್ಗೀತಾ ಪಾರಾಯಣ ನಡೆಯಲಿದೆ. ಸಾವಿರಕ್ಕೂ ಹೆಚ್ಚು ಜನರು ನಡೆಸುವರು. ಈ ಕಾರ್ಯಕ್ರಮ ನಡೆಸಲು ಹಲವು ತಿಂಗಳಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ವಲಯ ಮಟ್ಟದ ಸಮಿತಿಗಳನ್ನು ರಚಿಸಿದ್ದು, ಸಮಿತಿಗಳು ತಮ್ಮ ಭಾಗದಲ್ಲಿ ಶ್ಲೋಕ ಕೇಂದ್ರ, ಉಪನ್ಯಾಸ ಕೇಂದ್ರಗಳನ್ನು ತೆರೆಯುವುದ ಮೂಲಕ ಭಗವದ್ಗೀತೆಯ ಜನ ಜಾಗೃತಿ ಕಾರ್ಯದಲ್ಲಿ ತೊಡಗಿವೆ. ಧಾರವಾಡ ಜಿಲ್ಲೆಯಲ್ಲಿ 21 ವಲಯಗಳನ್ನು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ 10, ಧಾರವಾಡದಲ್ಲಿ 7, ಕುಂದಗೋಳ, ಕಲಘಟಗಿ, ನವಲಗುಂದ, ಅಳ್ನಾವರದಲ್ಲಿ ತಲಾ ಒಂದು ವಲಯಗಳನ್ನು ತೆರೆಯಲಾಗಿದೆ. ಪ್ರತಿಯೊಂದು ವಲಯದಲ್ಲಿ 50 ಶ್ಲೋಕ ಕೇಂದ್ರ, ಉಪನ್ಯಾಸ ಕೇಂದ್ರಗಳನ್ನು ತೆರೆಯಲು ಉದ್ದೇಶಿಸಲಾಗಿದೆ. ಶ್ಲೋಕ ಕೇಂದ್ರಗಳು ಮನೆ, ದೇವಸ್ಥಾನ, ಸಮುದಾಯ ಭವನ ಹಾಗೂ ಶಾಲೆಗಳಲ್ಲಿ ನಡೆಯಲಿವೆ. ಇದಕ್ಕಾಗಿ ಶ್ಲೋಕ ಪಠಣ ಸಮಿತಿ, ಉಪನ್ಯಾಸ ಸಮಿತಿ ರಚಿಸಲಾಗಿದೆ ಎಂದರು.

ಪಾರಾಯಣ ಸಪ್ತಾಹ: ಭಗವದ್ಗೀತಾ ಪಾರಾಯಣ ಸಪ್ತಾಹಗಳು ನ. 9ರಿಂದ ನಾಲ್ಕು ಚಕ್ರಗಳಲ್ಲಿ ನಡೆಯಲಿವೆ. ಒಂದನೇ ಚಕ್ರ ನ. 9ರಿಂದ 16ರವರೆಗೆ, 2ನೇ ಚಕ್ರ 19ರಿಂದ 26ರವರೆಗೆ, 3ನೇ ಚಕ್ರ ನ. 29ರಿಂದ ಡಿ. 6ರವರೆಗೆ, 4ನೇ ಚಕ್ರ ಡಿ. 9ರಿಂದ 16 ನಡೆಯಲಿದೆ. ಮೊದಲ ಚಕ್ರದಲ್ಲಿ ಪ್ರತಿಯೊಂದು ವಲಯದ (21 ವಲಯ) 10 ಶ್ಲೋಕ ಕೇಂದ್ರಗಳಲ್ಲಿ ಗೀತಾ ಸಪ್ತಾಹಗಳು ನಡೆಯಲಿವೆ. ಇದರಂತೆ ಪ್ರತಿಯೊಂದು ಚಕ್ರದಲ್ಲಿ 210 ಶ್ಲೋಕ ಕೇಂದ್ರಗಳಂತೆ ನಾಲ್ಕೂ ಚಕ್ರಗಳು ಸೇರಿ 800 ಶ್ಲೋಕ ಕೇಂದ್ರಗಳನ್ನು ತೆರೆಯುವ ಮೂಲಕ ಗೀತಾ ಸಪ್ತಾಹಗಳನ್ನು ನಡೆಸಲಾಗುವುದು. ಪ್ರತಿಯೊಂದು ಶೊ್ಲೕಕ ಕೇಂದ್ರಗಳಲ್ಲಿ ಕನಿಷ್ಠ 50 ಜನ ಆಸಕ್ತರು ಭಾಗವಹಿಸುವಂತೆ ಪ್ರಯತ್ನಿಸಲಾಗುತ್ತಿದೆ. ಇದನ್ನು ಹೊರತು ಪಡಿಸಿ ಹು-ಧಾ ಅವಳಿನಗರದ ಹಿಂದುಳಿದ ಹಾಗೂ ಕೊಳಚೆ ಪ್ರದೇಶಗಳಲ್ಲಿ ಪ್ರತಿ ಚಕ್ರದಲ್ಲಿ 30ರಂತೆ ಒಟ್ಟು 120 ಕೇಂದ್ರಗಳನ್ನು ತೆರೆದು ಗೀತೆ ಸಂದೇಶ ಮುಟ್ಟುವಂತೆ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ನ. 5ರಂದು ಬೆಳಗ್ಗೆ 11.30ಕ್ಕೆ ಕಾರಾಗೃಹಗಳಿಗೆ ಭೇಟಿ ನೀಡಿ ಭಗವದ್ಗೀತೆ ಸಂದೇಶ ತಿಳಿಸಿ ಕೈದಿಗಳ ಮನಃ ಪರಿವರ್ತಿಸಲು ಉದ್ದೇಶಿಸಿದ್ದೇವೆ. ಡಿ. 1ರಂದು ವಿದ್ಯಾರ್ಥಿಗಳಿಗಾಗಿ ತಾಲೂಕು, ಜಿಲ್ಲೆ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಭಗವದ್ಗೀತೆ ಸಂದೇಶ ತಿಳಿಸಲು ಶ್ಲೋಕ ಪಠಣ, ಭಾಷಣ ಸ್ಪರ್ಧೆ, ರೂಪಕಗಳ ಸ್ಪರ್ಧೆ ಮೂಲಕ ಉತ್ತೇಜಿಸಲು ಚಿಂತನೆ ನಡೆದಿದೆ. ಸ್ಪರ್ಧೆ ನಡೆಸುವುದಕ್ಕಾಗಿ 150ಕ್ಕೂ ಹೆಚ್ಚು ಉಪನ್ಯಾಸಕರಿಗೆ ತರಬೇತಿ ನೀಡಲಾಗಿದೆ. ಮಹಾಸಮರ್ಪಣೆ ದಿನದಂದು ಹತ್ತು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಹೊಂದಲಾಗಿದೆ. ಡಿ.2ರಂದು ಧಾರವಾಡದ ವಕೀಲರ ಸಂಘದ ಸಭಾಭವನದಲ್ಲಿ ಭಗವದ್ಗೀತೆ ಮತ್ತು ಕಾನೂನು ವಿಷಯದ ಕಾರ್ಯಾಗಾರ ನಡೆಯಲಿದೆ. ನ್ಯಾಯಾಧೀಶರು ಮತ್ತು ನ್ಯಾಯವಾದಿಗಳು ಪಾಲ್ಗೊಳ್ಳುವರು ಎಂದರು.

ಜಿಲ್ಲಾ ಸಮಿತಿ ಕಾರ್ಯಾಧ್ಯಕ್ಷ ಎಂ.ಬಿ. ನಾತು, ಅಧ್ಯಕ್ಷ ಜಿತೇಂದ್ರ ಮಜೇಥಿಯಾ, ಕಾರ್ಯದರ್ಶಿ ಸುಭಾಸಸಿಂಗ್ ಜಮಾದಾರ, ಸಂಚಾಲಕ ಎ.ಸಿ. ಗೋಪಾಲ, ಪ್ರಚಾರ ಸಮಿತಿ ಸಂಚಾಲಕ ಮನೋಹರ ಪರ್ವತಿ, ಧಾರವಾಡ ವಲಯಗಳ ಪ್ರಮುಖ ಜಿ.ಆರ್. ಭಟ್, ಪ್ರಧಾನ ಸಂಯೋಜಕರು ಅರವಿಂದ ಮುತಗಿ, ವೀಣಾ ಹೆಗಡೆ ಸುದ್ದಿಗೋಷ್ಠಿಯಲ್ಲಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...