22.5 C
Bengaluru
Sunday, January 19, 2020

ಭದ್ರತೆ ಹಿಂಪಡೆದಿದ್ದಕ್ಕೆ ಡಾ. ಗಿರಡ್ಡಿ ಕುಟುಂಬ ಆಕ್ಷೇಪ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಧಾರವಾಡ: ಹಿರಿಯ ವಿಮರ್ಶಕ ಡಾ. ಗಿರಡ್ಡಿ ಗೋವಿಂದರಾಜ ನಿಧನದ ನಂತರದಲ್ಲಿ ಹಿಂಪಡೆದಿದ್ದ ಭದ್ರತೆಯನ್ನು ಪುನಃ ನೀಡುವಂತೆ ಗಿರಡ್ಡಿ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದಾರೆ.

ಖ್ಯಾತ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯ ನಂತರದಲ್ಲಿ ಹಿರಿಯ ಸಾಹಿತಿಗಳಿಗೆ ಹಾಗೂ ವಿಮರ್ಶಕರಿಗೆ ಭದ್ರತೆ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದ್ದರಿಂದ ಇಲ್ಲಿನ ನವೋದಯನಗರದಲ್ಲಿ ವಾಸವಾಗಿದ್ದ ಡಾ. ಗಿರಡ್ಡಿ ಗೋವಿಂದರಾಜ್ ಅವರಿಗೆ ಸಹ ಭದ್ರತೆ ನೀಡಲಾಗಿತ್ತು.

ಮೇ 11ರಂದು ಡಾ. ಗಿರಡ್ಡಿ ಗೋವಿಂದರಾಜ ನಿಧನದ ಕಾರಣದಿಂದ ಭದ್ರತೆ ಹಿಂಪಡೆಯಲಾಗಿತ್ತು. ಆದರೆ ಇನ್ನೂ ಕೆಲ ದಿನಗಳ ಕಾಲ ಭದ್ರತೆ ನೀಡುವಂತೆ ಅವರ ಪತ್ನಿ ಸರೋಜಾ ಗಿರಡ್ಡಿ ಅವರ ಮನವಿಯ ಮೇರೆಗೆ ಮತ್ತೆ ಭದ್ರತೆ ನೀಡಿ, ರಮ್ಜಾನ್ ಹಬ್ಬದ ಸಂದರ್ಭದಲ್ಲಿ ಹಿಂಪಡೆಯಲಾಗಿದೆ.

ಭದ್ರತೆ ಹಿಂಪಡೆದ ಕಾರಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಗಿರಡ್ಡಿ ಕುಟುಂಬಸ್ಥರು, ನಮಗೆ ಯಾವುದೇ ಮಾಹಿತಿ ನೀಡದೇ ಪೊಲೀಸ್ ಭದ್ರತೆ ಹಿಂಪಡೆಯಲಾಗಿದೆ. ಇನ್ನೂ ಕೆಲ ತಿಂಗಳು ಕಾಲ ಭದ್ರತೆ ನೀಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಒಬ್ಬ ಪುತ್ರ ಅಬ್ಬಿಗೇರಿ ಹಾಗೂ ಇನ್ನೋರ್ವ ಪುತ್ರ ನವನಗರದಲ್ಲಿ ವಾಸವಾಗಿರುತ್ತಾರೆ. ಧಾರವಾಡ ಮನೆಯಲ್ಲಿ ತಾವೊಬ್ಬರೇ ವಾಸವಾಗಿದ್ದು, ರಾತ್ರಿ ಭಯದ ವಾತಾವರಣವಿರುವ ಕಾರಣ ಇನ್ನೂ ನಾಲ್ಕೈದು ತಿಂಗಳು ಕಾಲ ಭದ್ರತೆ ನೀಡಬೇಕು ಎಂಬುದು ಸರೋಜಾ ಅವರ ಮನವಿಯಾಗಿದೆ. ಆದರೆ, ಪೊಲೀಸರು ಮಾತ್ರ ಭದ್ರತೆ ಮುಂದುವರಿಸಲು ನಿರಾಕರಿಸಿದ್ದಾರೆ. ಭದ್ರತೆಯನ್ನು ಡಾ. ಗಿರಡ್ಡಿ ಅವರಿಗೆ ನೀಡಲಾಗಿತ್ತೇ ಹೊರತು, ಅವರ ಮನೆಗೆ ಅಲ್ಲ. ಇದೀಗ ಅವರು ಇಲ್ಲದ ಕಾರಣ ಭದ್ರತೆ ನೀಡುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂಬುದು ಪೊಲೀಸ್ ಆಯಕ್ತರ ವಾದವಾಗಿದೆ.

ನಮ್ಮ ತಾಯಿ ಮನೆಯಲ್ಲಿ ಒಬ್ಬರೇ ಇರುತ್ತಾರೆ. ಈ ಹಿಂದೆ ಮನೆ ಧ್ವಂಸ ಮಾಡುವ ಸುದ್ದಿ ಹಬ್ಬಿತ್ತು. ಈ ವಿಚಾರವೀಗ ನಮ್ಮ ತಾಯಿಯನ್ನು ಕಾಡುತ್ತಿದೆ. ಹೀಗಾಗಿ ಅವರಿಗೆ ಇನ್ನು 5 ತಿಂಗಳಾದರೂ ಭದ್ರತೆ ನೀಡಬೇಕು ಎಂದು ಆಯುಕ್ತರಿಗೆ ಮನವಿ ಮಾಡಲಾಗಿದೆ. ಆದರೆ, ಗೃಹ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಹೇಳುತ್ತಿದ್ದಾರೆ ಎಂದು ಅನ್ನದಾನಿ ಗಿರಡ್ಡಿ ಪ್ರತಿಕ್ರಿಯಿಸಿದ್ದಾರೆ.

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...